ಸಚಿವ ಮುರುಗೇಶ್ ನಿರಾಣಿ ಭೇಟಿ ಬಳಿಕ ಮೃದುವಾದ ಸಂತೋಷ್ ಕುಟುಂಬಸ್ಥರು, ಸಂತೋಷ್ ಸಾವು ವಿಧಿಲಿಖಿತ ಎಂದ ಸೋದರ ಪ್ರಶಾಂತ್

Minister Murugesh Nirani: ಸಂತೋಷ್ ಕುಟುಂಬಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಬಿಜೆಪಿ ವರಿಷ್ಠರು ಭರವಸೆ ನೀಡಿದ್ದಾರೆ.  ಸರ್ಕಾರ ನಮ್ಮ ಪರ ಇರುವುದಾಗಿ ಸಚಿವ ನಿರಾಣಿ ತಿಳಿಸಿದ್ದಾರೆ. ನಿನ್ನೆ ನಮ್ಮ ಮನೆಗೆ ಭೇಟಿ ನೀಡಿದ್ದ ವೇಳೆ ಇದನ್ನ ತಿಳಿಸಿದ್ದಾರೆ. ನಮಗೆ ಎಲ್ಲಾ ಕೆಲಸ ಮಾಡಿಕೊಡುವುದಾಗಿ ಹೇಳಿದ್ದಾರೆ ಎಂದು ಮೃತ ಸಂತೋಷ್ ಸೋದರ ಪ್ರಶಾಂತ್ ತಿಳಿಸಿದ್ದಾರೆ.

ಸಚಿವ ಮುರುಗೇಶ್ ನಿರಾಣಿ ಭೇಟಿ ಬಳಿಕ ಮೃದುವಾದ ಸಂತೋಷ್ ಕುಟುಂಬಸ್ಥರು, ಸಂತೋಷ್ ಸಾವು ವಿಧಿಲಿಖಿತ ಎಂದ ಸೋದರ ಪ್ರಶಾಂತ್
ಮಾಜಿ ಸಚಿವ ಕೆಎಸ್ ಈಶ್ವರಪ್ಪ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 15, 2022 | 1:52 PM

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ (Contractor Santosh suicide) ಸಬಂಧಪಟ್ಟಂತೆ ಗುರುವಾರ ಸಂಜೆ ನಡೆದ ಕ್ಷಿಪ್ರ ಬೆಳವಣಿಗೆಗಳಲ್ಲಿ ಪ್ರಕರಣದ ಪ್ರಥಮ ಆರೋಪಿ, ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್​ ಈಶ್ವರಪ್ಪ ಅವರು ತಮ್ಮ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ (KS Eshwarappa Resignation). ಅತ್ತ ಈಶ್ವರಪ್ಪ ಅವರಿಂದ ರಾಜೀನಾಮೆ ನಿರ್ಧಾರ ಹೊರಬೀಳುತ್ತಿದ್ದಂತೆ ಇತ್ತ ಗಣಿ ಸಚಿವ ಮುರುಗೇಶ್​ ನಿರಾಣಿ (Minister Murugesh Nirani) ಅವರು ಬೆಳಗಾವಿಯಲ್ಲಿ ಸಂತೋಷ್ ಪಾಟೀಲ್ ನಿವಾಸಕ್ಕೆ ತೆರಳಿ, ಕುಟುಂಬಸ್ಥರನ್ನುಸಂತೈಸಿದ್ದಾರೆ. ಆ ವೇಳೆ ಸರ್ಕಾರದ ವತಿಯಿಂದ ಮೃತ ಸಂತೋಷ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಮತ್ತು ಬಾಕಿಯಿರುವ ಕಾಮಗಾರಿ ಯೋಜನಾ ಮೊತ್ತವನ್ನು ಪಾವತಸುವ ಭರವಸೆ ನೀಡಿದ್ದಾರೆ. ಜೊತೆಗೆ ವೈಯಕ್ತಿವಾಗಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಹಣವನ್ನೂ ನೀಡಿದ್ದಾರೆ. ಈ ಬೆಳವಣಿಗೆಗಳ ತರುವಾಯ ಸಂತೋಷ್ ಕುಟುಂಬಸ್ಥರು ತಮ್ಮಪಟ್ಟನ್ನು ಸಡಿಲಿಸಿದ್ದು, ಸರ್ಕಾರದ ಬಗ್ಗೆ ಮೃಧು ಧೋರಣೆ ತಳೆದಂತೆ ಕಂಡುಬಂದಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ತಿಥಿ ಕಾರ್ಯದ ಬಳಿಕ ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರ ಸೋದರ, ದೊಡ್ಡಪ್ಪನ ಮಗ ಪ್ರಶಾಂತ್ ಅವರು ಸಂತೋಷ್ ಆತ್ಮಹತ್ಯೆ ವಿಧಿಲಿಖಿತವೆಂದು ಹೇಳಿದ್ದಾರೆ. ಜೊತೆಗೆ ಕೆ.ಎಸ್. ಈಶ್ವರಪ್ಪ ಬಂಧಿಸುವುದು ಇಲಾಖೆಗೆ ಬಿಟ್ಟಿದ್ದು. ನಾವು ಈಗ ದೂರು ನೀಡಿದ್ದೇವೆ ತನಿಖೆ ನಡೆಯುತ್ತಿದೆ. ಇಲಾಖೆಯಿಂದ ಏನು ಕ್ರಮವಾಗತ್ತೋ ಅವರಿಗೆ ಬಿಟ್ಟಿದ್ದು. ಪೊಲೀಸರು ಮತ್ತು ಸರ್ಕಾರ ಅದನ್ನು ನೋಡಿಕೊಳ್ಳುತ್ತದೆ ಅಂದಿದ್ದಾರೆ.

ಸಂತೋಷ್ ಕುಟುಂಬಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಬಿಜೆಪಿ ವರಿಷ್ಠರು ಭರವಸೆ ನೀಡಿದ್ದಾರೆ. ಸಂತೋಷ್ ಪತ್ನಿಗೆ ಸರ್ಕಾರಿ ನೌಕರಿ ಕೊಡುವ ಭರವಸೆ ನೀಡಿದ್ದಾರೆ. ಕಾಮಗಾರಿಗೆ ಅನುಮೋದನೆ ನೀಡಿ ಬಿಲ್ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಬಿಲ್ ಬಿಡುಗಡೆ ಮಾಡುವ ಆಶ್ವಾಸನೆಯನ್ನು ಕೊಟ್ಟಿದ್ದಾರೆ. ಸರ್ಕಾರ ನಮ್ಮ ಪರ ಇರುವುದಾಗಿ ಸಚಿವ ನಿರಾಣಿ ತಿಳಿಸಿದ್ದಾರೆ. ನಿನ್ನೆ ನಮ್ಮ ಮನೆಗೆ ಭೇಟಿ ನೀಡಿದ್ದ ವೇಳೆ ಇದನ್ನ ತಿಳಿಸಿದ್ದಾರೆ. ನಮಗೆ ಎಲ್ಲಾ ಕೆಲಸ ಮಾಡಿಕೊಡುವುದಾಗಿ ಹೇಳಿದ್ದಾರೆ ಎಂದು ಪ್ರಶಾಂತ್ ತಿಳಿಸಿದ್ದಾರೆ.

ಸಾಫ್ಟ್ ಆದ್ರಾ ಸಂತೋಷ್ ಪಾಟೀಲ್ ಸಹೋದರ.. ಈಶ್ವರಪ್ಪ ಬಂಧನ ಅವರಿಗೆ ಬಿಟ್ಟಿದ್ದು ಅಂದ್ರು

ಇದೂ ಓದಿ: ಸಂತೋಷ್‌ ಮನೆಗೆ ಸಚಿವ ನಿರಾಣಿ ಭೇಟಿ: ಪತ್ನಿಗೆ ನೌಕರಿ, ಕಾಮಗಾರಿ ಬಾಕಿ ಬಿಲ್ ಬಿಡುಗಡೆಗೆ ಸರ್ಕಾರದಿಂದ ಕ್ರಮದ ಭರವಸೆ

Published On - 1:39 pm, Fri, 15 April 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್