AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸಿಲಿಂಡರ್ ಸ್ಫೋಟಕ್ಕೆ ನಾಲ್ಕು ಕುರಿಗಳು ಸಜೀವ ದಹನ, ಮನೆ, 4 ಲಕ್ಷ ಹಣ ಭಸ್ಮ!

ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ಸಂಭವಿಸಿದ ಸಿಲಿಂಡರ್​ ಸ್ಫೋಟಕ್ಕೆ ನಾಲ್ಕು ಕುರಿಗಳು ಸಾವನ್ನಪ್ಪಿದ್ದು, ಮನೆ ಸುಟ್ಟು ಕರಕಲಾಗಿದೆ. ಬಲಿಪಾಢ್ಯಮಿಯಂದು ಟ್ರ್ಯಾಕ್ಟರ್ ಖರೀದಿಸಲು ನಿರ್ಧರಿಸಿ ಬ್ಯಾಂಕ್​ನಿಂದ ಹಣ ತೆಗೆದು ಮನೆಯಲ್ಲಿಡಲಾಗಿತ್ತು. ಈ ಹಣ ಕೂಡ ಬೆಂಕಿಗೆ ಆಹುತಿಯಾಗಿದೆ.

ಬೆಳಗಾವಿ: ಸಿಲಿಂಡರ್ ಸ್ಫೋಟಕ್ಕೆ ನಾಲ್ಕು ಕುರಿಗಳು ಸಜೀವ ದಹನ, ಮನೆ, 4 ಲಕ್ಷ ಹಣ ಭಸ್ಮ!
ಬೆಳಗಾವಿಯ ಬಸವನಕುಡಚಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಗೊಂಡು ಸುಟ್ಟು ಭಸ್ಮವಾದ ಮನೆ
Sahadev Mane
| Edited By: Rakesh Nayak Manchi|

Updated on: Nov 13, 2023 | 4:12 PM

Share

ಬೆಳಗಾವಿ, ನ.13: ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ಸಂಭವಿಸಿದ ಸಿಲಿಂಡರ್​ ಸ್ಫೋಟಕ್ಕೆ (Cylinder Explosion) ನಾಲ್ಕು ಕುರಿಗಳು ಸಾವನ್ನಪ್ಪಿದ್ದು, ಮನೆ ಸುಟ್ಟು ಕರಕಲಾಗಿದೆ. ಬಲಿಪಾಢ್ಯಮಿಯಂದು ಟ್ರ್ಯಾಕ್ಟರ್ ಖರೀದಿಸಲು ನಿರ್ಧರಿಸಿ ಬ್ಯಾಂಕ್​ನಿಂದ ಹಣ ತೆಗೆದು ಮನೆಯಲ್ಲಿಡಲಾಗಿತ್ತು. ಈ ಹಣ ಕೂಡ ಬೆಂಕಿಗೆ ಆಹುತಿಯಾಗಿದೆ.

ಅಭಿಷೇಕ್ ಕೌಲಗಿ ಎಂಬುವವರಿಗೆ ಸೇರಿದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಸ್ಫೋಟದ ವೇಳೆ ಮನೆ ಮಂದಿ ಯಾರೂ ಇಲ್ಲದ ಪರಿಣಾಮ ಮಾನವ ಜೀವಹಾನಿ ಸಂಭವಿಸಿಲ್ಲ. ಆದರೆ, ನಾಲ್ಕು ಕುರಿಗಳು ಸಜೀವ ದಹನಗೊಂಡಿದ್ದು, ಮನೆ ಸುಟ್ಟು ಹೋಗಿದೆ.

ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬಲಿಪಾಢ್ಯಮಿಯಂದು ಟ್ರ್ಯಾಕ್ಟರ್ ಖರೀದಿಸಲು ಅಭಿಷೇಕ್ ಅವರು ನಿರ್ಧರಿಸಿದ್ದರು. ಅದರಂತೆ ಬ್ಯಾಂಕ್​ನಿಂದ ಹಣ ತೆಗೆಸಿ ಮನೆಯಲ್ಲಿಟ್ಟಿದ್ದು, ನಾಳೆ ಖರೀದಿಗೆ ಹೋಗಲಿದ್ದರು. ಈ ನಡುವೆ ಸಿಲಿಂಡರ್ ಸ್ಫೋಟಗೊಂಡು ಹಣ ಸುಟ್ಟು ಭಸ್ಮವಾಗಿದೆ. ಒಟ್ಟಾರೆಯಾಗಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಅಭಿಷೇಕ್ ಕುಟುಂಬ ಕಂಗಾಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕದ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್