ಕರ್ನಾಟಕಕ್ಕೆ ಕೊರೊನಾ ಆತಂಕ: ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಕರ್ನಾಟಕ ರಾಜ್ಯದಲ್ಲಿ ಹೆಚ್ಚುವರಿ ಬೆಡ್​​ ಮತ್ತು ಆಕ್ಸಿಜನ್​​ ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ನಾಳೆಯಿಂದಲೇ (ಜನವರಿ 3) ರಾಜ್ಯದಲ್ಲಿ 15ರಿಂದ 18 ವರ್ಷದವರಿಗೆ ಲಸಿಕೆ ನೀಡಲಾಗುತ್ತೆ ಎಂದು ತಿಳಿಸಿದರು.

ಕರ್ನಾಟಕಕ್ಕೆ ಕೊರೊನಾ ಆತಂಕ: ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 02, 2022 | 6:01 PM

ಬೆಳಗಾವಿ: ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಪ್ರಕರಣಗಳ ಸಂಖ್ಯೆ (Covid 3rd Wave) ಹೆಚ್ಚಾಗುತ್ತಿದೆ. ಒಮಿಕ್ರಾನ್ ಪ್ರಕರಣಗಳೂ ಅಲ್ಲಲ್ಲಿ ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavarj Bommai) ಹೇಳಿದರು. ರಾಜ್ಯದಲ್ಲಿ ಹೆಚ್ಚುವರಿ ಬೆಡ್​​ ಮತ್ತು ಆಕ್ಸಿಜನ್​​ ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ನಾಳೆಯಿಂದಲೇ (ಜನವರಿ 3) ರಾಜ್ಯದಲ್ಲಿ 15ರಿಂದ 18 ವರ್ಷದವರಿಗೆ ಲಸಿಕೆ ನೀಡಲಾಗುತ್ತೆ ಎಂದು ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಹಲವು ಕ್ರಮ ಜರುಗಿಸಲಿದೆ. ನೈಟ್​ ಕರ್ಫ್ಯೂ ವಿಸ್ತರಣೆ ಬಗ್ಗೆ ನಾಳೆ ಅಥವಾ ನಾಡಿದ್ದು ನಿರ್ಧರಿಸುತ್ತೇವೆ. ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳನ್ನು ಜನರು ಕಡ್ಡಾಯವಾಗಿ ಪಾಲಿಸಬೇಕು. ಕೊರೊನಾ ಪಿಡುಗು ವ್ಯಾಪಕವಾಗಿ ಹರಡಿದ್ದ ಕಾರಣ ರಾಜ್ಯದಲ್ಲಿ ಈ ಹಿಂದೆ ಲಾಕ್​ಡೌನ್​ ಮಾಡಲಾಗಿತ್ತು. ಮತ್ತೊಮ್ಮೆ ಲಾಕ್​​ಡೌನ್​​ ಮಾಡಬಾರದು ಎಂಬ ಕಾರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಜನರು ಸಹಕಾರ ನೀಡದಿದ್ದರೆ ಲಾಕ್​ಡೌನ್ ಘೋಷಿಸುವುದು​ ಅನಿವಾರ್ಯವಾಗುತ್ತದೆ ಎಂದರು.

ಪರಿಸ್ಥಿತಿ ಸುಧಾರಿಸದಿದ್ದರೆ ಕಠಿಣ ಕ್ರಮ ಅನಿವಾರ್ಯ: ಆರ್.ಅಶೋಕ್ ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಕೊರೊನಾ ಪಿಡುಗಿನ ಆತಂಕ ಮತ್ತೆ ಕಾಣಿಸಿಕೊಂಡಿದೆ. ಬೆಂಗಳೂರನ್ನು ರೆಡ್​ಜೋನ್ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ರಾಜ್ಯದಲ್ಲಿ ಕೊರೊನಾ 3ನೇ ಅಲೆಯ ಭೀತಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್ ಸೇರಿದಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಸರ್ಕಾರದ ಚಿಂತನೆಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಕಾಣಿಸಿಕೊಳ್ಳುವ ವಾತಾವರಣ ನಿರ್ಮಾಣವಾಗಿದೆ. ಕೊರೊನಾ ಸೋಂಕಿನ ನಿಯಂತ್ರಣ ಸಂಬಂಧ ಮತ್ತೊಮ್ಮೆ ಸಭೆ ಕರೆಯಲಾಗಿದೆ. ಜನವರಿ 7ರೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಕೇಂದ್ರ ಸರ್ಕಾರವು ಬೆಂಗಳೂರನ್ನು ರೆಡ್​ ಝೋನ್ ಎಂದು ಘೋಷಿಸಿರುವುದರಿಂದ ಕಠಿಣ ನಿಯಮಗಳ ಜಾರಿ ಅನಿವಾರ್ಯವಾಗಬಹುದು. ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ತಜ್ಞರು ನೀಡುವ ಸಲಹೆಗಳನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ. ಸಾಮಾಜಿಕ ಅಂತರ ಪಾಲನೆಯೂ ಸೇರಿದಂತೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಜನರು ಮುನ್ನೆಚ್ಚರಿಕೆ ವಹಿಸುವುದು ಅನಿವಾರ್ಯ. ನಿರ್ಲಕ್ಷ್ಯ ವಹಿಸಿದರೆ ಲಾಕ್‌ಡೌನ್ ಮಾಡಬೇಕಾಗುತ್ತದ ಎಂದು ಪರೋಕ್ಷವಾಗಿ ಕಠಿಣ ನಿರ್ಧಾರದ ಸುಳಿವು ನೀಡಿದರು.

ಇದನ್ನೂ ಓದಿ: Covid 3rd Wave: ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಭೀತಿ: ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ, ಲಾಕ್​ಡೌನ್ ಸುಳಿವು ಕೊಟ್ಟ ಸಚಿವ ಅಶೋಕ್ ಇದನ್ನೂ ಓದಿ: 15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ; ವ್ಯಾಕ್ಸಿನ್ ಪಡೆದ ಮಕ್ಕಳಿಗೆ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್