AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತೀಶ್​ ಜಾರಕಿಹೊಳಿ ಹಿಂದೂ ಹೇಳಿಕೆ ವಿರುದ್ಧ ಬದ್ಧತೆಯಿದ್ದರೆ ಕಾಂಗ್ರೆಸ್ ಕ್ರಮಕೈಗೊಳ್ಳಬೇಕು: ಸಿಎಂ ಬೊಮ್ಮಾಯಿ

ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆ ಹಿಂಪಡೆಯಲ್ಲ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್​​ ಪಕ್ಷ ಸತೀಶ್​ ಹೇಳಿಕೆ ಒಪ್ಪುವುದಿಲ್ಲ ಎಂದು ಹೇಳುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಸತೀಶ್​ ಜಾರಕಿಹೊಳಿ ಹಿಂದೂ ಹೇಳಿಕೆ ವಿರುದ್ಧ ಬದ್ಧತೆಯಿದ್ದರೆ ಕಾಂಗ್ರೆಸ್ ಕ್ರಮಕೈಗೊಳ್ಳಬೇಕು: ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 09, 2022 | 3:21 PM

Share

ಬೆಳಗಾವಿ: ಸತೀಶ್ ಜಾರಕಿಹೊಳಿ (Satish Jarkiholi) ತಮ್ಮ ಹೇಳಿಕೆ ಹಿಂಪಡೆಯಲ್ಲ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್​​ ಪಕ್ಷ ಸತೀಶ್​ ಹೇಳಿಕೆ ಒಪ್ಪುವುದಿಲ್ಲ ಎಂದು ಹೇಳುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್​ಗೆ ಸ್ಪಷ್ಟತೆ ಇದ್ದರೆ ಸತೀಶ್​ ಜಾರಕಿಹೊಳಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ಜಿಲ್ಲೆಯ ರಾಯಬಾಗ ನಗರದಲ್ಲಿ ಆಯೋಜಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಅವರು ಮಾತನಾಡಿದರು. ಸತೀಶ್ ಹೇಳಿಕೆ ಕಾಂಗ್ರೆಸ್ ತನ್ನ ಸ್ಪಷ್ಟನೆ ನೀಡಲಿ. ಇದನ್ನು ನಾವು ಹೇಗೆ ತೆಗೆದುಕೊಂಡು ಹೋಗುತ್ತೇವೆ ಎನ್ನುವುದಕ್ಕಿಂತ, ಕಾಂಗ್ರೆಸ್​​ ಇದನ್ನು ಹೇಗೆ ತೆಗೆದುಕೊಂಡು ಹೋಗುತ್ತೆ ಅನ್ನೋದು ಮುಖ್ಯ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಒಂದು ನೂರು ವರ್ಷದ ಹಳೆ ಪಕ್ಷ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ಬರುವ ಹಾಗೆ ಇವರು ನಡೆದುಕೊಳ್ಳುತ್ತಾರೆ. ಭಾರತವನ್ನು ಗೊಂದಲದಲ್ಲಿಟ್ಟು ಆಳಬೇಕು ಎನ್ನುವುದು ಮೂಲ ಸಿದ್ದಾಂತ ಮತ್ತೊಮ್ಮೆ ಪ್ರಕಟವಾಗಿದೆ. ರಾಹುಲ್ ದೇವಸ್ಥಾನಕ್ಕೆ ಹೋಗುತ್ತಾರೆ. ಇನ್ನೊಂದು ಕಡೆ ಈ ರೀತಿಯ ಹೇಳಿಕೆಗಳು ಬಂದಾಗ ಸುಮ್ಮನಿರುತ್ತಾರೆ. ಅವುಗಳಿಗೆ ಇನ್ ಡೈರೆಕ್ಟ್ ಆಗಿ ಬೆಂಬಲ ನೀಡುತ್ತಾರೆ. ಈ ರೀತಿಯ ದ್ವಂದ್ವ ನೀತಿ ದೇಶಕ್ಕೆ ಹಾಗೂ ಕಾಂಗ್ರೆಸ್​ಗೆ ಸರಿಯಲ್ಲ ಎಂದರು.

ಇನ್ನು ನನ್ನ‌ ಹೇಳಿಕೆ ತಪ್ಪು ಎಂದು ಸಾಬಿತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸತೀಶ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಯಾವ ಪುರಾವೆಯ ಆಧಾರದ ಮೇಲೆ‌ ಹೇಳಿದ್ದಾರೆ ಸ್ಪಷ್ಟಪಡಿಸಲಿ. ಅವೇ ಪುರಾವೆಗಳೇ ಸಾಕ್ಷಿಗಳಾಗುತ್ತವೆ. ಯಾವುದಾದರೂ ಒಂದು ಗಟ್ಟಿ ಪುರಾವೇ ಬೇಕಲ್ವಾ. ಇಂಟರ್ನೆಟ್​ನಲ್ಲಿ ಹತ್ತು ಹಲವಾರು ವಿಚಾರ ಲೇಖನ ಇರುತ್ತವೆ. ಸಾರ್ವಜನಿಕ ಜೀವನದಲ್ಲಿ ನಾವು ಅರಿವಿನಿಂದ ನಡೆಯಬೇಕು. ಸತೀಶ್ ಜಾರಕಿಹೊಳಿ ಹಿಂದೂ ಪದದ ಕುರಿತು ಚರ್ಚೆಗೆ ಆಹ್ವಾನ ವಿಚಾರ, ಅವರ ಆಧಾರಗಳೇ ಅತ್ಯಂತ ಅಸಂಗತ್ಯವಾದದಂತ ಆಧಾರ. ಹೇಗೆ ಅದು ತಪ್ಪು ಎನ್ನುವುದು ಟಿವಿ ಮಾಧ್ಯಮಗಳಲ್ಲಿ ವಿಷಯ ಪರಿಣಿತರು ಹೇಳುತ್ತಿದ್ದಾರೆ. ಅದನ್ನ ಒಪ್ಪಿಕೊಳ್ಳಲು ತಯಾರಿಲ್ಲದಿದ್ದರೆ ಮುಂದೆ ಅನುಭವಿಸುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇನ್ನು ಜನಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಜನ ಹರಿದು ಬಂದಿದ್ದು, ಸಿದ್ದರಾಮಯ್ಯಗೆ ಇಲ್ಲಿ ಸೇರಿರುವ ಜನಸಾಗರವನ್ನು ತೋರಿಸಿ. ಜನಸಂಕಲ್ಪ ಸಮಾವೇಶದಲ್ಲಿನ ಜನಸಾಗರದ ಬಗ್ಗೆ ತಿಳಿದುಕೊಳ್ಳಲಿ. ಜನ ಸೇರಲ್ಲ ಎಂದಿದ್ದ ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ಟಾಂಗ್​ ನೀಡಿದರು.

2023ಕ್ಕೆ ದುರ್ಯೋಧನ ಐಹೊಳೆಯನ್ನ ನಾಲ್ಕನೇ ಬಾರಿಗೆ ಆಯ್ಕೆ ಮಾಡಿ: ಡಿಸಿಎಂ ಲಕ್ಷ್ಮಣ ಸವದಿ

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ದುರ್ಯೋಧನ ಐಹೊಳೆಯನ್ನ ಮತ್ತೊಮ್ಮೆ ವಿಧಾನಸಭೆಗೆ ಕಳುಹಿಸುತ್ತೇನೆ ಅಂತಾ ಸಂಕಲ್ಪ ಮಾಡಿ. ಮುಖ್ಯಮಂತ್ರಿಗಳು ಸಂಕಲ್ಪ ಮಾಡಲು ಇಲ್ಲಿಗೆ ಬಂದಿದ್ದಾರೆ. 2023ಕ್ಕೆ ದುರ್ಯೋಧನ ಐಹೊಳೆಯನ್ನ ನಾಲ್ಕನೇ ಬಾರಿಗೆ ಆಯ್ಕೆ ಮಾಡಬೇಕು. ಐದು ಹೊಳೆ ನೀರು ಕೂಡಿಸಿದಷ್ಟು ಜನ ಇಲ್ಲಿ ಸೇರಿದ್ದಾರೆ. ಶಾಸಕ ಐಹೊಳೆಯನ್ನ ಮಳ್ಳ ಅಂತಾ ತಿಳಿದುಕೊಂಡಿದ್ದೆ. ಆದರೆ ಕೆಲಸ ಮಾಡಿಸುವುದರಲ್ಲೇ ಆತ ಎಲ್ಲರ ಮೇಲೆ ಕೈ ಆಡಿಸೋನು ಇದ್ದಾನೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಬಹಳ ದಿನಗಳ ನಂತರ ಉತ್ತರ ಕರ್ನಾಟಕಕ್ಕೆ ಒಬ್ಬ ಸಮರ್ಥ ನಾಯಕ ಸಿಕ್ಕಿದ್ದೀರಿ. ಗಾಳಿ ಬಿಟ್ಟಾಗ ತೂರಿಕೆ ಅಂದಂತೆ ನೀವು ಕೆಲಸ ಮಾಡಿ. 2023ಕ್ಕೆ ನೀವು ಮುಂದಾಗಿ ನಿಮ್ಮ ಜತೆಗೆ ನಾವೆಲ್ಲಾ ಇರುತ್ತೇವೆ ಎಂದು ಸವದಿ‌ ಹೇಳಿದರು.

ನಿಮ್ಮ ಪಾದಕ್ಕೆ ಹಣೆ ಹಚ್ಚಿ ನಮಸ್ಕರಿಸುವೆ: ಶಾಸಕ ದುರ್ಯೋಧನ ಐಹೊಳೆ 

ಇನ್ನು ಶಾಸಕ ದುರ್ಯೋಧನ ಐಹೊಳೆ ಮಾತನಾಡಿದ್ದು, ಏತ ನೀರಾವರಿ ಯೋಜನೆ ಮಾಡಿಕೊಡುವಂತೆ ಮನವಿ ಮಾಡಿದರು. ಬಂಡಿವಾಡ ಏತ ನೀರಾವರಿ, ಹನುಮಾನ್ ಏತ ನೀರಾವರಿ, ಕರಗಾಂವ ಏತ ನೀರಾವರಿ ಮಾಡಿಕೊಡಿ ನಿಮ್ಮ ಪಾದಕ್ಕೆ ಹಣೆ ಹಚ್ಚಿ ನಮಸ್ಕಾರ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿಗೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ್ ಕಾರಜೋಳ, ಭೈರತಿ ಬಸವರಾಜ, ಶಶಿಕಲಾ ಜೊಲ್ಲೆ, ಸಂಸದ ಅಣ್ಣಾದಾಹೇಬ್ ಜೊಲ್ಲೆ, ಶಾಸಕರಾದ ಪಿ.ರಾಜೀವ್, ಶ್ರೀಮಂತ್ ಪಾಟೀಲ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಪ್ರಭಾಕರ್ ಕೋರೆ, ಮಹಾಂತೇಶ್ ಕವಟಗಿಮಠ, ರಮೇಶ್ ಕತ್ತಿ ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:18 pm, Wed, 9 November 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​