AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Bus Yatra: ಕಾಂಗ್ರೆಸ್ ನಾಯಕರ​ ಬಸ್​ ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಮೂಲಕ ಬಿಜೆಪಿ ಕೌಂಟರ್

ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಈ ವಿಚಾರವಾಗಿ ಕಾಂಗ್ರೆಸ್ ನಾಯಕರ​ ಬಸ್​ ಯಾತ್ರೆಗೆ ಮೋದಿ ಮೂಲಕ ಬಿಜೆಪಿ ಕೌಂಟರ್ ನೀಡಿದೆ. 

Congress Bus Yatra: ಕಾಂಗ್ರೆಸ್ ನಾಯಕರ​ ಬಸ್​ ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಮೂಲಕ ಬಿಜೆಪಿ ಕೌಂಟರ್
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 20, 2022 | 3:28 PM

Share

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಕಾಂಗ್ರೆಸ್​ ಬಸ್ ಯಾತ್ರೆಗೆ (Congress Bus Yatra) ಮುಹೂರ್ತ ಫಿಕ್ಸ್​ ಆಗಿದ್ದು, ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಈ ವಿಚಾರವಾಗಿ ಕಾಂಗ್ರೆಸ್ ನಾಯಕರ​ ಬಸ್​ ಯಾತ್ರೆಗೆ ಮೋದಿ ಮೂಲಕ ಬಿಜೆಪಿ ಕೌಂಟರ್ ನೀಡಿದೆ.  ಜ. 12ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಬಹುತೇಕ ಖಚಿತವಾಗಿದೆ. ಕೇಂದ್ರ ಯುವ ಸಬಲೀಕರಣ ಇಲಾಖೆಯಿಂದ ಆಯೋಜಿಸಿರುವ ರಾಷ್ಟ್ರೀಯ ಯುವಜನ ಮೇಳ ಉದ್ಘಾಟಿಸಲು ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಮೊದಲು ಬೆಳಗಾವಿಯಲ್ಲಿ ಯುವಜನ ಮೇಳ ನಿರ್ಧಾರವಾಗಿತ್ತು. ಆದರೆ ಸದ್ಯ ಬೆಳಗಾವಿ ಬದಲು ಬೇರೆಡೆ ಯುವಜನ ಮೇಳ ಆಯೋಜನೆಗೆ ಸಿದ್ಧತೆ ನಡೆಯುತ್ತಿದೆ ಎನ್ನಲಾಗುತ್ತಿದೆ.

ಜನವರಿ 12ರಂದು ರಾಷ್ಟ್ರೀಯ ಯುವಜನ ಮೇಳ ನಡೆಯಲಿದ್ದು, 8 ರಿಂದ 10 ಸಾವಿರ ಜನರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕಿರುವ ಹಿನ್ನೆಲೆ ರಾಜ್ಯ ಯುವ ಸಬಲೀಕರಣ ಇಲಾಖೆ ಪೂರ್ವ ಸಿದ್ಧತೆಯಲ್ಲಿ ತೊಡಗಿದೆ. ಮೋದಿ ಭೇಟಿ ವೇಳೆ ಇತರೆ ಕಾರ್ಯಕ್ರಮಗಳಿಗೂ ಚಾಲನೆ ಕೊಡಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಗೆ ಚಾಲನೆ ಸಾಧ್ಯತೆಯಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಬಸ್ ಯಾತ್ರೆ ಆರಂಭದ ಸಮಯದಲ್ಲೇ ರಾಜ್ಯಕ್ಕೆ ಮೋದಿ ಕರೆಸಿ ಸಮಾವೇಶಗಳಲ್ಲಿ ಭಾಷಣ ಮಾಡಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ.

ಇದನ್ನೂ ಓದಿ: Congress Bus Yatra:ಕರ್ನಾಟಕ ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ

21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚಾರ

ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಬೆಳಗಾವಿಯಿಂದ ಶುರುವಾಗಲಿದ್ದು, ಒಟ್ಟೂ 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮಾಹಿತಿ ನೀಡಿದ್ದು, ಯಾವ ದಿನಾಂಕದಂದು ಎಲ್ಲಿ ಬಸ್ ಯಾತ್ರೆ ನಡೆಯಲಿದೆ ಎನ್ನುವ ರೂಟ್ ಮ್ಯಾಪ್​ ಈ ಕೆಳಗಿನಂತಿದೆ.

ಬೆಳಗಾವಿ ಜಿಲ್ಲೆ ದೊಡ್ಡದಿರುವುದರಿಂದ 2 ವಿಭಾಗ ಮಾಡಿಕೊಂಡಿದ್ದು, ಚಿಕ್ಕೋಡಿ, ಬೆಳಗಾವಿಯಲ್ಲಿ ತಲಾ ಒಂದು ಸಭೆ ನಡೆಸಲಿದ್ದಾರೆ. ಇನ್ನು ಜನವರಿ 14, 15ರಂದು ಸಂಕ್ರಾಂತಿ ಹಬ್ಬದ ಸಲುವಾಗಿ ಯಾತ್ರೆಗೆ ವಿರಾಮ ನೀಡಲಾಗಿದೆ. ಬೆಳಗಾವಿಯಲ್ಲೇ ಕಾಂಗ್ರೆಸ್​ನ ಪ್ರಥಮ ಅಧಿವೇಶನ ನಡೆದಿತ್ತು. ಹಾಗಾಗಿ ಬೆಳಗಾವಿಯಿಂದ ಬಸ್​ ಯಾತ್ರೆ ಆರಂಭ ಮಾಡುತ್ತಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: CBI Raid: 1989ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಡಿಕೆ ಶಿವಕುಮಾರ್ ಅವರ ಸಮಗ್ರ ಆಸ್ತಿಪಾಸ್ತಿ ವಿವರ ಇಲ್ಲಿದೆ

ಬಸ್​ ಯಾತ್ರೆ ವೇಳಾಪಟ್ಟಿ ಇಲ್ಲಿದೆ

* ಜನವರಿ 11ರಂದು ಬೆಳಗಾವಿ ಜಿಲ್ಲೆ

* ಜನವರಿ 16ರಂದು ಹೊಸಪೇಟೆ

* ಜನವರಿ 17ರಂದು ಕೊಪ್ಪಳದಲ್ಲಿ ಯಾತ್ರೆ

* ಜನವರಿ 18ರಂದು ಬಾಗಲಕೋಟೆ, ಗದಗ ಜಿಲ್ಲೆಯಲ್ಲಿ ಬಸ್ ಯಾತ್ರೆ

* ಜನವರಿ 19ರಂದು ಹಾವೇರಿ, ದಾವಣಗೆರೆ ಜಿಲ್ಲೆ

* ಜನವರಿ 21 ಹಾಸನ, ಚಿಕ್ಕಮಗಳೂರು

* ಜನವರಿ 22 ಉಡುಪಿ, ದಕ್ಷಿಣ ಕನ್ನಡ.

* ಜನವರಿ 23 ಕೋಲಾರ, ಚಿಕ್ಕಬಳ್ಳಾಪುರ

* ಜನವರಿ 24 ತುಮಕೂರು, ಬೆಂಗಳೂರು ಗ್ರಾಮಾಂತರ

* ಜನವರಿ 25 ಚಾಮರಾಜನಗರ, ಮೈಸೂರು

* ಜನವರಿ 26 ಮಂಡ್ಯ ಮತ್ತು ರಾಮನಗರ

* ಜನವರಿ 27 ಯಾದಗಿರಿ-ಕಲಬುರಗಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ