Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದಾಯಗಳ ನಡುವೆ ಘರ್ಷಣೆ, ಕಲ್ಲು ತೂರಾಟ: ಬೆಳಗಾವಿ ಬೆಕ್ಕೇರಿ ಗ್ರಾಮದಲ್ಲಿ ಹೈ ಅಲರ್ಟ್

ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿ ಅದ್ದೂರಿಯಾಗಿ ಹೋಳಿ ಹಬ್ಬ ಆಚರಣೆ ಮಾಡಿದ್ದಾರೆ. ಇದೇ ಹೋಳಿ ಕುರಿತು ಓರ್ವ ಯುವಕ ವಾಟ್ಸಾಪ್​ ಸ್ಟೇಟಸೊಂದನ್ನು ಹಾಕಿಕೊಂಡಿದ್ದಾನೆ. ಅದರಲ್ಲಿ ಅಂಬೇಡ್ಕರ್ ಕುರಿತು ಕೂಡ ಬರೆದು ಹಾಕಿದ್ದು, ಬೇರೊಂದು ಸಮುದಾಯದ ಯುವಕರನ್ನು ಕೆರಳಿಸುವಂತೆ ಮಾಡಿದೆ. ಇದರಿಂದ ಇಂದು ಇಡೀ ಗ್ರಾಮದಲ್ಲಿ ನಡೆಯಬಾರದ ಘಟನೆ ನಡೆದು ಹೋಗಿದೆ. ಆಗಿದ್ದೇನು ಎಂಬ ಮಾಹಿತಿ ಇಲ್ಲಿದೆ.

ಸಮುದಾಯಗಳ ನಡುವೆ ಘರ್ಷಣೆ, ಕಲ್ಲು ತೂರಾಟ: ಬೆಳಗಾವಿ ಬೆಕ್ಕೇರಿ ಗ್ರಾಮದಲ್ಲಿ ಹೈ ಅಲರ್ಟ್
ಬೆಕ್ಕೇರಿ ಗ್ರಾಮದಲ್ಲಿ ಪ್ರತಿಭಟನಾನಿರತ ಯುವಕರು
Follow us
Sahadev Mane
| Updated By: Ganapathi Sharma

Updated on:Mar 18, 2025 | 8:23 AM

ಬೆಳಗಾವಿ, ಮಾರ್ಚ್ 18: ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮ (Bekkeri Village) ಜನ ಭರ್ಜರಿಯಾಗಿ ಹೋಳಿ ಆಚರಿಸಿ ಕುಣಿದು ಕುಪ್ಪಳಿಸಿ ಮನೆಗೆ ತೆರಳಿದ್ದರು. ಇದಾದ ಕೆಲ ಹೊತ್ತಿನಲ್ಲೇ ಯುವಕನೊಬ್ಬ ವಾಟ್ಸಾಪ್‌ನಲ್ಲಿ ಅಂಬೇಡ್ಕರ್ ಕುರಿತು ಸ್ಟೇಟಸ್ ಹಾಕಿಕೊಂಡಿದ್ದಾನೆ. ಈ ವಿಚಾರಕ್ಕೆ ಎರಡು ಸಮುದಾಯದ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಸ್ಟೇಟಸ್ ಹಾಕಿ ಕೊಂಡಿದ್ದ ಯುವಕ ಮತ್ತಷ್ಟು ಯುವಕರನ್ನು ಕರೆದುಕೊಂಡು ಬಂದು ಅಂಬೇಡ್ಕರ್ ಪ್ರತಿಮೆ ಸುತ್ತ ಹಾಕಲಾಗಿದ್ದ ಕಾಂಪೌಂಡ್ ಬೀಳಿಸಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಅಂಬೇಡ್ಕರ್ ಕಾಲೋನಿಯ ಜನರು ಹಾಗೂ ಬೇರೊಂದು ಸಮುದಾಯದ ಜನರ ನಡುವೆ ಕಲ್ಲು ತೂರಾಟ ನಡೆದಿದೆ.

ಕಲ್ಲು ತೂರಾಟದಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸಿ ಇಡೀ ಗ್ರಾಮವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಬೆಳಗಾವಿಯಿಂದ ಎರಡು ಡಿಆರ್ ತುಕಡಿ ಕೂಡ ರವಾನಿಸಲಾಗಿದೆ. ಗಲಾಟೆ ಹತೋಟಿಗೆ ಬಂದಿದ್ದರೂ ಬೂದಿ ಮುಚ್ಚಿದ ಕೆಂಡದಂತ ಪರಿಸ್ಥಿತಿ ಗ್ರಾಮದಲ್ಲಿದೆ. ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ನೈತಿಕ ಪೊಲೀಸ್​ಗಿರಿ ಆರೋಪ, ನಾಲ್ವರ ಬಂಧನ

ಬೆಳಗಾವಿ ಪ್ರದೇಶದಲ್ಲಿ ನೈತಿಕ ಪೊಲೀಸ್‌ಗಿರಿಯ ಘಟನೆಗಳು ಹೆಚ್ಚುತ್ತಿರುವ ಆರೋಪಗಳ ನಡುವೆ, ಬೇರೆ ಸಮುದಾಯದ ಹುಡುಗಿಯೊಂದಿಗೆ ಮಾತನಾಡಿದ ಯುವಕನ ಮೇಲೆ ಆರು ಜನರ ಗುಂಪೊಂದು ಹಲ್ಲೆ ನಡೆಸಿದೆ. ಅಲ್ಲಾವುದ್ದೀನ್ ಪೀರ್ಜಾದೆ ಎಂಬ ಸಂತ್ರಸ್ತನ ಮೇಲೆ, ತಮ್ಮ ಸಮುದಾಯದ ಹುಡುಗಿಯೊಂದಿಗೆ ಮಾತನಾಡಿದ್ದಕ್ಕಾಗಿ ಪ್ರಶ್ನಿಸಿದ ಯುವಕರ ಗುಂಪೊಂದು ಹಲ್ಲೆ ನಡೆಸಿದೆ. ಪೊಲೀಸರ ಪ್ರಕಾರ, ಪೀರ್ಜಾದೆ ಹರಿದ ಬಟ್ಟೆಗಳೊಂದಿಗೆ ಪೊಲೀಸ್ ಠಾಣೆಗೆ ಧಾವಿಸಿ ಆರು ದಾಳಿಕೋರರ ವಿರುದ್ಧ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ನಂತರ ತ್ವರಿತವಾಗಿ ಕಾರ್ಯಪ್ರವೃತ್ತರಾದ ಪೊಲೀಸರು ಆರು ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಇದನ್ನೂ ಓದಿ
Image
ಇನ್ಸ್ಟಾಗ್ರಾಮ್ ಸುಂದ್ರಿ ಜತೆ ಹೋಗಿದ್ದವ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
Image
ಬೆಚ್ಚಿಬೀಳಿಸಿದ್ದ ಭೀಕರ ಕೊಲೆ: 31 ಬಾರಿ ಇರಿದು ಕೊಂದವರು ಸಿಕ್ಕಿಬಿದ್ದರು
Image
ಪ್ರೀತ್ಸೇ...ಪ್ರೀತ್ಸೇ ಎಂದು ಬಾಲಕಿಯನ್ನು ಬಲಿ ಪಡೆದ ಪಾಗಲ್ ಪ್ರೇಮಿ:
Image
ಸ್ನೇಹಿತರಿಂದಲೇ ಗೆಳೆಯನ ಹತ್ಯೆ:ತಲೆ ಮೇಲೆ ಕಲ್ಲೆತ್ತಿ ಹಾಕುವ ದೃಶ್ಯ ಸೆರೆ

ಇದನ್ನೂ ಓದಿ: ಪ್ರೀತ್ಸೇ…ಪ್ರೀತ್ಸೇ ಎಂದು ಬಾಲಕಿಯನ್ನು ಬಲಿ ಪಡೆದ ಪಾಗಲ್ ಪ್ರೇಮಿ

ಬಂಧಿತರನ್ನು ಸಾವ್ಗಾಂವ್ ಮೂಲದ ಸಂತೋಷ್ ಜಾಧವ್, ಸುದೇಶ್ ಪಾಟೀಲ್ ಮತ್ತು ಅಂಗೋಲ್ ಪ್ರದೇಶದ ಸುಮಿತ್ ಮೋರ್ ಮತ್ತು ಜಯ್ ಇಂಚಲ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಇನ್ನಿಬ್ಬರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 am, Tue, 18 March 25

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ