Crime News: ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಹಲ್ಲೆ, ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ
ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ. ಡಿಸೆಂಬರ್ 29ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಾರ್ಥನೆಯ ವೇಳೆ ಮನೆಗೆ ನುಗ್ಗಿ ಹಲ್ಲೆಗೈದ ಆರೋಪ ಕೇಳಿಬಂದಿದೆ.
ಬೆಳಗಾವಿ: ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ. ಡಿಸೆಂಬರ್ 29ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಾರ್ಥನೆಯ ವೇಳೆ ಮನೆಗೆ ನುಗ್ಗಿ ಹಲ್ಲೆಗೈದ ಆರೋಪ ಕೇಳಿಬಂದಿದೆ.
ತುಕ್ಕಾನಟ್ಟಿಯ ಶಿವಾನಂದ ಗೋಟೂರು, ರಮೇಶ ದಂಡಾಪುರ, ಪರಸಪ್ಪ ಬಾಬು, ಫಕ್ಕೀರಪ್ಪ ಬಾಗೇವಾಡಿ, ಕೃಷ್ಣ ಕಾನಿಟ್ಕರ್, ಚೇತನ ಗಡಾಡಿ, ಮಹಾಂತೇಶ್ ಹತ್ತರಗಿ ವಿರುದ್ಧ ದೂರು ದಾಖಲು ಮಾಡಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆದರೆ, ಪೊಲೀಸರು ಈವರೆಗೆ ಯಾರ ವಿರುದ್ಧವೂ ಕ್ರಮಕೈಗೊಳ್ಳದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಹಾವೇರಿ: ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚೆನ್ನಾಪುರ ತಾಂಡಾದಲ್ಲಿ ನಡೆದಿದೆ. ಲೋಕಪ್ಪ ಲಮಾಣಿ (52) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆರು ಎಕರೆ ಜಮೀನು ಹೊಂದಿದ್ದ ರೈತ ಲೋಕಪ್ಪ, ಬ್ಯಾಂಕ್ ಮತ್ತು ಕೈಸಾಲ ಅಂತಾ ಏಳೂವರೆ ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಈರುಳ್ಳಿ, ಮೆಕ್ಕೆಜೋಳ ಮತ್ತು ಶೇಂಗಾ ಬೆಳೆ ಪದೇಪದೆ ಮಳೆಯಿಂದ ಹಾನಿಯಾಗಿದ್ದಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲೇ ವಿಷಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂವರು ಗಂಡು ಮತ್ತು ಒಂದು ಹೆಣ್ಣು ಸೇರಿದಂತೆ ನಾಲ್ಕು ಮಕ್ಕಳನ್ನು ರೈತ ಲೋಕಪ್ಪ ಅಗಲಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಹಾಸ್ಟೆಲ್ನ ಕುಡಿಯುವ ನೀರಿಗೆ ವಿಷ ಹಾಕಲು ಯತ್ನಿಸಿದ ಪ್ರಕರಣ; ಅಪರಾಧಿಗೆ 7 ವರ್ಷ ಜೈಲು, 10 ಸಾವಿರ ರೂ. ದಂಡ
ಇದನ್ನೂ ಓದಿ: 20 ಲಕ್ಷ ಲಂಚ ಸ್ವೀಕಾರ ಆರೋಪ, ಸಿಬಿಐ ದಾಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನ ಅಧಿಕಾರಿ ಸಹಿತ ನಾಲ್ವರ ಬಂಧನ