ಬೆಂಗಳೂರು: ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ರನೇ ಸಾಲಿನ ಪೂರಕ ಬಜೆಟ್ ಮಂಡಿಸಿದ್ದಾರೆ. 8001.13 ಕೋಟಿ ರೂ.ಗಳ ಪೂರಕ ಅಂದಾಜು ಮಂಡಿಸಿದ್ದಾರೆ. ಇನ್ನು, ರಾಜ್ಯ ಅಸೆಂಬ್ಲಿ ಚುನಾವಣೆ ಎದುರಿಗೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಫೆಬ್ರವರಿಯಲ್ಲಿ ತಾತ್ಕಾಲಿಕ ಬಜೆಟ್ ಮಂಡಿಸಲಿದ್ದಾರೆ.
ಡಿಸಾಸ್ಟರ್ ರೆಸ್ಪಾನ್ಸ್ ಫಂಡ್ಗೆ 1,396 ಕೋಟಿ ರೂ. ಮೀಸಲು, ಮನ್ರೇಗಾ ಯೋಜನೆಗೆ 750 ಕೋಟಿ ರೂಪಾಯಿ ಮೀಸಲು, ಇಂಧನ ಸೆಕ್ಟರ್ನಲ್ಲಿ ಈಕ್ವಿಟಿ ಖರೀದಿಗೆ 500 ಕೋಟಿ ರೂ, ಜನರಲ್ ಅಸೆಂಬ್ಲಿ ಚುನಾವಣೆಗೆ 300 ಕೋಟಿ ರೂಪಾಯಿ, ರಾಜೀವ್ ಗಾಂಧಿ ಹೌಸಿಂಗ್ ಸೊಸೈಟಿ ಸ್ಕೀಂಗೆ 256 ಕೋಟಿ ರೂ, ರೈಲ್ವೆ ಯೋಜನೆಗೆ 250 ಕೋಟಿ, ನೀರಾವರಿ ಯೋಜನೆಗೆ 200 ಕೋಟಿ, ಐದು ಮೆಗಾ ಹಾಸ್ಟೆಲ್ಗಳ ನಿರ್ಮಾಣಕ್ಕೆ 200 ಕೋಟಿ ರೂ ಹಾಗೂ ಬಿಬಿಎಂಪಿಗೆ ಎರಡು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಬೆಂಗಳೂರಿನ ನಮ್ಮ ಮೆಟ್ರೋ (Namma Metro)ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಕಾಮಗಾರಿಗೆ ಚುರುಕು ನೀಡುವಂತೆ ವಿಧಾನಪರಿಷತ್ ಸದಸ್ಯ ಕೆ ಗೋವಿಂದರಾಜು ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಷತ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದು, ಸಾಕಷ್ಟು ಸವಾಲುಗಳೊಂದಿಗೆ ಕೆಲಸ ಮಾಡಬೇಕಿದೆ. ಇನ್ನೊಂದು ವರ್ಷದಲ್ಲಿ ಏರ್ಪೋರ್ಟ್ಗೆ ಮೆಟ್ರೋ ಸಂಪರ್ಕ ದೊರೆಯಲಿದೆ. ನಿಗದಿತ ಸಮಯದಲ್ಲಿ ಮೆಟ್ರೋ ಕಾಮಗಾರಿ ಮುಗಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಮೆಟ್ರೋ ಕಾಮಗಾರಿ ಬೆಂಗಳೂರಿನಲ್ಲಿ ಮಂದಗತಿಯಲ್ಲಿ ಸಾಗುತ್ತಿದೆ, ಬೇಗ ಕಾಮಗಾರಿ ಮುಗಿಸುವಂತೆ ಕೆ. ಗೋವಿಂದರಾಜು ವಿಧಾನಪರಿಷತ್ನಲ್ಲಿ ಒತ್ತಾಯಿಸಿದ್ದರು.ಬೆಂಗಳೂರಿನ ಮಧ್ಯೆ ಭಾಗದಲ್ಲಿ ಕಾಮಗಾರಿ ನಡೆಯುತ್ತಿದೆ, ಹೈ ಡೆನ್ಸಿಟಿ ಪಾಪ್ಯೂಲೇಶನ್ ಕವರ್ ಮಾಡುವ ಉದ್ದೇಶದಿಂದ ಮಾಡುತ್ತಿದ್ದೇವೆ. ಸಾಕಷ್ಟು ಸವಾಲುಗಳಿಂದ ಕೆಲಸ ಮಾಡಬೇಕಿದೆ.ಮರ ಟ್ರಾನ್ಸಫ್ಲಾಂಟ್ ಮಾಡಬೇಕು, ಭೂ ಸ್ವಾಧೀನ ಮಾಡಬೇಕು, ಅಂಡರ್ ಗ್ರೌಂಡ್ ಕಾಮಗಾರಿ ಮಾಡಬೇಕು. ಆದರೆ ನಾನು ಬಂದಮೇಲೆ ವೇಗ ಕೊಟ್ಟಿದ್ದೇನೆ, ಇನ್ನೊಂದು ವರ್ಷದಲ್ಲಿ ಏರ್ ಪೋರ್ಟ್ ಗೆ ಮೆಟ್ರೋಗೆ ಕನೆಕ್ಟಿವಿಟಿ ಕೊಡುತ್ತೇವೆ.
ನಿಮ್ಮ ಕಾಳಜಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ, ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:03 pm, Thu, 29 December 22