ಬೊಮ್ಮಾಯಿ ಸರ್ಕಾರದ ಕೊನೆಯ ಅಧಿವೇಶನ ಬೆಳಗಾವಿಯಲ್ಲಿ: ಭರದ ಸಿದ್ದತೆ, ಸ್ಪೀಕರ್ ಕಾಗೇರಿ ಖುದ್ದು ಭೇಟಿ, ಪರಿಶೀಲನೆ

ಬೆಂಗಳೂರು ಭೂಸುಧಾರಣೆ ಕಾಯ್ದೆ, ಕನ್ನಡ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆಯಾಗಿವೆ. ಚಳಿಗಾಲ ಅಧಿವೇಶನ ವೇಳೆ ಚರ್ಚೆ ಮಾಡಿ, ಅಂಗೀಕಾರಕ್ಕೆ ಕ್ರಮ. ಗಡಿ ಪ್ರದೇಶ ಅಭಿವೃದ್ಧಿ ವಿಧೇಯಕ ಸೇರಿ ಈ ಅಧಿವೇಶನದಲ್ಲಿ 6 ಮಸೂದೆ ಮಂಡಿಸಲಾಗುವುದು.

ಬೊಮ್ಮಾಯಿ ಸರ್ಕಾರದ ಕೊನೆಯ ಅಧಿವೇಶನ ಬೆಳಗಾವಿಯಲ್ಲಿ: ಭರದ ಸಿದ್ದತೆ, ಸ್ಪೀಕರ್ ಕಾಗೇರಿ ಖುದ್ದು ಭೇಟಿ, ಪರಿಶೀಲನೆ
ಬೊಮ್ಮಾಯಿ ಸರ್ಕಾರದ ಕೊನೆಯ ಅಧಿವೇಶನ ಬೆಳಗಾವಿಯಲ್ಲಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 12, 2022 | 8:45 PM

ಡಿಸೆಂಬರ್ 19ರಿಂದ 10 ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನಕ್ಕೆ (Belagavi legislative winter session) ಭರದ ಸಿದ್ದತೆ ನಡೆದಿದೆ. ಖುದ್ದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಇಂದು ಸೋಮವಾರ ಸುವರ್ಣಸೌಧಕ್ಕೆ (Suvarna Vidhana Soudha) ಭೇಟಿ ನೀಡಿ ಸಿದ್ದತೆ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಇನ್ನು ವರ್ಷಕ್ಕೊಮ್ಮೆ ಮಾತ್ರ ನೆನಪಾಗುವ ಸುವರ್ಣಸೌಧದ ಸ್ಥಿತಿ ಕಂಡ್ರೇ ಅಯ್ಯೋ ಪಾಪ ಅನಿಸುತ್ತೆ. ಸೌಧಕ್ಕೆ ಪಾಚಿ ಕಟ್ಟಿ ಕಂದು ಬಣ್ಣಕ್ಕೆ ತಿರುಗಿದ್ರೂ ಅಧಿಕಾರಿಗಳು ಮಾತ್ರ ತಿರುಗಿ ನೋಡುತ್ತಿಲ್ಲ. ಅಷ್ಟಕ್ಕೂ ಬೆಳಗಾವಿಯಲ್ಲಿ ಹೇಗಿದೆ ಅಧಿವೇಶನಕ್ಕೆ ಸಿದ್ದತೆ? ಸ್ಪಟಿಕದಂತಿದ್ದ ಸುವರ್ಣಸೌಧದ ಈಗಿನ ಸ್ಥಿತಿ ಹೇಗಿದೆ ಅಂತೀರಾ ಈ ಸ್ಟೋರಿ ನೋಡಿ…

ಸೌಧಕ್ಕೆ ಪಾಚಿ ಕಟ್ಟಿ ಕಂದು ಬಣ್ಣಕ್ಕೆ ತಿರುಗಿದ್ರೂ ನೋಡದ ಅಧಿಕಾರಿಗಳು

ಹೌದು ಡಿಸೆಂಬರ್ 19ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ 10 ದಿನಗಳ ನಡೆಯಲಿರುವ ಅಧಿವೇಶನಕ್ಕೆ ಕೊನೆಯ ಹಂತದ ಸಿದ್ದತೆಗಳು ಭರದಿಂದ ಸಾಗಿದೆ. ಇಂದು ಖುದ್ದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದರು. ಜತೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆಗೆ ಸಭೆ ನಡೆಸಿ ಎಲ್ಲ ಮಾಹಿತಿಯನ್ನ ಪಡೆದುಕೊಂಡು ಸುಸೂತ್ರವಾಗಿ ಅಧಿವೇಶನ ನಡೆಸಲು ಸಲಹೆ ಸೂಚನೆ ಕೂಡ ನೀಡಿದ್ದಾರೆ. ಖುದ್ದು ಉಭಯ ಸದನಗಳಿಗೂ ಭೇಟಿ ನೀಡಿದ ಸ್ಪೀಕರ್ ಲೈಟ್ ಹಾಗೂ ಮೈಕ್ ವ್ಯವಸ್ಥೆಯನ್ನ ಪರಿಶೀಲನೆ ನಡೆಸಿದರು.

ಅಧಿವೇಶನದ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಟೆಕ್ನಿಷಿಯನ್ ಗಳಿಗೆ ಸೂಚನೆ ನೀಡಿದ್ದಾರೆ. ವಸತಿ ವ್ಯವಸ್ಥೆ ಸೇರಿದಂತೆ ಊಟದ ವ್ಯವಸ್ಥೆ ವೈದ್ಯರ ವ್ಯವಸ್ಥೆ ಎಲ್ಲದರಲ್ಲೂ ಕೊರತೆ ಆಗದಂತೆ ಜಿಲ್ಲಾಧಿಕಾರಿ ನೇತೃತ್ವದ ತಂಡಕ್ಕೆ ಸಲಹೆ ನೀಡಿದರು. ಇದಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಕಾಗೇರಿ ಇದು 15ನೇ ವಿಧಾನಸಭೆಯ 14ನೇ ಅಧಿವೇಶನ ಆಗಿದ್ದು ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನ ಮಾಡಿದ್ದೇವೆ. ಅಧಿವೇಶನಕ್ಕೆ ಜಿಲ್ಲಾಡಳಿತ 15 ತಂಡಗಳನ್ನ ಮಾಡಿಕೊಂಡಿದೆ. ಉಭಯ ಮಂಡಲದ ವತಿಯಿಂದ ಇಂದು ಅಧಿಕಾರಿಗಳ ಜತೆಗೆ ಸಭೆ ಮಾಡಿದ್ದೇನೆ.

Also Read:

ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ, ಎಲ್ಲವನ್ನೂ ಸಿಎಂ ಅವರೇ ಇಟ್ಟುಕೊಳ್ಳಲಿ: ಬೊಮ್ಮಾಯಿಗೆ ಯತ್ನಾಳ್ ಟಾಂಗ್

ಸಚಿವರ, ಶಾಸಕರ, ಅಧಿಕಾರಿಗಳ ವಸತಿ ಬಹಳ ದೊಡ್ಡ ವ್ಯವಸ್ಥೆ ಮಾಡಿದ್ದು 2,000 ಕ್ಕೂ ಅಧಿಕ ರೂಮ್ ಗಳನ್ನ ಈಗಾಗಲೇ ವ್ಯವಸ್ಥೆ ಮಾಡಿದ್ದೇವೆ. ಈಗ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಹತ್ತನೇಯದ್ದಾಗಿದ್ದು, ಎಲ್ಲಾ ಇಲಾಖೆಯವರು ಈಗಾಗಲೇ ಸಂಪೂರ್ಣವಾಗಿ ತೊಡಗಿಕೊಂಡಿದ್ದಾರೆ. ಈ ಅವಧಿಯಲ್ಲಿ ನಡೆಯುತ್ತಿರುವ ಸರ್ಕಾರದ ಕೊನೆಯ ಅಧಿವೇಶನ ಆಗಿದ್ದು, ಸಾರ್ವಜನಿಕರಿಗೆ ಸದನ ನೋಡಲು ಮುಕ್ತವಾದ ಅವಕಾಶ ಇದೆ. ಈ ಅಧಿವೇಶನದಲ್ಲಿ 6 ವಿಧೇಯಕ ಮಂಡನೆಗೆ ನಿರ್ಧಾರ ಮಾಡಲಾಗಿದೆ.

ಅಧಿವೇಶನದಲ್ಲಿ ಶಾಸಕರು, ಸಚಿವರ ಹಾಜರಾತಿ ಕಡ್ಡಾಯಕ್ಕೆ ಕ್ರಮ:

ಬೆಂಗಳೂರು ಭೂಸುಧಾರಣೆ ಕಾಯ್ದೆ, ಕನ್ನಡ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆಯಾಗಿವೆ. ಚಳಿಗಾಲ ಅಧಿವೇಶನ ವೇಳೆ ಚರ್ಚೆ ಮಾಡಿ, ಅಂಗೀಕಾರಕ್ಕೆ ಕ್ರಮ. ಗಡಿಪ್ರದೇಶ ಅಭಿವೃದ್ಧಿ ವಿಧೇಯಕ ಸೇರಿ ಈ ಅಧಿವೇಶನದಲ್ಲಿ 6 ಮಸೂದೆ ಮಂಡಿಸಲಾಗುವುದು. ಅಧಿವೇಶನದಲ್ಲಿ ಶಾಸಕರು, ಸಚಿವರ ಹಾಜರಾತಿ ಕಡ್ಡಾಯಕ್ಕೆ ಕ್ರಮ ವಹಿಸಲಾಗಿದೆ. ಅಧಿವೇಶನಕ್ಕೆ ಹೋಗಲ್ಲ, ಅಲ್ಲೇನಿದೆ ಎಂಬ ಶಾಸಕರ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬಾರದು, ನಾನು ಅದನ್ನು ಸಹಿಸುವುದಿಲ್ಲ. ಚಳಿಗಾಲ ಅಧಿವೇಶನದಲ್ಲಿ ಪ್ರತಿಯೊಬ್ಬ ಶಾಸಕರ ಹಾಜರಾತಿಯೂ ಕಡ್ಡಾಯವಾಗಿದೆ. ಗೈರಾಗುವುದಾದ್ರೆ ಪೂರ್ವ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ವಿಶೇಷ ಆದ್ಯತೆ ನೀಡಲಾಗುವುದು. ಈ ಸಲವೂ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಿದ್ದೇವೆ ಅಂತಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಒಂದು ಕಡೆ ಅಧಿವೇಶನಕ್ಕೆ ಭರದ ಸಿದ್ದತೆ ನಡೆಯುತ್ತಿದ್ದರೆ ಇನ್ನೊಂದು ಕಡೆ ಸ್ಪಟಿಕದಂತಿದ್ದ ಸುವರ್ಣ ಸೌಧ ಕಂದು ಬಣ್ಣಕ್ಕೆ ತಿರುಗಿದ್ರೂ ಅಧಿಕಾರಿಗಳು ಮಾತ್ರ ಅದನ್ನ ತಿರುಗಿ ನೋಡುತ್ತಿಲ್ಲ. ಪ್ರತಿ ವರ್ಷ ಎರಡು ಕೋಟಿ ಸುವರ್ಣ ಸೌಧ ನಿರ್ವಹಣೆಗೆ ಮೀಸಲಿಟ್ಟರೂ ಸರಿಯಾಗಿ ನಿರ್ವಹಣೆ ಮಾಡದ ಹಿನ್ನೆಲೆ ಎಲ್ಲೆಂದರಲ್ಲಿ ಪಾಚಿ ಕೂಡ ಕಟ್ಟಿದೆ. ಇದರಿಂದ ಸುವರ್ಣ ಸೌಧದ ಸೌಂದರ್ಯ ಹಾಳಾಗಿದೆ.

ಈ ನಿಟ್ಟಿನಲ್ಲಿ ಸ್ವಚ್ಛಗೊಳಿಸುವ ಕೆಲಸಕ್ಕೆ ಇನ್ನೂ ಅಧಿಕಾರಿಗಳು ಮುಂದಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಮಟ್ಟದ ಇಲಾಖೆ ಸುವರ್ಣ ಸೌಧಕ್ಕೆ ವರ್ಗಾವಣೆ ಮಾಡಬೇಕು ಅನ್ನೋ ಕೂಗಿನ ನಡುವೆ ಇದೀಗ ಸುವರ್ಣ ಸೌಧದ ಕಟ್ಟಡ ನಿರ್ವಹಣೆ ಕೂಡ ಸರಿಯಾಗಿ ಮಾಡುತ್ತಿಲ್ಲ ಅಂದ್ರೇ ಇದು ಸರ್ಕಾರದ ಅಧಿಕಾರಿಗಳ ಬೇಜವಾಬ್ದಾರಿ. ಶಕ್ತಿ ಸೌಧವನ್ನ ಕಡೆಗಣಿಸುವುದು ಸರಿಯಲ್ಲ ಅಂತಾ ಆಕ್ರೋಶ ಕೂಡ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಒಟ್ಟಾರೆ ಈ ಬಾರಿ ಅಧಿವೇಶನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆಯಲಿದ್ದು ಕಡ್ಡಾಯವಾಗಿ ಸಂಬಂಧ ಪಟ್ಟ ಸಚಿವರ ಭೇಟಿಗೆ ಅವಕಾಶ ಕಲ್ಪಿಸುವ ಭರವಸೆಯನ್ನ ಸ್ಪೀಕರ್ ನೀಡಿದ್ದಾರೆ. ಇತ್ತ ಪೊಲೀಸರಿಗೂ ಹಾಗೂ ಇನ್ನುಳಿದ ಇಲಾಖೆಗಳ ಸಿಬ್ಬಂದಿಗೂ ವಸತಿ ಊಟದ ವ್ಯವಸ್ಥೆ ಕೂಡ ಅಚ್ಚುಕಟ್ಟಾಗಿ ಮಾಡಲು ಸಜ್ಜಾಗಿದ್ದು ಹಬ್ಬದ ವಾತಾವರಣದ ನಡುವೆ ಮದುವೆ ಮನೆಗೆ ಬಣ್ಣ ಬಳಿದು ಸಿಂಗಾರ ಮಾಡದೇ ಬೇಜವಾಬ್ದಾರಿ ತೋರುತ್ತಿರುವುದು ಮಾತ್ರ ವಿಪರ್ಯಾಸದ ಸಂಗತಿ. ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸೌಧವನ್ನ ಸ್ವಚ್ಛಗೊಳಿಸಿ ಹೊಳಪು ಬರುವಂತೆ ಮಾಡುತ್ತಾ ಅನ್ನೋದನ್ನ ಕಾದುನೋಡಬೇಕಿದೆ. (ವರದಿ: ಸಹದೇವ ಮಾನೆ, ಟಿವಿ 9, ಬೆಳಗಾವಿ)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್