ಹಿಂದೂ ಕಾರ್ಯಕರ್ತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ರಾಜು ಕಾಗೆ
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಸಾವಿನ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಕಾಂಗ್ರೆಸ್ ರಾಜು ಕಾಗೆ ಇದೀಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಬಾರಿ ಹಿಂದೂ ಕಾರ್ಯಕರ್ತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ, (ಮೇ 03): ‘ಮೋದಿ (Narendra Modi) ಸತ್ತರೆ ಮುಂದೆ ಯಾರೂ ಪ್ರಧಾನಿ(PM)ಆಗೋದೇ ಇಲ್ವಾ? ಎಂಬ ಕಾಂಗ್ರೆಸ್ ಶಾಸಕ ರಾಜು ಕಾಗೆ (congress mla Raju kage) ಬಾರೀ ವಿವಾದಕ್ಕೀಡಾಗಿದ್ದು, ಬಿಜೆಪಿ ನಾಯಕರು ಕಾಗೆ ಹೇಳಿಕೆಯನ್ನು ಖಂಡ – ತುಂಡವಾಗಿ ಖಂಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜು ಕಾಗೆ, ಹಿಂದೂ ಕಾರ್ಯಕರ್ತರನ್ನು (Hindu Workers) ಗತಿ ಇಲ್ಲದ ಭಿಕ್ಷುಕರೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ಹಿಂದೂ ಕಾರ್ಯಕರ್ತರನ್ನು ಕೆಣಕ್ಕಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಮಾತನಾಡುವ ಸಂದರ್ಭದಲ್ಲಿ ಹಿಂದು ಕಾರ್ಯಕರ್ತರಿಗೆ ಬಿಕಾರ್‌ಚೋಟ್ ಅಂದ್ರೆ ಗತಿ ಇಲ್ಲದ ಭಿಕ್ಷುಕರು ಎಂದು ಶಾಸಕ ರಾಜು ಕಾಗೆ ಉದ್ಧಟತನದ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಇಂದು (ಮೇ.03) ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರ ಭಾಷಣ ಮಾಡಿದ ರಾಜು ಕಾಗೆ, ರಾಮಮಂದಿರ ನಿರ್ಮಾಣದಿಂದ ದೇಶದ ಜನತೆ ಸಮಸ್ಯೆಗಳಿಂದ ಮುಕ್ತಿ ಹೊಂದಲು ಸಾಧ್ಯವಿಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ನೀಡಿದರೆ ನಾವೂ ದೇವಸ್ಥಾನಗಳನ್ನು ನಿರ್ಮಿಸುತ್ತೇವೆ. ಬಿಜೆಪಿ ಕಾರ್ಯಕರ್ತರಿಗೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಲು ಮಾತ್ರ ಗೊತ್ತು. ನಾನು ಇದನ್ನೆಲ್ಲ 40 ವರ್ಷಗಳ ಹಿಂದೆ ಮಾಡಿದ್ದೇನೆ ಎಂದರು.
ಇದನ್ನೂ ಓದಿ: ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ: ಕಾಂಗ್ರೆಸ್ ಶಾಸಕ ರಾಜು ಕಾಗೆ
ನಾನು ಅವರಿಗೆ ಉತ್ತರಿಸಲು ಸಿದ್ಧ ಮತ್ತು ಸಮರ್ಥನಾಗಿದ್ದೇನೆ. ಆದರೆ ಅವರು ನನ್ನ ಲೇವಲ್‌ನವರಲ್ಲ. ಅವರು ಬಿಕಾರ್ ಜೋಟ್ ಗಳು, ಹೀಗಾಗಿ ಜನರು ಅಭಿವೃದ್ಧಿ ಬೇಕಾದರೆ ಕಾಂಗ್ರೆಸ್‌ಗೆ ಮತ ಹಾಕಬೇಕು ಎಂದು ಹೇಳಿದರು. ಈ ಮೂಲಕ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಕೆಣಕ್ಕಿದ್ದು, ಇದು ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ