ಮಾ.20ರಂದು ಕರ್ನಾಟಕಕ್ಕೆ ರಾಹುಲ್​ ಗಾಂಧಿ, ಬೆಳಗಾವಿಯಿಂದಲೇ ಚುನಾವಣೆಗೆ ರಣ ಕಹಳೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾರ್ಚ್‌ 20ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಭಾರತ್ ಜೋಡೋ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ರಾಹುಲ್ ಗಾಂಧಿ ಆಗಮಿಸುತ್ತಿದ್ದು, ಬೆಳಗಾವಿಯಿಂದಲೇ ಚುನಾವಣೆಗೆ ಕಹಳೆ ಊದಲಿದ್ದಾರೆ.

ಮಾ.20ರಂದು ಕರ್ನಾಟಕಕ್ಕೆ ರಾಹುಲ್​ ಗಾಂಧಿ,  ಬೆಳಗಾವಿಯಿಂದಲೇ ಚುನಾವಣೆಗೆ ರಣ ಕಹಳೆ
ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ
Follow us
ವಿವೇಕ ಬಿರಾದಾರ
|

Updated on:Mar 15, 2023 | 1:44 PM

ಬೆಳಗಾವಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣಾ (Karnataka Assembly Election) ಕಣ ರಂಗೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ (Amith Shah) ಶಾ ಅವರ ಅಬ್ಬರದ ಸಮಾರಂಭಗಳ ನಂತರ ಈಗ ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಮಾರ್ಚ್‌ 20ರಂದು ಬೆಳಗಾವಿಗೆ (Belagavi) ಆಗಮಿಸಲಿದ್ದಾರೆ. ಭಾರತ್ ಜೋಡೋ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ರಾಹುಲ್ ಗಾಂಧಿ ಆಗಮಿಸುತ್ತಿದ್ದು, ಬೆಳಗಾವಿಯಿಂದಲೇ ಚುನಾವಣೆಗೆ ಕಹಳೆ ಊದಲಿದ್ದಾರೆ.

ಈ ವೇಳೆ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಯುವಕರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಘೋಷಣೆ ಮಾಡಲಿದ್ದಾರೆ. ಅಲ್ಲದೇ ಕಿತ್ತೂರು ಕರ್ನಾಟಕ ಭಾಗದ ಹಲವು ಜಿಲ್ಲೆಗಳ ನಾಯಕರ ಸಭೆ ನಡೆಸಲಿದ್ದಾರೆ. ಇನ್ನು ರಾಹುಲ್ ಗಾಂಧಿಯ ಕಾರ್ಯಕ್ರಮ ಯಶಸ್ವಿಗೊಳಿಸಲು ಮಾರ್ಚ್‌ 16ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಸಭೆಯಲ್ಲಿ ಬೆಳಗಾವಿ ವಿಭಾಗದ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ.

ಇದನ್ನೂ ಓದಿ: ರಾಮನಗರದಿಂದ ಡಿಕೆ ಸುರೇಶ್ ಸ್ಪರ್ಧೆ; ಮಹತ್ವದ ಸುಳಿವು ಕೊಟ್ಟ ಡಿಕೆ ಶಿವಕುಮಾರ್

ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾರ್ಚ್‌ 18, 19ರಂದು ಬೆಳಗಾವಿ ಜಿಲ್ಲೆಯಲ್ಲಿ ನಡೆಯಬೇಕಿದ್ದ ‘ಪ್ರಜಾಧ್ವನಿ’ ಯಾತ್ರೆಯನ್ನು ರಾಹುಲ್ ಗಾಂಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಧೃವನಾರಾಯಣ ಮನೆಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

ಇತ್ತೀಚಿಗೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಮನೆಗೆ ಎಐಸಿಸಿ ಕಾರ್ಯದರ್ಶಿ ರಾಹುಲ್ ಗಾಂಧಿ ಮಾ. 21 ರಂದು ಭೇಟಿ ನೀಡಿ, ದೃವನಾರಾಯಣ್ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:53 am, Wed, 15 March 23