ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್​ಗೆ ಮತ್ತೊಂದು ಟ್ವಿಸ್ಟ್; ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯ

ಸಂತೋಷ್ ಪಾಟೀಲ್ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಜಿಪಿಎ ಅಷ್ಟೇ ಅಲ್ಲಾ ಬೇರೆ ಎಲ್ಲಾ ಮಾಹಿತಿ ನಮ್ಮ ಬಳಿ ಇದೆ ಅಂತ ತಿಳಿಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಂತೋಷ್ ಕರೆದೊಯ್ದಿರುವುದು

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್​ಗೆ ಮತ್ತೊಂದು ಟ್ವಿಸ್ಟ್; ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯ
ಸಂತೋಷ್ ಪಾಟೀಲ್ (ಸಂಗ್ರಹ ಚಿತ್ರ)
Follow us
TV9 Web
| Updated By: sandhya thejappa

Updated on:Apr 20, 2022 | 10:26 AM

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ (Suicide) ಕೇಸ್​ಗೆ ಮತ್ತೊಂದು ಟ್ವಿಸ್ಟ್ (Twist) ಸಿಕ್ಕಿದೆ. ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಅವರು ಸಂತೋಷ್ ಪಾಟೀಲ್ ಮನೆಯನ್ನ ಜಿಪಿಎ (GPA) ಮಾಡಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಉಡುಪಿ ಪೊಲೀಸರ ತನಿಖೆಯ ವೇಳೆ ಮಾಹಿತಿ ಲಭ್ಯವಾಗಿದೆ. 40 ಲಕ್ಷಕ್ಕೆ ಜಿಪಿಎ ಮಾಡಿಸಿಕೊಂಡ ಬಗ್ಗೆ ಪೊಲೀಸರಿಗೆ ದಾಖಲೆ ಸಿಕ್ಕಿದೆ. ಈ ಬಗ್ಗೆ ಹೇಳಿಕೆ ನೀಡಿರುವ ನಾಗೇಶ್ ಮನ್ನೋಳ್ಕರ್, ಕಾಮಗಾರಿ ವ್ಯವಹಾರಕ್ಕೂ ಮನೆ ಜಿಪಿಎ ವಿಚಾರಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ಮತ್ತೊಂದೆಡೆ ಸಂತೋಷ್ ಪಾಟೀಲ್ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಜಿಪಿಎ ಅಷ್ಟೇ ಅಲ್ಲಾ ಬೇರೆ ಎಲ್ಲಾ ಮಾಹಿತಿ ನಮ್ಮ ಬಳಿ ಇದೆ ಅಂತ ತಿಳಿಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಂತೋಷ್ ಕರೆದೊಯ್ದಿರುವುದು. ನೋಂದಣಿ ಮಾಡಿಸಿಕೊಂಡ ದಾಖಲೆಗಳು ನಮ್ಮ ಬಳಿ ಇವೆ. ಯಾವ ಆಸ್ತಿಯನ್ನು ನೋಂದಣಿ ಮಾಡಿಸಿಕೊಂಡಿದ್ದಾರೆಂದು ಗೊತ್ತಿದೆ. ಸರ್ಕಾರ ಏನು ಮಾಡುತ್ತೋ ಮಾಡಲಿ, ಆಮೇಲೆ ಮಾತಾಡುತ್ತೇವೆ ಅಂತ ಡಿಕೆಶಿ ಹೇಳಿದ್ದಾರೆ.

ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ನೇತೃತ್ವದಲ್ಲಿ ಈಚೆಗೆ ಉಪಗುತ್ತಿಗೆದಾರರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದರು. ಉಡುಪಿ ಪೊಲೀಸರ ವಿಚಾರಣೆಗೆ ಹಾಜರಾಗದ ಇವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಸಂತೋಷ್ ಪಾಟೀಲ ಹಲವು ಕಾಮಗಾರಿಗಳನ್ನು ಮಾಡಿಸಿದ್ದರು.

ಕಾಮಗಾರಿ ಮಂಜೂರಾತಿ ಪಡೆಯುವ ವೇಳೆ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಲೆಟರ್ ಹೆಡ್ ಮೂಲಕವೇ ಮೃತ ಸಂತೋಷ್ ಪಾಟೀಲ ಕಾಮಗಾರಿಯ ವಿವರಗಳನ್ನು ಈಶ್ವರಪ್ಪ ಅವರಿಗೆ ಒದಗಿಸಿ, ಅನುದಾನ ಬಿಡುಗಡೆಗೆ ಮನವಿ ಮಾಡಿದ್ದರು. ಆಗ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ಮೌಖಿಕ ಸೂಚನೆ ಮೇರೆಗೆ ₹ 4.12 ಕೋಟಿ ವೆಚ್ಚದಲ್ಲಿ 108 ಕಾಮಗಾರಿ ಮಾಡಿಸಿದ್ದೇನೆ ಎಂದು ಸಂತೋಷ ಪಾಟೀಲ್ ಹೇಳಿದ್ದರು.

ಇದನ್ನೂ ಓದಿ

‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

‘ಕೆಜಿಎಫ್​ 2’ನಲ್ಲಿ ರವೀನಾ ಟಂಡನ್​ ಕಂಡು ಥಿಯೇಟರ್​ ಪರದೆಗೆ ದುಡ್ಡು ಎಸೆದ ಫ್ಯಾನ್ಸ್​; ವಿಡಿಯೋ ಹಂಚಿಕೊಂಡ ನಟಿ

Published On - 10:24 am, Wed, 20 April 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ