ಬೆಳಗಾವಿ: ಕಾಮಗಾರಿ ಮಾಡಿದ್ರೂ ಬಿಲ್ ಇಲ್ಲ, ಎಕ್ಸಿಕ್ಯೂಟಿವ್ ಇಂಜಿನಿಯರ್ ಮುಂದೆ ವಿಷ ಸೇವಿಸಿದ ಗುತ್ತಿಗೆದಾರ
ಗುತ್ತಿಗೆದಾರ ನಾಗಪ್ಪ ಬಂಗಿ ಎನ್ನುವವರು ಬೆಳಗಾವಿಯ ಕೋಟೆ ಆವರಣದಲ್ಲಿರುವ ಕಚೇರಿ ಬಳಿ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ S.S.ಸೊಬರದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ್ದಾರೆ. ಸದ್ಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಳಗಾವಿ, ಅ.11: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ತವರು ಜಿಲ್ಲೆಯಲ್ಲಿ ಗುತ್ತಿಗೆದಾರರಿಗೆ ಸಂಕಷ್ಟ ಎದುರಾಗಿದೆ. ವರ್ಕ್ ಆರ್ಡರ್ ಪಡೆದು ಕಾಮಗಾರಿ ಮಾಡಿದರೂ ಬಿಲ್ ಆಗುತ್ತಿಲ್ಲ. ಕಳೆದ ಒಂದು ವರ್ಷದಿಂದ ಕಚೇರಿಗೆ ಅಲೆದು ಅಲೆದು ಸುಸ್ತಾಗಿದೆ ಎಂದು ಗುತ್ತಿಗೆದಾರರೊಬ್ಬರು ಅಧಿಕಾರಿಗಳ ಮುಂದೆಯೇ ಬೇಸತ್ತು ವಿಷ (Poison) ಸೇವಿಸಿದ್ದಾರೆ. ಗುತ್ತಿಗೆದಾರ ನಾಗಪ್ಪ ಬಂಗಿ ಎನ್ನುವವರು ಬೆಳಗಾವಿಯ ಕೋಟೆ ಆವರಣದಲ್ಲಿರುವ ಕಚೇರಿ ಬಳಿ ಲೋಕೋಪಯೋಗಿ ಇಲಾಖೆ (Public Works Department) ಎಕ್ಸಿಕ್ಯೂಟಿವ್ ಇಂಜಿನಿಯರ್ S.S.ಸೊಬರದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ್ದಾರೆ. ಸದ್ಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ರಸ್ತೆ ನಿರ್ವಹಣೆ ಬಿಲ್ ಮಂಜೂರು ಮಾಡದ ಹಿನ್ನೆಲೆ ಗುತ್ತಿಗೆದಾರ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇಂದು ವಿಷದ ಬಾಟಲ್ ಜೊತೆಗೆ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಬಂದಿದ್ದ ನಾಗಪ್ಪ ಬಂಗಿ ಅವರು ಬೇಜವಾಬ್ದಾರಿ ತೋರಿದ ಅಧಿಕಾರಿಗಳು ಬರದಿದ್ರೇ ವಿಷ ಕುಡಿಯುವುದಾಗಿ ಎಚ್ಚರಿಕೆ ನೀಡಿದ್ದರು. ಕುಟುಂಬ ಸಮೇತ ಆಗಮಿಸಿ ಕಚೇರಿ ಮುಂದೆ ಧರಣಿ ಕುಳಿತಿದ್ದರು. ಅಧಿಕಾರಿಗಳಿಂದ ಸ್ಪಂದನೆ ಸಿಗದ ಕಾರಣ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೇಕಾಬಿಟ್ಟಿಯಾಗಿ ಕೆಲಸ, ತಾರಕಕ್ಕೇರಿದ ಸಚಿವ-ಬಿಜೆಪಿ ಶಾಸಕ ನಡುವಿನ ಫೈಟ್ -ಮುಂದೇನು?
ನಾಗಪ್ಪ ಅವರು 2022ರಲ್ಲಿ ಹಲಗಾ ಗ್ರಾಮದಿಂದ ತಿಗಡಿ ಗ್ರಾಮದ ವರೆಗೆ ರಸ್ತೆ ಮಾಡಿದ್ದರು. ಇಲಾಖೆಯು ನಿರ್ಮಿಸಿದ್ದ ರಸ್ತೆ ನಿರ್ವಹಣೆಗೆ ವರ್ಕ್ ಆರ್ಡರ್ ಕೊಟ್ಟಿತ್ತು. 6 ಲಕ್ಷ 50 ಸಾವಿರ ವೆಚ್ಚದಲ್ಲಿ ಈಗಾಗಲೇ ಕಾಮಗಾರಿ ಮುಗಿಸಿದ್ದು ಕಾಮಗಾರಿ ಮುಗಿದರೂ ಬಿಲ್ ನೀಡದೆ ಅಧಿಕಾರಿಗಳು ಸತಾಯಿಸುತ್ತಿರುವ ಹಿನ್ನೆಲೆ ಎಇಇ ರಾಮೇಶ್ ಹೆಗಡೆ, ಎಇಇ ಬಸವರಾಜ್ ಹಲಗಿ ವಿರುದ್ಧ ಆಕ್ರೋಶ ಹೊರ ಹಾಕಿ ವಿಷ ಸೇವಿಸಿದ್ದಾರೆ. ಬಿಲ್ ಕೊಡಿ ಇಲ್ಲವಾದ್ರೇ ಕುಟುಂಬ ಸಮೇತ ಕಚೇರಿ ಎದುರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಧಿಕಾರಿಗಳಿಗೆ ಗುತ್ತಿಗೆದಾರ ನಾಗಪ್ಪ ಬಂಗಿ ಮನವಿ ಮಾಡಿದ್ದರು. ಈ ಹಿಂದೆ ಬಿಲ್ ಮಂಜೂರು ಮಾಡದಿದ್ದಕ್ಕೆ ಸಂತೋಷ ಪಾಟೀಲ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ಜಿಲ್ಲೆಯಲ್ಲಿ ಮತ್ತೊಬ್ಬ ಗುತ್ತಿಗೆದಾರ ಸಂಕಷ್ಟದಲ್ಲಿದ್ದಾರೆ.
ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ