ಸಚಿವ ಉಮೇಶ್ ಕತ್ತಿ ವಿಧಿವಶ: ಬುಧವಾರ ಬೆಳಗಾವಿಯ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ
ಸಚಿವ ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಎಂದು ಘೋಷಿಸಿದರು.
ಬೆಳಗಾವಿ: ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ(61)(Umesh Katti) ವಿಧಿವಶ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಆದೇಶಿಸಿದ್ದಾರೆ.
ಸಚಿವ ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಬಾಗೇವಾಡಿಗೆ ಕೊಂಡೊಯ್ದು 5 ಗಂಟೆಗೆ ಅವರ ತೋಟದಲ್ಲಿ ಅಂತಿಮ ವಿಧಿ ವಿಧಾನ ನಡೆಸಲಾಗುತ್ತೆ. ಸಕಲ ಸರ್ಕಾರಿ ಗೌರವಗಳನ್ನ ನೀಡಲು ನಿರ್ಧರಿಸಿದ್ದೇವೆ. ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಎಂದು ಘೋಷಿಸಿದರು.
ಅರಣ್ಯ ಸಚಿವ ಉಮೇಶ್ ಕತ್ತಿ ಹೃಯಯಾಘಾತದಿಂದ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೊನ್ನೆ ಬೆಳಗಾವಿಯಿಂದ ಬೆಂಗಳೂರಿಗೆ ಹೋಗಿದ್ದ ಉಮೇಶ್ ಕತ್ತಿ, ನಿನ್ನೆ(ಸೆಪ್ಟೆಂಬರ್ 07) ರಾತ್ರಿ 10ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿದ್ದಾಗಲೇ ಬಾತ್ ರೂಮ್ನಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ ತೀವ್ರ ಹೃದಯಾಘಾತ ಆಗಿದ್ರಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.
ಕುಟುಂಬಸ್ಥರ ಕಣ್ಣೀರು
ಇನ್ನೂ ಉಮೇಶ್ ಕತ್ತಿ ಸಾವಿನ ಸುದ್ದಿ ಕೇಳಿ ಬೆಂಬಲಿಗರು, ಅಭಿಮಾನಿಗಳು ಮತ್ತು ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದತ್ತ ಬೆಂಬಲಿಗರು ಆಗಮಿಸಿದ್ದಾರೆ. ಉಮೇಶ್ ಕತ್ತಿ ಅವರ ಅಗಲಿಕೆಯನ್ನು ನಂಬಲಾಗದೆ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ.
ಬೆಂಗಳೂರಿನಿಂದ ಬೆಳಗ್ಗೆ ಒಂಬತ್ತು ಗಂಟೆಗೆ ಬೆಳಗಾವಿಗೆ ಉಮೇಶ್ ಕತ್ತಿ ಮೃತದೇಹ ಆಗಮಿಸಲಿದೆ. ಒಂಬತ್ತು ಗಂಟೆಯಿಂದ 10.30ರ ವರೆಗೆ ಶಿವಬಸವನಗರದ ನಿವಾಸದ ಎದುರು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 10.30ಕ್ಕೆ ಬೆಳಗಾವಿಯಿಂದ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಎದುರು ಅಂತಿಮ ದರ್ಶನ. ಬಳಿಕ 12ಗಂಟೆಗೆ ಸ್ವಗ್ರಾಮ ಬೆಲ್ಲದ ಬಾಗೇವಾಡಿ ಗ್ರಾಮಕ್ಕೆ ಮೃತದೇಹ ಶಿಪ್ಟ್ ಮಾಡಲಾಗುತ್ತೆ. 12ರಿಂದ ಸಂಜೆ ಐದು ಗಂಟೆ ವರೆಗೂ ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ. ಐದು ಗಂಟೆಗೆ ಉಮೇಶ್ ಕತ್ತಿಯವರ ಜಮೀನಿನಲ್ಲಿ ತಂದೆ ತಾಯಿಯ ಸಮಾಧಿ ಪಕ್ಕದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
Published On - 7:03 am, Wed, 7 September 22