ಕಾಂಗ್ರೆಸ್‌ನವರಿಗೆ ಬಹುಸಂಖ್ಯಾತರು ಬೇಕಾಗಿಲ್ಲ; ಅಲ್ಪಸಂಖ್ಯಾತರ ಬಗ್ಗೆ ಅವರಿಗೆ ಹೆಚ್ಚು ಕಾಳಜಿ ಇದೆ- ಕಂದಾಯ ಸಚಿವ ಅಶೋಕ್

ರಾಜ್ಯದಲ್ಲಿ ಬಹುನಿರೀಕ್ಷಿತ ಮತಾಂತರ ನಿಷೇದ ಕಾಯ್ದೆ ಜಾರಿ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಅಶೋಕ್ ಕಾಂಗ್ರೆಸ್ ಒಂದು ಸಮುದಾಯದ ಪರವಾಗಿದೆ. ಬಹುಸಂಖ್ಯಾತರ ಬಗ್ಗೆ ಕಾಳಜಿಯಿಲ್ಲ. ಅಲ್ಪಸಂಖ್ಯಾತರ ಬಗ್ಗೆ ಕಾಳಜಿಯಿದೆ. ಎಲ್ಲರ ಬಗ್ಗೆ ಕಾಂಗ್ರೆಸ್ ಗೆ ಕಾಳಜಿಯಿರಬೇಕು. ಈಗಾಗಲೇ ಸಂವಿಧಾನದಲ್ಲಿ ಇದು ಇದೆ. ಇನ್ನಷ್ಟು ಕಠಿಣ ಕಾನೂನು‌ ತರುತ್ತಿದ್ದೇವೆ ಎಂದರು.

ಕಾಂಗ್ರೆಸ್‌ನವರಿಗೆ ಬಹುಸಂಖ್ಯಾತರು ಬೇಕಾಗಿಲ್ಲ; ಅಲ್ಪಸಂಖ್ಯಾತರ ಬಗ್ಗೆ ಅವರಿಗೆ ಹೆಚ್ಚು ಕಾಳಜಿ ಇದೆ- ಕಂದಾಯ ಸಚಿವ ಅಶೋಕ್
ಆರ್ ಅಶೋಕ್, ಸಿದ್ದರಾಮಯ್ಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 13, 2021 | 11:26 AM

ಬೆಳಗಾವಿ: ಬೆಳಗಾವಿಯಲ್ಲಿ ಇಂದಿನ ನಡೆಯಲಿರುವ ಚಳಿಗಾಲದ ಅಧಿವೇಶನವು (karnataka legislature winter session) ಆರಂಭಕ್ಕೂ ಮುನ್ನವೇ ಕಾವೇರಿದೆ. ರಾಜ್ಯದ ಪವರ್​ ಕಾರಿಡಾರ್​ ಬೆಳಗಾವಿಗೆ ಶಿಫ್ಟ್ ಆಗಿದೆ. ಈ ಮಧ್ಯೆ, ಸಿಎಂ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ಒಟ್ಟಿಗೆ ಬೆಳಗಾವಿಗೆ ವಿಮಾನದಲ್ಲಿ ಇಂದು ಬೆಳಗ್ಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಶಿ ವಿಶ್ವನಾಥ ಕಾರಿಡಾರ್​ ಉದ್ಘಾಟನಾ ಕಾರ್ಯಕ್ರಮದಲ್ಲಿ (Kashi Vishwanath Corridor) ಪಾಲ್ಗೊಳ್ಳಲು ಬೆಳಗಾವಿಯಿಂದ ಉತ್ತರ ಪ್ರದೇಶ ಪ್ರವಾಸಕ್ಕೆ ಇಂದು ಮಧ್ಯಾಹ್ನ ತೆರಳಲಿದ್ದಾರೆ. ಬೆಳಗಾವಿಗೆ ಬಂದಿಳಿಯುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಅಶೋಕ್ ಕಾಂಗ್ರೆಸ್‌ನವರಿಗೆ ಬಹುಸಂಖ್ಯಾತರು ಬೇಕಾಗಿಲ್ಲ. ಅಲ್ಪಸಂಖ್ಯಾತರ ಬಗ್ಗೆ ಅವರಿಗೆ ಹೆಚ್ಚು ಕಾಳಜಿ ಇದೆ. ಅವರ ಪರಂಪರೆಯೇ ಆ ರೀತಿಯಾಗಿ ಆಗಿಬಿಟ್ಟಿದೆ. ಹೀಗಾಗಿಯೇ ದೇಶದಲ್ಲಿ ಕಾಂಗ್ರೆಸ್ ಮೂಲೆಗುಂಪಾಗಿದೆ ಎಂದು ಲೇವಡಿಯಾಡಿದ್ದಾರೆ.

ರಾಜ್ಯದಲ್ಲಿ ಬಹುನಿರೀಕ್ಷಿತ ಮತಾಂತರ ನಿಷೇದ ಕಾಯ್ದೆ ಜಾರಿ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಅಶೋಕ್ ಕಾಂಗ್ರೆಸ್ ಒಂದು ಸಮುದಾಯದ ಪರವಾಗಿದೆ. ಬಹುಸಂಖ್ಯಾತರ ಬಗ್ಗೆ ಕಾಳಜಿಯಿಲ್ಲ. ಅಲ್ಪಸಂಖ್ಯಾತರ ಬಗ್ಗೆ ಕಾಳಜಿಯಿದೆ. ಎಲ್ಲರ ಬಗ್ಗೆ ಕಾಂಗ್ರೆಸ್ ಗೆ ಕಾಳಜಿಯಿರಬೇಕು. ಈಗಾಗಲೇ ಸಂವಿಧಾನದಲ್ಲಿ ಇದು (ಮತಾಂತರ ನಿಷೇದ) ಇದೆ. ಇನ್ನಷ್ಟು ಕಠಿಣ ಕಾನೂನು‌ ತರುತ್ತಿದ್ದೇವೆ ಎಂದು ಹೇಳಿದರು.

ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡೇ ಮಾಡ್ತಿವಿ: ಬಲವಂತ ಮತಾಂತರ ನಿಷೇಧ ಕಾಯ್ದೆ ಜಾರಿಯಾಗಲಿದೆ. ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡೇ ಮಾಡ್ತಿವಿ. ಇದು ಕೇವಲ ಒಂದು ಸಮುದಾಯಕ್ಕೆ ಸಂಬಂಧಿಸಿದ್ದಲ್ಲ. ಯಾಕೆ ಕಾಂಗ್ರೆಸ್ ನವರು ವಿರೋಧ ಮಾಡ್ತಿದ್ದಾರೋ ಗೊತ್ತಿಲ್ಲ. ಬಲವಂತವಾಗಿ ಮತಾಂತರ ಮಾಡಿದ್ರೆ ಶಿಕ್ಷೆಯಾಗಲಿದೆ. ಡಿಸಿಯಿಂದ ಅನುಮತಿ ಪಡೆಯಬೇಕು. ಕೆಲವೊಂದು ನಿಯಮಗಳು ಈ ಕಾಯ್ದೆ ಮೂಲಕ ಜಾರಿಯಾಗಲಿವೆ. ಯಾರೂ ಕೂಡ ಬಲವಂತದಿಂದ ಮತಾಂತರ ಮಾಡಬಾರದು ಎಂದು ಟಿವಿ ನೈನ್ ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಲವ್ ಜಿಹಾದ್ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನಕ್ಕೆ ಭಾರೀ ಭದ್ರತೆ ವಹಿಸಲಾಗಿದೆ. ಸುಮಾರು ಸಾವಿರ ಪೊಲೀಸರ ನಿಯೋಜನೆ ಮಾಡಿದ್ದೇವೆ. ಇಲ್ಲಿ ಪ್ರತಿಭಟನೆ ಶಾಂತಿಯುತವಾಗಿ ಮಾಡಲಿ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವಕಾಶವಿದೆ. ಶಾಂತಿಯುತವಾಗಿ ನಡೆಯಲಿ ಅನ್ನೋದು ನನ್ನ ಮನವಿ ಅಂತಾ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದೇ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರವಾಗಿ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದು ಮತಾಂತರ ಕಾಯ್ದೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಹಾಗಾಗಿಯೇ ಇದನ್ನ ತರಲು ಹೊರಟಿದ್ದಾರೆ. ನಮ್ಮ ಸಂವಿಧಾನ ಬಹಳ ಸ್ಪಷ್ಟವಾಗಿ ಹೇಳಿದೆ. ಬಲವಂತ ಮತಾಂತರಕ್ಕೆ ಮಾತ್ರ ಅವಕಾಶವಿಲ್ಲ. ಬಲವಂತದಿಂದ ಮಾಡಿದರೆ ತಪ್ಪು. ಈಗ ಕಾಯ್ದೆ ತರುವ ನೆಸೆಸಿಟಿ ಏನಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

ಚಳಿಗಾಲದ ಅಧಿವೇಶನ ನಿಮಿತ್ತ ಸದನದಲ್ಲಿ ಇವತ್ತು ಮಳೆ, ಪ್ರವಾಹದ ಬಗ್ಗೆ ಮಾತನಾಡ್ತೇವೆ. ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಅದರ ಬಗ್ಗೆ ಚರ್ಚೆಗೆ ಕೇಳಿದ್ದೇವೆ. ನಂತರ ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಸ್ತಾಪ ಮಾಡುತ್ತೇವೆ. ಜೊತೆಗೆ 40 % ಕಮೀಷನ್ ಬಗ್ಗೆಯೂ ಪ್ರಸ್ತಾಪ ಮಾಡ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ: ಒಳಗೂ-ಹೊರಗೂ ಬೊಮ್ಮಾಯಿ ಸರ್ಕಾರಕ್ಕೆ ಪ್ರತಿಭಟನೆ ಕಾವು, ಏನದು? ವಿವರ ಇಲ್ಲಿದೆ

Minister R Ashok & Sunil Kumar Hints On Anti-Love Jihad Bill! ಲವ್ ಜಿಹಾದ್ ಕಾಯ್ದೆ ಸುಳಿವು ಕೊಟ್ಟ ಸಚಿವರು!

Published On - 10:57 am, Mon, 13 December 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ