ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಸಂಜಯ್ ಪಾಟೀಲ್ ಮನೆ ಎದುರು ‘ಕೈ’ ಕಾರ್ಯಕರ್ತೆಯರಿಂದ ಪ್ರತಿಭಟನೆ

ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಬಗ್ಗೆ ಸಂಜಯ್ ಪಾಟೀಲ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ರೊಚ್ಚಿಗೆದ್ದ ‘ಕೈ’ ಕಾರ್ಯಕರ್ತೆಯರು ಬೆಳಗಾವಿಯ ಆದರ್ಶ ನಗರದಲ್ಲಿರುವ ಮಾಜಿ ಶಾಸಕ ಸಂಜಯ್ ಪಾಟೀಲ್(Sanjay Patil) ಮನೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಸಂಜಯ್ ಪಾಟೀಲ್ ಮನೆ ಎದುರು ‘ಕೈ’ ಕಾರ್ಯಕರ್ತೆಯರಿಂದ ಪ್ರತಿಭಟನೆ
ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಸಂಜಯ್ ಪಾಟೀಲ್ ಮನೆ ಎದುರು ‘ಕೈ’ ಕಾರ್ಯಕರ್ತೆಯರಿಂದ ಪ್ರತಿಭಟನೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 13, 2024 | 11:09 PM

ಬೆಳಗಾವಿ, ಏ.13: ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಬಗ್ಗೆ ಸಂಜಯ್ ಪಾಟೀಲ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ರೊಚ್ಚಿಗೆದ್ದ ‘ಕೈ’ ಕಾರ್ಯಕರ್ತೆಯರು ಬೆಳಗಾವಿಯ ಆದರ್ಶ ನಗರದಲ್ಲಿರುವ ಮಾಜಿ ಶಾಸಕ ಸಂಜಯ್ ಪಾಟೀಲ್(Sanjay Patil) ಮನೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಸದಸ್ಯೆ ಆಯಿಷಾ ಸನದಿ ನೇತೃತ್ವದಲ್ಲಿ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸುತ್ತಿದ್ದು, ಪಾಟೀಲ್ ಭಾವಚಿತ್ರಕ್ಕೆ ಹೂವಿನ ಹಾರ, ಬ್ಲೌಸ್, ಬಳೆ ಇಟ್ಟು, ಚಪ್ಪಲಿ ಏಟು ನೀಡಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷಮೆಯಾಚಿಸುವಂತೆ ಆಗ್ರಹ

ರಸ್ತೆಯಲ್ಲಿ ಧರಣಿ ಕುಳಿತು ಸಂಜಯ್ ಪಾಟೀಲ್ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಮುನ್ನೆಚ್ಚರಿಕೆಯಿಂದ ಸಂಜಯ್ ಪಾಟೀಲ್ ನಿವಾಸದ ಬಳಿ ಪೊಲೀಸ್ ಭದ್ರತೆ ಅಳವಡಿಸಲಾಗಿದೆ. ಇನ್ನು ಪ್ರತಿಭಟನೆ ವೇಳೆ ಸಂಜಯ್ ಪಾಟೀಲ್ ಕಾರು ಚಾಲಕ ಮಹಿಳೆಯರು ಪ್ರತಿಭಟನೆ ಮಾಡುತ್ತಿದ್ದನ್ನು ವಿಡಿಯೋ ಮಾಡುತ್ತಿದ್ದ ಹಿನ್ನಲೆ ಏಕೆ ವಿಡಿಯೋ ಮಾಡುತ್ತಿದ್ದೀಯಾ ಎಂದು ಎಳೆದಾಡಿ ಕಪಾಳಮೋಕ್ಷ ಮಾಡಿದ್ದಾರೆ. ಎಚ್ಚೆತ್ತ ಪೊಲೀಸರು, ಮಹಿಳೆಯರನ್ನ ಸಮಾಧಾನಪಡಿಸಿ ಚಾಲಕನನ್ನು ಸ್ಥಳದಿಂದ ಕಳಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತೆಯರ ಹೋರಾಟಕ್ಕೆ ಮಂಗಳಮುಖಿಯರು ಸಾಥ್‌ ನೀಡಿದ್ದಾರೆ. ಸ್ಥಳಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರೋಹನ್ ಜಗದೀಶ್ ಆಗಮಿಸಿ ಇಬ್ಬರು ಡಿಸಿಪಿಗಳಿಂದ ಕಾಂಗ್ರೆಸ್ ಕಾರ್ಯಕರ್ತೆಯರ ಮನವೊಲಿಸಲು ಯತ್ನಿಸಿದ್ದಾರೆ.

ಇದನ್ನೂ ಓದಿ:ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರಕ್ಕೆ ಸಾಹುಕಾರ್ ಎಂಟ್ರಿ; ವಿವಾದಾತ್ಮಕ ಹೇಳಿಕೆ ನೀಡಿದ ಸಂಜಯ್ ಪಾಟೀಲ್ 

ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಜಯ್ ಪಾಟೀಲ್

ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಸಂಜಯ್​ ಪಾಟೀಲ್​, ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಮಾತನಾಡಲು ಹೋಗಿ ವಿವಾದವೊಂದನ್ನ ಮೈಮೇಲೆ ಎಳೆದುಕೊಂಡಿದ್ದರು. ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಅತೀ ಹೆಚ್ಚು ಮಹಿಳೆಯರು ಸಮಾವೇಶದಲ್ಲಿ ಭಾಗಿಯಾಗಿದ್ದೀರಿ, ಇದರಿಂದ ಅವರಿಗೆ ಇಂದು ರಾತ್ರಿ ನಿದ್ದೆ ಬರುವುದಿಲ್ಲ. ಅದರಲ್ಲೂ ಇಂದು ರಮೇಶ್ ಜಾರಕಿಹೊಳಿ ಕೂಡ ಪ್ರಚಾರಕ್ಕೆ ಬಂದಿದ್ದರಿಂದ ಮಾತ್ರೆ ಜೊತೆಗೆ ಒಂದು ಪೆಗ್ ಎಕ್ಸ್ಟ್ರಾ ಹಾಕಿಕೊಳ್ಳಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ