ಬೆಳಗಾವಿ ಗಡಿಯಲ್ಲಿ ಹೈಅಲರ್ಟ್: ಶಬರಿಮಲೆ, ಮಹಾರಾಷ್ಟ್ರದಿಂದ ಬರುವವರಿಗೆ RTPCR ಟೆಸ್ಟ್​​​ ಕಡ್ಡಾಯ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ಹಿನ್ನಲೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಮಹತ್ವದ ಸಭೆ ನಡೆದಿದ್ದು, ಮಹಾರಾಷ್ಟ್ರ ಕರ್ನಾಟಕ ಗಡಿಯಲ್ಲಿ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಚರ್ಚೆಯಾಗಿದೆ. ಈ ವೇಳೆ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಬೆಳಗಾವಿ ಗಡಿಯಲ್ಲಿ ಹೈಅಲರ್ಟ್: ಶಬರಿಮಲೆ, ಮಹಾರಾಷ್ಟ್ರದಿಂದ ಬರುವವರಿಗೆ RTPCR ಟೆಸ್ಟ್​​​ ಕಡ್ಡಾಯ
ಸಾಂದರ್ಭಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Dec 21, 2023 | 3:24 PM

ಬೆಳಗಾವಿ, (ಡಿಸೆಂಬರ್ 21): ಕರ್ನಾಟಕದಲ್ಲಿ ಮತ್ತೆ ಕೊರೋನಾ (Coronavirus) ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ (Belagavi) ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಇಲ್ಲಿನ ಅಧಿಕಾರಿಗಳು ಮುಂದಾಗಿದ್ದಾರೆ. ಈ ಬಗ್ಗೆ ಇಂದು (ಡಿಸೆಂಬರ್ 21) ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಗಣೇಶ್​​ ಹುಕ್ಕೇರಿ ನೇತೃತ್ವದಲ್ಲಿ ಕೋವಿಡ್​​ ಸಭೆ ನಡೆದಿದ್ದು. ನೆಗಡಿ, ಕೆಮ್ಮು, ಜ್ವರದ ಲಕ್ಷಣ ಇದ್ದವರಿಗೆ ಆರ್​​ಟಿಪಿಸಿಆರ್​​​​ ಟೆಸ್ಟ್​​​ ಕಡ್ಡಾಯ ಹಾಗೂ ಕೇರಳದ ಶಬರಿಮಲೆಗೆ ತೆರಳಿದವರಿಗೂ ಕಡ್ಡಾಯವಾಗಿ ತಪಾಸಣೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರ, ಕರ್ನಾಟಕ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸುವ ಕುರಿತು ಚರ್ಚೆ ನಡೆದಿದ್ದು, ಡಿಸೆಂಬರ್​​ 23ರಿಂದ ಪ್ರತಿ ತಾಲೂಕಿನಲ್ಲಿ 5 ಸಾವಿರ ಕೋವಿಡ್​​ ತಪಾಸಣೆಗೆ ಸೂಚನೆ ನೀಡಲಾಗಿದೆ. ಪಿಹೆಚ್​​​​ಸಿ, ಸಿಹೆಚ್​​​ಸಿ ತಾಲೂಕು ಆಸ್ಪತ್ರೆಯಲ್ಲಿ RTPCR​​ ಟೆಸ್ಟ್​​​ಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಸಭೆ ಅಂತ್ಯ: ಕ್ರಿಸ್​ಮಸ್​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದ ಸಿಎಂ

ಮಹಾರಾಷ್ಟ್ರದಿಂದ ಬರುವವರ ಮೇಲೆ ಕೋವಿಡ್​​​ ತಪಾಸಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಗೇ ನೆಗಡಿ, ಕೆಮ್ಮು, ಜ್ವರದ ಲಕ್ಷಣ ಇದ್ದವರಿಗೆ ಆರ್​​ಟಿಪಿಸಿಆರ್​​​​ ಟೆಸ್ಟ್​​​ ಕಡ್ಡಾಯ ಮಾಡಲಾಗಿದ್ದು, ಕೇರಳದ ಶಬರಿಮಲೆಗೆ ತೆರಳಿದವರಿಗೂ ಕಡ್ಡಾಯ ತಪಾಸಣೆಗೆ ಸೂಚಿಸಲಾಗಿದೆ. ಅಲ್ಲದೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್​​ ಬೆಡ್​​​ ಇರಿಸಬೇಕೆಂದು ಶಾಸಕ ಗಣೇಶ್​​ ಹುಕ್ಕೇರಿ ಸೂಚನೆ ನೀಡಿದ್ದಾರೆ.

ಈ ಸಭೆಯಲ್ಲಿ ತಾಲೂಕು ಕಂದಾಯ ಇಲಾಖೆ, ಪೊಲೀಸ್, ಆರೋಗ್ಯ ಇಲಾಖೆ ಹಾಗೂ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಭಾಗಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು