AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯನಿರತ ಕರ್ನಾಟಕದ ಯೋಧ ಉತ್ತರಪ್ರದೇಶದಲ್ಲಿ ನಿಧನ; ಪಾರ್ಥಿವ ಶರೀರ ಬುಧವಾರ ಸ್ವಗ್ರಾಮಕ್ಕೆ

ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಬಂದೋಬಸ್ತಗಾಗಿ ಸೇವಾನಿರತರಾಗಿದ್ದರು. ಆಕಸ್ಮಿಕವಾಗಿ ಸೋಮವಾರ ಬೆಳಿಗ್ಗೆ ಅಸ್ವಸ್ಥತೆ ಉಂಟಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಯೋಧ ನವನಾಥ್ ಸಾವನ್ನಪ್ಪಿದ್ದಾರೆ.

ಕರ್ತವ್ಯನಿರತ ಕರ್ನಾಟಕದ ಯೋಧ ಉತ್ತರಪ್ರದೇಶದಲ್ಲಿ ನಿಧನ; ಪಾರ್ಥಿವ ಶರೀರ ಬುಧವಾರ ಸ್ವಗ್ರಾಮಕ್ಕೆ
CISF ನ ಯೋಧ ನವನಾಥ ಅಪ್ಪಾ ದಿವಟೆ
TV9 Web
| Edited By: |

Updated on:Mar 09, 2022 | 3:55 PM

Share

ಚಿಕ್ಕೋಡಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕರ್ನಾಟಕ ರಾಜ್ಯದ ಯೋಧ ಒಬ್ಬರು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಉತ್ತರಪ್ರದೇಶದಲ್ಲಿ ಕರ್ನಾಟಕ ರಾಜ್ಯದ ಯೋಧ ಸಾವನ್ನಪ್ಪಿದ್ದಾರೆ. CISF ನ ಯೋಧ ನವನಾಥ ಅಪ್ಪಾ ದಿವಟೆ (30) ಮೃತ ದುರ್ದೈವಿ. ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕುರ್ಲಿ ಗ್ರಾಮದ ನಿವಾಸಿ, ದಿಢೀರ್ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಉತ್ತರಪ್ರದೇಶದಲ್ಲಿ ಕರ್ತವ್ಯನಿರತ ಯೋಧ ಸೋಮವಾರ ಸಾವನ್ನಪ್ಪಿದ್ದಾರೆ. ಕಳೆದ 10 ವರ್ಷಗಳಿಂದ ಭಾರತೀಯ ಸೈನ್ಯದಳದ ಸಿಐಎಸ್ಎಫ್‍ನಲ್ಲಿ ಯೋಧನಾಗಿ ಮೃತ ನವನಾಥ ಸೇವೆ ಸಲ್ಲಿಸಿದ್ದರು. ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಬಂದೋಬಸ್ತಗಾಗಿ ಸೇವಾನಿರತರಾಗಿದ್ದರು. ಆಕಸ್ಮಿಕವಾಗಿ ಸೋಮವಾರ ಬೆಳಿಗ್ಗೆ ಅಸ್ವಸ್ಥತೆ ಉಂಟಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಯೋಧ ನವನಾಥ್ ಸಾವನ್ನಪ್ಪಿದ್ದಾರೆ. ಯೋಧನ ಪಾರ್ಥಿವ ಶರೀರ ಇಂದು ಕುರ್ಲಿ ಗ್ರಾಮಕ್ಕೆ ತಲುಪಲಿದೆ.

ಇದನ್ನೂ ಓದಿ: ಮಾನಸಿಕ ಖಿನ್ನತೆ: ಐವರ ಮೇಲೆ ಗುಂಡಿನ ದಾಳಿ ಮಾಡಿ ತಾನೂ ಹತನಾದ ಬೆಳಗಾವಿಯ BSF ಯೋಧ

ಇದನ್ನೂ ಓದಿ: ‘ಮೃತ ಯೋಧ ಅಲ್ತಾಫ್​ಗೆ ಪರಿಹಾರ ಘೋಷಿಸಿ; ಹರ್ಷನ ಕುಟುಂಬಕ್ಕೆ 25 ಲಕ್ಷ ರೂ. ಕೊಡ್ತೀರಾ ಸೈನಿಕನಿಗೆ ಯಾಕೆ ಕೊಡಲ್ಲ?’

Published On - 3:55 pm, Wed, 9 March 22

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ