Karnataka News: ಬರೋಬ್ಬರಿ 200 ಕ್ವಿಂಟಾಲ್ ಗೋವಿನ ಚರ್ಮ ಜಪ್ತಿ, ಹುಲಿ ದಾಳಿಗೆ ಎಂಟು ಆಡು ಬಲಿ

ಕರ್ನಾಟಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಹಾಗಾದರೆ, ಇಷ್ಟೊಂದು ಪ್ರಮಾಣದ ಗೋವಿನ ಚರ್ಮ ಎಲ್ಲಿಂದ ಬಂತು? ಎಂದು ಪತ್ತೆ ಹಚ್ಚಿ ತನಿಖೆ ನಡೆಸಲು ಪೊಲೀಸರಿಗೆ ಸಚಿವರು ಸೂಚನೆ ನೀಡಿದ್ದಾರೆ.

Karnataka News: ಬರೋಬ್ಬರಿ 200 ಕ್ವಿಂಟಾಲ್ ಗೋವಿನ ಚರ್ಮ ಜಪ್ತಿ, ಹುಲಿ ದಾಳಿಗೆ ಎಂಟು ಆಡು ಬಲಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Dec 15, 2021 | 6:16 PM

ಬೆಳಗಾವಿ: ಪೊಲೀಸರು ಬರೋಬ್ಬರಿ 200 ಕ್ವಿಂಟಾಲ್​ ಗೋವಿನ ಚರ್ಮ ಜಪ್ತಿ ಮಾಡಿದ ಘಟನೆ ಬೆಳಗಾವಿಯ ಮಾರಿಹಾಳ ಎಂಬಲ್ಲಿ ನಡೆದಿದೆ. ಇಲ್ಲಿನ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 200 ಕ್ಚಿಂಟಾಲ್ ಗೋವಿನ ಚರ್ಮ ಜಪ್ತಿ ಮಾಡಲಾಗಿದೆ. ಸ್ಥಳಕ್ಕೆ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್​ ಭೇಟಿ ನೀಡಿದ್ದಾರೆ. ಟ್ರಕ್​ನಲ್ಲಿ ಅಕ್ರಮ ಸಾಗಿಸುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಹಾಗಾದರೆ, ಇಷ್ಟೊಂದು ಪ್ರಮಾಣದ ಗೋವಿನ ಚರ್ಮ ಎಲ್ಲಿಂದ ಬಂತು? ಎಂದು ಪತ್ತೆ ಹಚ್ಚಿ ತನಿಖೆ ನಡೆಸಲು ಪೊಲೀಸರಿಗೆ ಸಚಿವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಸೂಚನೆ ನೀಡಿದ್ದಾರೆ.

ಕೊಡಗು: ಜಿಲ್ಲೆಯಲ್ಲಿ ಹುಲಿ ದಾಳಿಗೆ ಎಂಟು ಆಡು ಬಲಿ ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಎಂಟು ಆಡು ಬಲಿ ಆದ ದುರ್ಘಟನೆ ನಡೆದಿದೆ. ಇಲ್ಲಿನ ವಿರಾಜಪೇಟೆ ತಾಲ್ಲೂಕಿನ ನಾಣಚ್ಚಿ ಗ್ರಾಮದಲ್ಲಿ ಘಟನೆ ನಡೆದಿದೆ. ಗದ್ದೆ ಬಯಲಿನಲ್ಲಿ ಇದ್ದ ಆಡುಗಳನ್ನು ಹುಲಿ ಕೊಂದಿದೆ. ಹುಲಿಯ ಚಲನವಲನ ಮೊಬೈಲ್ ನಲ್ಲಿ ಸೆರೆ ಆಗಿದೆ. ನಾಣಚ್ಚಿ ಅಂಗನವಾಡಿ ಸಮೀಪವೇ ಕಂಡು ಬಂದ ಹುಲಿಯಿಂದಾಗಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮನೆಮಾಡಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಸಿನಿಮಾ ಸ್ಟೈಲ್ ನಲ್ಲಿ ಕಾಪಿ ಮಾಡಿ ಸಿಕ್ಕಿ ಬಿದ್ದ ಅಭ್ಯರ್ಥಿ ಸಿನಿಮಾ ಶೈಲಿಯಲ್ಲಿ ಕಾಪಿ ಮಾಡಿ ಅಭ್ಯರ್ಥಿ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರಿಂದ ಪರೀಕ್ಷಾರ್ಥಿಯ ಬಂಧನ ಮಾಡಲಾಗಿದೆ. ವೀರನಗೌಡ ಬಂಧಿತ ಆರೋಪಿ ಆಗಿದ್ದಾನೆ. ಎಲೆಕ್ಟ್ರಾನಿಕ್ ಟ್ರಾನ್ಸ್​ಮೀಟರ್ ಬಳಸಿ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದ. ಲೋಕೋಪಯೋಗಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ನಡೆಯುತ್ತಿದ್ದ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ. ಕೆಪಿಎಸ್​ಸಿಯಿಂದ ನಡೆಯುತ್ತಿದ್ದ ಪರೀಕ್ಷೆಯಲ್ಲಿ ಘಟನೆ ನಡೆದಿದೆ. ಕಾಪಿ‌ ಮಾಡುತ್ತಿದ್ದಾಗಲೇ ಪರೀಕ್ಷಾ ಕೇಂದ್ರದ ಮುಖ್ಯಸ್ಥರ ಬಳಿ ಲಾಕ್ ಆಗಿದ್ದ. ಬಳಿಕ ಟ್ರಾನ್ಸ್​ಮೀಟರ್ ಸಹಿತ ಆರೋಪಿಯ ಬಂಧನ ಮಾಡಲಾಗಿದೆ.

ಬೆಂಗಳೂರು: ಗಾಂಜಾ ಮಾರುತ್ತಿದ್ದ ಆರೋಪಿಗಳ ಬಂಧನ ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳ ಬಂಧನ ಮಾಡಲಾಗಿದೆ. ಬ್ಯಾಟರಾಯನಪುರ ಠಾಣೆ ಪೊಲೀಸರಿಂದ ಇಬ್ಬರ ಬಂಧನ ಮಾಡಲಾಗಿದೆ. 2 ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತುಕಾನ್ ಮಂಡಲ್ ಹಾಗೂ ನಿತ್ಯಾನಂದ ಸೇಥಿ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ 8 ಕೆ.ಜಿ 500 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ: ಚಿಂದಿ ಆಯುತ್ತಿದ್ದ ಮಹಿಳೆಯರಿಬ್ಬರು ರೈಲು ಹರಿದು ಸಾವು

ಇದನ್ನೂ ಓದಿ: Crime News: ಅಪ್ರಾಪ್ತೆ ಅತ್ಯಾಚಾರ; ಮೂವರ ಬಂಧನ, ಆತ್ಮಹತ್ಯೆಗೆ ಯತ್ನಿಸಿದ್ದ ಪತ್ನಿ ಸಾವಿನ ಸುದ್ದಿ ತಿಳಿದು ಪತಿ ನೇಣಿಗೆ ಶರಣು

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?