ಬೆಳಗಾವಿಯಲ್ಲಿ ವಿದ್ಯುತ್ ಪ್ರವಹಿಸಿ ದಂಪತಿ, ಮೊಮ್ಮಗಳು ಸಾವು; ಮತ್ತೊಂದೆಡೆ ಅಪಘಾತದಲ್ಲಿ ಇಬ್ಬರು ಸಾವು

ನಿರ್ಮಾಣ ಹಂತದ ಕಟ್ಟಡದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಈರಪ್ಪ ಮೋಟರ್ ಆನ್​​ ಮಾಡಲು ಹೋಗಿದ್ದಾಗ ವಿದ್ಯುತ್​​ ಶಾಕ್​​ ಹೊಡೆದಿದೆ. ಈ ವೇಳೆ ವಿದ್ಯುತ್​ ಪ್ರವಹಿಸಿ ನೆಲಕ್ಕೆ ಬಿದ್ದು ಒದ್ದಾಡುತ್ತಿದ್ದ ಪತಿ ಈರಪ್ಪ ರಕ್ಷಣೆಗೆ ಹೋದ ಪತ್ನಿ ಶಾಂತವ್ವ ಹಾಗೂ ಮೊಮ್ಮಗಳು ಅನ್ನಪೂರ್ಣಾಗೂ ವಿದ್ಯುತ್​ ಪ್ರವಹಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿಯಲ್ಲಿ ವಿದ್ಯುತ್ ಪ್ರವಹಿಸಿ ದಂಪತಿ, ಮೊಮ್ಮಗಳು ಸಾವು; ಮತ್ತೊಂದೆಡೆ ಅಪಘಾತದಲ್ಲಿ ಇಬ್ಬರು ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Aug 12, 2023 | 11:01 AM

ಬೆಳಗಾವಿ, ಆ.12: ವಿದ್ಯುತ್ ಪ್ರವಹಿಸಿ(Electrocution)  ದಂಪತಿ ಹಾಗೂ ಮೊಮ್ಮಗಳು ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೆಳಗಾವಿಯ ಶಾಹುನಗರದಲ್ಲಿ ನಡೆದಿದೆ(Death). ಪತಿ ಈರಪ್ಪ ರಾಠೋಡ(53), ಪತ್ನಿ ಶಾಂತವ್ವ ರಾಠೋಡ(45) ಮೊಮ್ಮಗಳು ಅನ್ನಪೂರ್ಣಾ ರಾಠೋಡ(13) ಮೃತ ದುರ್ದೈವಿಗಳು.

ಬೆಳಗಾವಿ ನಗರದಲ್ಲಿ ಬೆಳಂ ಬೆಳಗ್ಗೆ ಘನಘೋರ ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಈರಪ್ಪ ಮೋಟರ್ ಆನ್​​ ಮಾಡಲು ಹೋಗಿದ್ದಾಗ ವಿದ್ಯುತ್​​ ಶಾಕ್​​ ಹೊಡೆದಿದೆ. ಈ ವೇಳೆ ವಿದ್ಯುತ್​ ಪ್ರವಹಿಸಿ ನೆಲಕ್ಕೆ ಬಿದ್ದು ಒದ್ದಾಡುತ್ತಿದ್ದ ಪತಿ ಈರಪ್ಪ ರಕ್ಷಣೆಗೆ ಹೋದ ಪತ್ನಿ ಶಾಂತವ್ವ ಹಾಗೂ ಮೊಮ್ಮಗಳು ಅನ್ನಪೂರ್ಣಾಗೂ ವಿದ್ಯುತ್​ ಪ್ರವಹಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾ ನಿವಾಸಿಗಳು. ಘಟನಾ ಸ್ಥಳಕ್ಕೆ ಬೆಳಗಾವಿಯ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವೆ ಹೆಬ್ಬಾಳ್ಕರ್​​​​​​​​​

ಇನ್ನು ಈ ಘಟನೆ ಸಂಬಂಧ ಕಟ್ಟಡದ ಮಾಲೀಕ, ಇಂಜಿನಿಯರ್​ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಕಾರು-ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು-ಲಾರಿ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಾರಿನಲ್ಲಿದ್ದ ಬಿ.ಮನೋಹರ(38), ಪ್ರಿಯಾಂಕಾ(23) ಮೃತ ದುರ್ದೈವಿಗಳು. ಗಾಯಾಳು ಮೊನಾಲಿಸಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ಬಿ.ಮನೋಹರ, ಪ್ರಿಯಾಂಕಾ ಬೆಂಗಳೂರು ಮೂಲದವರು. ಬೆಂಗಳೂರಿನಿಂದ ಮುಂಬೈ ಕಡೆ ಕಾರಿನಲ್ಲಿ ತೆರಳ್ತಿದ್ದಾಗ ಅಪಘಾತ ಸಂಭವಿಸಿದೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣ; ಸ್ಯಾಂಡಲ್​ವುಡ್ ನಟ ವೀರೇಂದ್ರ ಬಾಬು ಅರೆಸ್ಟ್

ಕುಡಿದ ಮತ್ತಿನಲ್ಲಿ ನೇಣಿಗೆ ಶರಣಾದ ವ್ಯಕ್ತಿ

ಲಿವಿಂಗ್‌ ಟು ಗೆದರ್​ನಲ್ಲಿದ್ದ ವ್ಯಕ್ತಿ ಕುಡಿದ ಮತ್ತಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಬೈರೆಗೌಡನಹಳ್ಳಿಯಲ್ಲಿ ರಾಜು(30) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 6 ತಿಂಗಳ ಹಿಂದೆ ಬೈರೆಗೌಡನಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ನಾಗಶೆಟ್ಟಿಹಳ್ಳಿಯ ಮಮತಾ ಜೊತೆ ಲಿವಿಂಗ್‌ ಟು ಗೆದರ್​ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ರಾಜು ಪತ್ನಿಯನ್ನು ಬಿಟ್ಟಿದ್ದರು. ಹಾಗೂ ಮಮತಾ ಕೂಡ ಪತಿಯನ್ನು ಬಿಟ್ಟಿದ್ದರು. ಇಬ್ಬರೂ ಲಿವಿಂಗ್‌ ಟು ಗೆದರ್​ನಲ್ಲಿದ್ದರು. ರಾತ್ರಿ ಮದ್ಯದ ನಶೆಯಲ್ಲಿ ಸಣ್ಣಪುಟ್ಟ ಗಲಾಟೆ ನಡೆದಿತ್ತು. ಗಲಾಟೆಯಿಂದಾಗಿ ಮಮತಾ ಮನೆಯಿಂದ ಆಚೆ ಬಂದಿದ್ದರು. ಸ್ವಲ್ಪ ಸಮಯದ ಬಳಿಕ ಮನೆಗೆ ತೆರಳಿದಾಗ ಕೃತ್ಯ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆಗೆ ನೆಲಮಂಗಲ ತಾಲೂಕು ಆಸ್ಪತ್ರೆಗೆ ಶವ ರವಾನಿಸಲಾಗಿದೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:37 am, Sat, 12 August 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ