ಮಕ್ಕಳು ಕಳ್ಳರೆಂದು ತಿಳಿದು ಅಪರಿಚಿತರ ಮೇಲೆ ಹಲ್ಲೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ

ಧಾರವಾಡಕ್ಕೂ ಮಕ್ಕಳ ಕಳ್ಳರ ವದಂತಿ ಕಾಲಿಟ್ಟಿದ್ದು, ಮನಸೂರ ಗ್ರಾಮದಲ್ಲಿ ಜನ ಗುಂಪು ಸೇರಿದ್ದಾರೆ. ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದ್ದು, ಗ್ರಾಮದ ಶಾಲೆಗೆ ಪೋಷಕರು ಬಂದು ಸೇರಿದ್ದಾರೆ.

ಮಕ್ಕಳು ಕಳ್ಳರೆಂದು ತಿಳಿದು ಅಪರಿಚಿತರ ಮೇಲೆ ಹಲ್ಲೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ
ಮಕ್ಕಳು ಕಳ್ಳರೆಂದು ತಿಳಿದು ಅಪರಿಚಿತರ ಮೇಲೆ ಹಲ್ಲೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 13, 2022 | 8:15 PM

ಬೆಳಗಾವಿ: ಅಪರಿಚಿತರನ್ನ ಮಕ್ಕಳು ಕಳ್ಳರೆಂದು ತಿಳಿದು ಮೂರು ದಿನಗಳಲ್ಲಿ ಮೂರು ಕಡೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಪ್ಲಾಸ್ಟಿಕ್ ಕೊಡ, ಬಕೆಟ್ ಸೇರಿದಂತೆ ದಿನ ಬಳಕೆ ವಸ್ತು ಮಾರಾಟ ಮಾಡುವವರನ್ನು ಗ್ರಾಮಸ್ಥರು ಥಳಿಸಿದ್ದಾರೆ. ಕೌಜಲಗಿ ಗ್ರಾಮದಲ್ಲಿ ನಾಗಾ ಸಾಧುಗಳ ಮೇಲೆಯೂ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ. ಮಕ್ಕಳನ್ನ ಕದ್ದುಕೊಂಡು ಹೋಗುತ್ತಿದ್ದಾರೆ ಅಂತಾ ಹಲ್ಲೆ ಮಾಡಲಾಗಿದೆ. ಮೂರು ಪ್ರಕರಣದಲ್ಲಿ ಪರಿಶೀಲನೆ ನಡೆಸಿ ಅವರ ಐಡಿ ಕಾರ್ಡ್ ಮತ್ತು ಉದ್ಯೋಗ ಆಧಾರದ ಮೇಲೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಈ ಕುರಿತು ಯಾವುದೇ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ. ಮಕ್ಕಳು ಕಳ್ಳರೆಂದು ಸುಳ್ಳು ಸುದ್ದಿ ಹರಡಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಸಂಜೀವ ಪಾಟೀಲ್ ಮಾಹಿತಿ ನೀಡಿದರು. ವಾಟ್ಸಪ್​ನಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಧಾರವಾಡಕ್ಕೂ ಕಾಲಿಟ್ಟ ಮಕ್ಕಳ ಕಳ್ಳರ ವದಂತಿ

ಧಾರವಾಡ: ಧಾರವಾಡಕ್ಕೂ ಮಕ್ಕಳ ಕಳ್ಳರ ವದಂತಿ ಕಾಲಿಟ್ಟಿದ್ದು, ಮನಸೂರ ಗ್ರಾಮದಲ್ಲಿ ಜನ ಗುಂಪು ಸೇರಿದ್ದಾರೆ. ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದ್ದು, ಗ್ರಾಮದ ಶಾಲೆಗೆ ಪೋಷಕರು ಬಂದು ಸೇರಿದ್ದಾರೆ. ಬಾಲಕನಿಗೆ ಬೈಕ್ ಮೇಲೆ ಶಾಲೆಗೆ ಬಿಡುವುದಾಗಿ ಇಬ್ಬರು ಹೇಳಿದ್ದು, ಬೈಕ್ ಮೇಲಿದ್ದವರನ್ನು ನೋಡಿ ಬಾಲಕ ಓಡಿ ಹೋಗಿದ್ದಾನೆ. ನಾಲ್ಕು ದಿನಗಳ ಹಿಂದೆ ಘಟನೆ ನಡೆದಿದೆ. ಘಟನೆ ಹಿನ್ನೆಲೆ ಪೋಷಕರು ಶಾಲೆಗೆ ಬಂದಿದ್ದು, ಶಿಕ್ಷಕರ ಜೊತೆ ಗ್ರಾಮಸ್ಥರು ಚರ್ಚೆ ಮಾಡಿದರು. ಪೊಲೀಸರಿಗೆ ದೂರು ಕೊಡಲು ಒತ್ತಾಯಿಸಲಾಯಿತು. ಪೋಷಕರ ಒತ್ತಾಯಕ್ಕೆ ಮಣಿದ ಶಿಕ್ಷಕರು ದೂರು ಕೊಡಲು ಮುಂದಾದರು.

ಅಬ್ಬಿನಹೊಳೆ ಗ್ರಾಮದ ಕೆರೆಯಲ್ಲಿ ವ್ಯಕ್ತಿಯ ಶವಪತ್ತೆ

ಚಿತ್ರದುರ್ಗ: ಹಿರಿಯೂರು ತಾಲೂಕಿನ ಅಬ್ಬಿನಹೊಳೆ ಗ್ರಾಮದಲ್ಲಿ ಮಧ್ಯಾಹ್ನ ಎಮ್ಮೆ ಮೇಯಿಸಲು ಹೋಗಿದ್ದಾಗ ಆಕಸ್ಮಿಕವಾಗಿ ಕೆರೆ ನೀರಿಗೆ ಬಿದ್ದಿದ್ದ ಅಜಯ್‌(30) ಮೃತದೇಹ ಪತ್ತೆಯಾಗಿದೆ. ಗ್ರಾಮಸ್ಥರ ಸಹಾಯದಿಂದ ಕೆರೆ ನೀರಿನಿಂದ  ಪೊಲೀಸರು ಮೃತದೇಹ ಹೊರತೆಗೆದಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಉಣಕಲ್ ಕೆರೆಗೆ ಬಿದ್ದು ಯುವಕ ಆತ್ಮಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನ ಗುರುತು ಪತ್ತೆಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡು ಯುವಕನ ಶವ ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿದ್ಯಾನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ