ಬೆಳಗಾವಿ: ಹಠ ಸಾಧಿಸಿದ ರಮೇಶ್ ಜಾರಕಿಹೊಳಿ, ಶಿವಾಜಿ ಪ್ರತಿಮೆ ಅನಾವರಣಕ್ಕೆ ಮುಹೂರ್ತ ಫಿಕ್ಸ್, ಹೆಬ್ಬಾಳ್ಕರ್ ನಡೆ ಕುತೂಹಲ

ರಾಜ್ಯ ಸರ್ಕಾರದ ವತಿಯಿಂದ ರಾಜಹಂಸಗಡ ಶಿವಾಜಿ ಪ್ರತಿಮೆ ಅನಾವರಣಕ್ಕೆ ಸಮಯ ನಿಗದಿ ಮಾಡಲಾಗಿದ್ದು ಸಿಎಂ ಬೊಮ್ಮಾಯಿ ಪ್ರತಿಮೆ ಉದ್ಘಾಟಿಸಲಿದ್ದಾರೆ. ಹೀಗಾಗಿ ಮಾ. 5ರಂದು ಮತ್ತೊಮ್ಮೆ ಕಾಂಗ್ರೆಸ್ ಕಾರ್ಯಕರ್ತರನ್ನು ಸೇರಿಸಿ ಪ್ರತಿಮೆ ಉದ್ಘಾಟನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ.

ಬೆಳಗಾವಿ: ಹಠ ಸಾಧಿಸಿದ ರಮೇಶ್ ಜಾರಕಿಹೊಳಿ, ಶಿವಾಜಿ ಪ್ರತಿಮೆ ಅನಾವರಣಕ್ಕೆ ಮುಹೂರ್ತ ಫಿಕ್ಸ್, ಹೆಬ್ಬಾಳ್ಕರ್ ನಡೆ ಕುತೂಹಲ
ಶಿವಾಜಿ ಪ್ರತಿಮೆ
Follow us
|

Updated on:Mar 01, 2023 | 8:09 AM

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ(Shivaji Statue) ವಿಚಾರವಾಗಿ ಗೋಕಾಕ್ ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ(Ramesh Jarkiholi) ಮತ್ತು ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ನಡುವೆ ಕದನ ಶುರುವಾಗಿತ್ತು. ಸದ್ಯ ರಾಜಹಂಸಗಡ ಶಿವಾಜಿ ಪ್ರತಿಮೆ ಅನಾವರಣಕ್ಕೆ ಮುಹೂರ್ತ ನಿಗದಿಯಾಗಿದೆ. ನಾಳೆ (ಮಾ.2ರಂದು) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಪ್ರತಿಮೆ ಅನಾವರಣ ಮಾಡಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೆಆರ್‌ಐಡಿಎಲ್ ಬೆಳಗಾವಿ ಸಹಯೋಗದಲ್ಲಿ ಕೋಟೆ ಅಭಿವೃದ್ಧಿ ಹಾಗೂ 43 ಅಡಿ ಎತ್ತರದ ಬೃಹತ್ ಶಿವಾಜಿ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ. 4.5 ಕೋಟೆ ವೆಚ್ಚದಲ್ಲಿ ರಾಜಹಂಸಗಡ ಕೋಟೆಯಲ್ಲಿ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ. ಕೋಟೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಕ್ರೆಡಿಟ್ ಫೈಟ್ ನಡೆಯುತ್ತಿದ್ದು ಜಿಲ್ಲಾಡಳಿತದಿಂದಲೇ ಪ್ರತಿಮೆ ಅನಾವರಣಕ್ಕೆ ರಮೇಶ್ ಜಾರಕಿಹೊಳಿ‌ ಪಟ್ಟು ಹಿಡಿದಿದ್ದರು. ಕೆಲ ದಿನದ ಹಿಂದೆ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜಹಂಸಗಡಕ್ಕೆ ಭೇಟಿ ನೀಡಿದ್ದರು. ಭೇಟಿ ಬಳಿಕ ಸಿಎಂಗೆ ಮನವಿ ಮಾಡಿ ಸರ್ಕಾರದಿಂದ ಪ್ರತಿಮೆ ಉದ್ಘಾಟನೆ ಮಾಡುವಂತೆ ರಮೇಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದರು. ಸದ್ಯ ನಾಳೆ ಪ್ರತಿಮೆ ಅನಾವರಣಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ. ಸಿಎಂ ಬೊಮ್ಮಾಯಿ, ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ, ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಕುತೂಹಲಕ್ಕೆ ಕಾರಣವಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡೆ

ರಾಜ್ಯ ಸರ್ಕಾರದ ವತಿಯಿಂದ ರಾಜಹಂಸಗಡ ಶಿವಾಜಿ ಪ್ರತಿಮೆ ಅನಾವರಣಕ್ಕೆ ಸಮಯ ನಿಗದಿ ಮಾಡಲಾಗಿದ್ದು ಸಿಎಂ ಬೊಮ್ಮಾಯಿ ಪ್ರತಿಮೆ ಉದ್ಘಾಟಿಸಲಿದ್ದಾರೆ. ಹೀಗಾಗಿ ಮಾ. 5ರಂದು ಮತ್ತೊಮ್ಮೆ ಕಾಂಗ್ರೆಸ್ ಕಾರ್ಯಕರ್ತರನ್ನು ಸೇರಿಸಿ ಪ್ರತಿಮೆ ಉದ್ಘಾಟನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಹಲವು ಕಡೆಗಳಲ್ಲಿ ಬ್ಯಾನರ್​ಗಳು ರಾರಾಜಿಸುತ್ತಿವೆ. 20 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಮತ್ತೊಮ್ಮೆ ಅನಾವರಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಟಕ್ಕರ್ ಕೊಡಲು ತಯಾರಿ ನಡೆದಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿ ಮರಾಠ ಸಮುದಾಯದವರಿದ್ದಾರೆ. ಹೀಗಾಗಿ ಶಿವಾಜಿ ಹೆಸರಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಭರ್ಜರಿ ರಾಜಕೀಯ ನಡೆಯುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:09 am, Wed, 1 March 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ