ಬೆಳಗಾವಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಸುವರ್ಣಸೌಧ ಚಲೋ
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ ಖಾನಾಪುರ ಕ್ಷೇತ್ರದ ಜನರೆಲ್ಲರೂ ಸೇರಿ ಸುವರ್ಣಸೌಧ ಚಲೋನಲ್ಲಿ ಭಾಗಿಯಾಗುತ್ತಾರೆ ಎಂದು ಪಾದಯಾತ್ರೆಗೂ ಮುನ್ನ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿಕೆ ನೀಡಿದ್ದಾರೆ.
ಬೆಳಗಾವಿ: ಸೋಮವಾರದಿಂದ (ಡಿಸೆಂಬರ್ 13) ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದಲ್ಲಿ ಸೂಕ್ತ ಅಭಿವೃದ್ಧಿ ಹಾಗೂ ಕ್ಷೇತ್ರದ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಸರ್ಕಾರ ಗಮನ ಸೆಳೆಯಲು ಖಾನಾಪುರದಿಂದ ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲು ಕಾಂಗ್ರೆಸ್ ಶಾಸಕಿ ನಿಂಬಾಳ್ಕರ್ ಯೋಜಿಸಿದ್ದಾರೆ. ಖಾನಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಈ ಬಗ್ಗೆ ಬೇಡಿಕೆ ಇಟ್ಟಿದ್ದಾರೆ.
ಖಾನಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ಯಾಕೇಜ್ ನೀಡಬೇಕು. 2 ಬಾರಿ ಪ್ರವಾಹದಿಂದ ಕ್ಷೇತ್ರದಲ್ಲಿ ಸಾಕಷ್ಟು ಹಾನಿಯಾಗಿದೆ. ಕ್ಷೇತ್ರದ ರಸ್ತೆಗಳು, ಸೇತುವೆ ದುರಸ್ತಿ ಮಾಡಿಸಬೇಕೆಂದು ಆಗ್ರಹ ಕೇಳಿಬಂದಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಅತಿವೃಷ್ಟಿಯಿಂದ ಆಗಿರುವ ಬೆಳೆ ಹಾನಿ ಪರಿಹಾರ ನೀಡಬೇಕು. ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆಯಲ್ಲಿ ತೆರಳುತ್ತೇವೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ ಖಾನಾಪುರ ಕ್ಷೇತ್ರದ ಜನರೆಲ್ಲರೂ ಸೇರಿ ಸುವರ್ಣಸೌಧ ಚಲೋನಲ್ಲಿ ಭಾಗಿಯಾಗುತ್ತಾರೆ ಎಂದು ಪಾದಯಾತ್ರೆಗೂ ಮುನ್ನ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿಕೆ ನೀಡಿದ್ದಾರೆ.
ಈ ಅಧಿವೇಶನದಲ್ಲಿ ಎರಡು ದಿನವಾದ್ರು ಉತ್ತರ ಕರ್ನಾಟಕದ ವಿಷಯ ಚರ್ಚೆ ಮಾಡಬೇಕು ಎಂದು ಸಲಹೆಗಳು ಬಂದಿವೆ ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಎಲ್ಲಾ ರೀತಿಯ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಬಿಎಸ್ಇ ಮೀಟಿಂಗ್ ನಡೆಯಲಿದೆ. ಎಲ್ಲಾ ಪಕ್ಷದ ಸದಸ್ಯರು ಭಾಗವಹಿಸಲಿದ್ದಾರೆ. ಸಭೆಯ ಎಲ್ಲಾ ದಿನದ ಕಾರ್ಯ ಕಲಾಪದ ವಿವರಗಳನ್ನ ಚರ್ಚೆ ಮಾಡಲಾಗುತ್ತೆ. ಸಭೆಯಲ್ಲಿ ಚರ್ಚೆ ಮಾಡಿ ಕಾರ್ಯಕಲಾಪದ ವಿವರ ಪಡೆಯಲಾಗುತ್ತೆ. ಸರ್ಕಾರ ಇದುವರೆಗೂ ಯಾವ ಯಾವ ಬಿಲ್ ಮಂಡಿಸಲಿದೆ ಅನ್ನೋದು ಕಳುಹಿಸಿಲ್ಲ. ಬಿಲ್ ಕಳಿಸ್ತೀವಿ ಅಂತ ಹೇಳಿದ್ದಾರೆ ಇದುವರೆಗೂ ಬಂದಿಲ್ಲ. ನಾಳೆಯೊಳಗೆ ಕಳಿಸ್ತೀವಿ ಅಂತ ಮೌಖಿಕವಾಗಿ ತಿಳಿಸಿದ್ದಾರೆ ಎಂದು ಬೆಳಗಾವಿ ಸುವರ್ಣಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ ನೀಡಿದ್ದಾರೆ.
ಈ ಅಧಿವೇಶನದಲ್ಲಿ ಎರಡು ದಿನವಾದ್ರು ಉತ್ತರ ಕರ್ನಾಟಕ ಭಾಗದ ವಿಷಯ ಚರ್ಚೆ ಮಾಡಬೇಕು ಅಂತ ಸಲಹೆಗಳು ಬಂದಿದೆ. ಬಿಎಸ್ಇ ಮೀಟಿಂಗ್ನಲ್ಲಿ ಇದರ ಬಗ್ಗೆ ಚರ್ಚೆ ಮಾಡ್ತೀವಿ. ಕೊವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನ ತಗೆದುಕೊಂಡಿದ್ದೇವೆ. ಕಲಾಪ ಚನ್ನಾಗಿ ನಡೆಯುವ ಅಗತ್ಯತೆ ಇದೆ. ಇಷ್ಟೆಲ್ಲ ವ್ಯವಸ್ಥೆ ಮಾಡಿ ಕಲಾಪ ಚೆನ್ನಾಗಿ ನಡೆಯಲಿಲ್ಲ ಅಂದ್ರೆ ಹೇಗೆ. ಹೀಗಾಗಿ ಎಲ್ಲಾ ಶಾಸಕರಿಗೂ ನಾನು ಮನವಿ ಮಾಡಿಕೊಳ್ಳುತ್ತೇನೆ. ಎಲ್ಲರೂ ಸಕ್ರಿಯಾವಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಿ. ನಿಯಮಾನುಸಾರ ಎಲ್ಲರಿಗೆ ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತೆ ಅಂತ ಗೈರಾಗೋದು ಸರಿಯಲ್ಲ. ಬೆಳಗಾವಿ ಅಧಿವೇಶನದಲ್ಲಿ ಎಲ್ಲಾ ಶಾಸಕರು ಪಾಲ್ಗೊಳ್ಳಿ ಎಂದು ಸ್ಪೀಕರ್ ಮನವಿ ಮಾಡಿಕೊಂಡಿದ್ದಾರೆ.
ನಾಳೆಯಿಂದ (ಡಿಸೆಂಬರ್ 13) ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ಹಿನ್ನೆಲೆ ವಿಧಾನಸಭೆಯ ಕಾರ್ಯಾಲಯದ ಅಧಿಕಾರಿಗಳ ಜೊತೆ ಸ್ಪೀಕರ್ ಸಭೆ ನಡೆಸಿದ್ದಾರೆ. ಸುವರ್ಣ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸ್ಪೀಕರ್ ಸಭೆ ನಡೆಸಿದ್ದಾರೆ. ಕೊವಿಡ್ ಹಿನ್ನೆಲೆ ಸದನದಲ್ಲಿ ಆಸನದ ವ್ಯವಸ್ಥೆ ಬಗ್ಗೆ ಮಾತುಕತೆ ಮಾಡಲಾಗಿದೆ. ಸಭೆ ಬಳಿಕ ಅಧಿವೇಶನದ ಸಿದ್ಧತಾ ಕಾರ್ಯವನ್ನು ಸ್ಪೀಕರ್ ವೀಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬೆಳಗಾವಿ: ಚರ್ಚ್ಗೆ ನುಗ್ಗಿ ತಲ್ವಾರ್ ತೋರಿಸಿ ಪಾದ್ರಿಗೆ ಬೆದರಿಕೆ, ವ್ಯಾಪಕ ಖಂಡನೆ
ಇದನ್ನೂ ಓದಿ: ಚಳಿಗಾಲ ಅಧಿವೇಶನಕ್ಕೆ ಸಜ್ಜಾದ ಬೆಳಗಾವಿ; ಸಿದ್ಧತೆಗಳು ಹೀಗಿವೆ
Published On - 5:21 pm, Sun, 12 December 21