ಎಂಇಎಸ್​ ಪುಂಡಾಟಿಕೆ: ಸುವರ್ಣ ಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆ ಎಂದ ಕರವೇ ಅಧ್ಯಕ್ಷ ನಾರಾಯಣಗೌಡ ಬೆಳಗಾವಿ ಪೊಲೀಸರ ವಶಕ್ಕೆ

ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಅವರು ಮಾತನಾಡಿದ್ದು ಸುವರ್ಣಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಇಎಸ್ ವಿರುದ್ಧ ಮಾತನಾಡದವರು ರಣಹೇಡಿಗಳು ಎಂದು ಪ್ರತಿಭಟನೆ ವೇಳೆ ಕರವೇ ಅಧ್ಯಕ್ಷ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಇಎಸ್​ ಪುಂಡಾಟಿಕೆ: ಸುವರ್ಣ ಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆ ಎಂದ ಕರವೇ ಅಧ್ಯಕ್ಷ ನಾರಾಯಣಗೌಡ ಬೆಳಗಾವಿ ಪೊಲೀಸರ ವಶಕ್ಕೆ
ಎಂಇಎಸ್​ ಪುಂಡಾಟಿಕೆ: ಸುವರ್ಣ ಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆ ಎಂದ ಕರವೇ ಅಧ್ಯಕ್ಷ ನಾರಾಯಣಗೌಡ ಬೆಳಗಾವಿ ಪೊಲೀಸರ ವಶಕ್ಕೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 20, 2021 | 1:30 PM

ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಜಂಟಿ ಅಧಿವೇಶನ ನಡೆದಿರುವಾಗಲೇ ಕಳೆದ ವಾರಾಂತ್ಯ ಶಿವಸೇನೆ ಮತ್ತು ಎಂಇಎಸ್‌ ಪುಂಡರು ಪ್ರತಿಭಟನೆಯ ಹೆಸರಿನಲ್ಲಿ ಹಿಂಸಾಚಾರಕ್ಕೆ ಕಾರಣವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಸಹ ಕರ್ನಾಟಕದ ಅಸ್ಮಿತೆ ಪ್ರಶ್ನಿಸಿ ಪ್ರತಿ ಪ್ರತಿಭಟನೆಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಅವರು ಮಾತನಾಡಿದ್ದು ಸುವರ್ಣಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಇಎಸ್ ವಿರುದ್ಧ ಮಾತನಾಡದವರು ರಣಹೇಡಿಗಳು ಎಂದು ಪ್ರತಿಭಟನೆ ವೇಳೆ ಕರವೇ ಅಧ್ಯಕ್ಷ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕರವೇ ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು ಬಸ್ಸಿನಲ್ಲಿ ಕರೆದೊಯ್ದರು. ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಕರವೇ ಕಾರ್ಯರ್ತರು ಹಾಗೂ ಪೊಲೀಸರ ಮಧ್ಯ ನೂಕೂಟ ತಳ್ಳಾಟ ನಡೆದಿದೆ. ಕರವೇ ಕಾರ್ಯಕರ್ತರನ್ನ ಅರಸ್ಟ್ ಮಾಡ್ತಿದ್ದ ಬಸ್ ಗೆ ಅಡ್ಡಲಾಗಿ ಕುಳಿತು ಇತರೆ ಕರವೇ ಕಾರ್ಯಕರ್ತರು ಪ್ರತಿಭಡನೆಯಲ್ಲಿ ತೊಡಗಿದ್ದಾರೆ. ರಸ್ತೆಯ ಮಧ್ಯೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರವೇ ಅಧ್ಯಕ್ಷ ನಾರಾಯಣಗೌಡ ಪೊಲೀಸರ ವಶಕ್ಕೆ ಈ ಪ್ರತಿಭಟನೆ ವೇಳೆ ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಾರಾಯಣಗೌಡ ಪೊಲೀಸರನ್ನು ಮುಂದಿಟ್ಟುಕೊಂಡು ಹೋರಾಟ ಹತ್ತಿಕ್ಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇನ್ನು, ಬೆಳಗಾವಿಯ ಹಿರೇಬಾಗೇವಾಡಿ ಬಳಿ ಕೆಎಸ್ಆರ್​​ಪಿ ಪೊಲೀಸ್ ವಾಹನವೇರಿ ಕರವೇ ಮಹಿಳಾ ಕಾರ್ಯಕರ್ತರು ಪ್ರತಿಭಟನೆ‌ ನಡೆಸಿದ್ದಾರೆ. ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಹಾರಾಷ್ಟ್ರದ ಲಾರಿ ತಡೆದು ಕರವೇ ಕಾರ್ಯಕರ್ತರು ಆಕ್ರೋಶ, ಜೊತೆಗೆ ಲಾರಿ ಹತ್ತಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಹಿರೇಬಾಗೇವಾಡಿ ಬಳಿ ಕನ್ನಡಪರ ಸಂಘಟನೆಗಳ ಪ್ರತಿಭಟನೆಯ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 4 ಹಿರೇಬಾಗೆವಾಡಿ ಟೋಲ್ ಬಳಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

ಬೆಳಗಾವಿಯಲ್ಲಿ ಎಂ.ಇ.ಎಸ್. ಪುಂಡಾಟಿಕೆ ಖಂಡಿಸಿ ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಕರವೇ (ಹೆಚ್.ಶಿವರಾಮೇಗೌಡರ)ಬಣದಿಂದ ಪ್ರತಿಭಟನೆ ನಡೆದಿದೆ. ಮಾಹಾರಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರತಿಕೃತಿಗೆ ಚಪ್ಪಲಿ ಸೇವೆ ಮಾಡಿ, ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂ.ಇ.ಎಸ್. ಸಂಘಟನೆ ನಿಷೇಧಿಸಲು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ದಾವಣಗೆರೆ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕ ವಿರೋಧಿಸಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಬೆಳಗಾವಿ ಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಪ್ರಕರಣಕ್ಕೆ ಖಂಡನೆ ವ್ಯಕ್ತಪಡಿಸಿ ದಾವಣಗೆರೆಯಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ದಾವಣಗೆರೆ ನಗರದ ಪಿಬಿ ರಸ್ತೆಯಲ್ಲಿ ಇರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಆರೋಪಿಗಳನ್ನ ಬಂಧಿಸಬೇಕು. ತಕ್ಕ ಶಿಕ್ಷೆ ವಿಧಿಸಬೇಕು. ಎಂಇಎಸ್ ಪುಂಡರಿಗೆ ಬಿಸಿ ಮುಟ್ಟಿಸುವ ಕೆಲ್ಸಾ ಸರ್ಕಾರ ತಕ್ಷಣ ಮಾಡಬೇಕು ಎಂದು ಆಕ್ರಹಿಸಿದ್ದಾರೆ.

Published On - 12:34 pm, Mon, 20 December 21

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ