ಉತ್ತರ ಕರ್ನಾಟಕದ ಅಭಿವೃದ್ಧಿ, ವಿಕೇಂದ್ರೀಕರಣಕ್ಕೆ ಒತ್ತು: ಸಿಎಂ ಬೊಮ್ಮಾಯಿ ಭರವಸೆ

ತಾಲೂಕು, ಜಿಲ್ಲೆಗಳಲ್ಲಿ ಸಮರ್ಪಕವಾಗಿ ವಿದ್ಯುತ್ ವಿತರಣೆ ಮಾಡಲು ಯಾರಾದರೂ ಮುಂದೆ ಬಂದರೆ ನಾವು ಅವರನ್ನು ಬೆಂಬಲಿಸಲು ಸಿದ್ದರಿದ್ದೇವೆ ಎಂದು ಅವರು ತಿಳಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ, ವಿಕೇಂದ್ರೀಕರಣಕ್ಕೆ ಒತ್ತು: ಸಿಎಂ ಬೊಮ್ಮಾಯಿ ಭರವಸೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: guruganesh bhat

Updated on: Sep 25, 2021 | 9:40 PM

ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಜಾರಿಗೊಳಿಸುತ್ತೇವೆ. ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸುತ್ತೇವೆ ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಜನರಿಗೆ ಬೇಕಾಗುವ ಸೇವೆಗಳನ್ನ ವಿಕೇಂದ್ರೀಕರಣ ಮಾಡಿ ಗ್ರಾಮ ಪಂಚಾಯಿತಿಗೆ ನೀಡಬೇಕು. ಈ ಯೋಜನೆಗೆ ಬೇಕಾದ ಸಿದ್ಧತೆಗಳನ್ನ ಸರ್ಕಾರ ಮಾಡುತ್ತಿದೆ. ರೈತರು ಅವರದ್ದೆ ಆದ ಕಂಪನಿ ಮಾಡಿ ಅವರ ಬೆಳೆದ ಬೆಳೆ ಮಾರಾಟ ಮಾಡುವ ಯೋಜನೆ ಮಾಡಿದ್ದೇವೆ. ನಮ್ಮ ಸರ್ಕಾರ ಜನಪರವಾಗಿರುವ, ಬಡವರ ಪರವಾಗಿರುವ ಸರ್ಕಾರವಾಗಿದೆ. ಸಂಗಮ ಬ್ಯಾರೇಜ್​ನಿಂದ 6 ಬ್ಯಾರೇಜ್​ಗಳನ್ನು ತುಂಬಿಸುವ ಯೋಜನೆಗೆ ಅನುಮೋದನೆ ಕೊಡುತ್ತೇವೆ.

ಜನರ ಆಶೀರ್ವಾದ ಇದ್ದರೆ ಎಂತಹ ಸವಾಲುಗಳನ್ನು ಸಹ ಎದುರಿಸಬಹುದು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಜತೆಗೆ ಯಾವೆಲ್ಲಾ ಯೋಜನೆ ನೆನೆಗುದಿಗೆ ಬಿದ್ದಿವೆ ಅದನ್ನ ಪರಿಹರಿಸುತ್ತೇವೆ. ಜನರಿಗೆ, ಕನ್ನಡ ನಾಡಿಗೆ, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುತ್ತೇವೆ ಎಂದು ಅವರು ಆಶ್ವಾಸನೆ ನೀಡಿದರು.

ತಾಲೂಕು, ಜಿಲ್ಲೆಗಳಲ್ಲಿ ಸಮರ್ಪಕವಾಗಿ ವಿದ್ಯುತ್ ವಿತರಣೆ ಮಾಡಲು ಯಾರಾದರೂ ಮುಂದೆ ಬಂದರೆ ನಾವು ಅವರನ್ನು ಬೆಂಬಲಿಸಲು ಸಿದ್ದರಿದ್ದೇವೆ. ವಿದ್ಯುತ್ ವಿತರಣೆ ವಿಕೇಂದ್ರೀಕರಣ ಮಾಡಲು ಮುಖ್ಯಮಂತ್ರಿಯಾಗಿ ನಾನು ಸಿದ್ದನಿದ್ದೇನೆ ಎಂದು ಅವರು ಸೂಚಿಸಿದರು.

ಇದನ್ನೂ ಓದಿ: 

ಕಿಲಾರಿ ಎತ್ತುಗಳನ್ನು ಹೊಂದುವುದು ಶ್ರೀಮಂತಿಕೆ ಮತ್ತು ಪ್ರತಿಷ್ಠೆಯ ಸಂಕೇತ, ಉತ್ತರ ಕರ್ನಾಟಕದಲ್ಲಿ ಇವುಗಳಿಗೆ ಭಾರಿ ಬೇಡಿಕೆ!

Ganesh Chaturthi 2021 Recipe: ಉತ್ತರ ಕರ್ನಾಟಕ ಸ್ಪೆಷಲ್ ಕೊಬ್ಬರಿ ಕಡುಬು ಮಾಡಿ ಸವಿಯಿರಿ

(CM Basavaraj Bommai says will develop North Karnataka and power supply system will decentralised in Future)

ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ