ಬೆಳಗಾವಿ ಪೊಲೀಸ್ ಠಾಣೆ ಆವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ
ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಅಂದಾಜು 40-45ವರ್ಷದ ವ್ಯಕ್ತಿಯ ಶವಪತ್ತೆಯಾಗಿದೆ. ಕಳೆದ ಹತ್ತು ದಿನಗಳ ಹಿಂದೆಯೇ ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯೋ ಅಥವಾ ಸಹಜ ಸಾವೋ ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ, ಮಾರ್ಚ್.24: ಜಿಲ್ಲೆಯ ಪೊಲೀಸ್ ಠಾಣೆ ಆವರಣದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಅಂದಾಜು 40-45ವರ್ಷದ ವ್ಯಕ್ತಿಯ ಶವಪತ್ತೆಯಾಗಿದೆ (Dead Body). ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್‌ನ ಹಿಂಬದಿ ಸೀಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಳೆದ ಹತ್ತು ದಿನಗಳ ಹಿಂದೆಯೇ ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯೋ ಅಥವಾ ಸಹಜ ಸಾವೋ ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಿಲ್ಲೆಯಲ್ಲಿ ಭಿಕ್ಷೆ ಬೇಡುತ್ತಿದ್ದ ಅಪರಿಚಿತ ವ್ಯಕ್ತಿ ಪೊಲೀಸ್ ಠಾಣಾ ಆವರಣದಲ್ಲಿ ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್‌ನ ಹಿಂಬದಿ ಸೀಟ್ ನಲ್ಲಿ ಕುಳಿತಿರುವಾಗಲೇ ಜೀವ ಹೋಗಿದ್ದು 10 ದಿನದ ಬಳಿಕ ಮೃತ ದೇಹ ಪತ್ತೆಯಾಗಿದೆ. ದೇಹ ಕೊಳೆತು ವಾಸನೆ ಬಂದ ಕಾರಣ ಸಿಬ್ಬಂದಿ ಸ್ಥಳಕ್ಕೆ ಹೋಗಿ ನೋಡಿದಾಗ ಶವ ಇರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಸದ್ಯ ಶವ ಕೊಳೆತ ಕಾರಣ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಘಟನೆ ಸಂಬಂಧ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಸ್ಥಳಕ್ಕೆ ಕ್ಯಾಂಪ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯೋ ಅಥವಾ ಸಹಜ ಸಾವೋ ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ತಂದೆಯನ್ನು ಕೊಲ್ಲಲು ಮೂವರು ಶೂಟರ್ಗಳನ್ನು ನೇಮಿಸಿದ್ದ ಬಾಲಕನ ಬಂಧನ
ಬರಿದಾಯ್ತು ತುಂಗಭದ್ರಾ ನದಿ ಒಡಲು
ತೀವ್ರ ಬರಗಾಲಕ್ಕೆ ತುಂಗಭದ್ರಾ ನದಿ ಬರಿದಾಗಿದೆ. ನದಿಯನ್ನೇ ನಂಬಿರುವ ದಾವಣಗೆರೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಹರಿಹರ ತಾಲೂಕಿನ ಜನ ನೀರಿಲ್ಲದೇ ಪರದಾಡುತ್ತಿದ್ದಾರೆ. 80 ಕ್ಕೂ ಹೆಚ್ಚು ಹಳ್ಳಿಯ ಜನ ಮತ್ತು ಜಾನುವಾರುಗಳಿಗೆ ಸಂಕಷ್ಟ ಎದುರಾಗಿದ್ದು ಐದು ದಶಕಗಳ ಬಳಿಕ ಭೀಕರ ಬರ ಎದುರಾಗಿದೆ.
ತೀವ್ರ ಬರದ ಮಧ್ಯೆ ಅದ್ಧೂರಿ ಜಾತ್ರೆ
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಜಾತ್ರೆಗೆ ಭಕ್ತ ಸಾಗರವೇ ಹರಿದು ಬರ್ತಿದೆ. ರಾಜ್ಯದಲ್ಲಿ ಬರದ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದ್ರೆ ಬರದ ಮಧ್ಯೆಯೂ ಜನ ಜಾತ್ರೆಗೆ ಆಗಮಿಸ್ತಿದ್ದಾರೆ. ಬಿಸಲಿನ ಬೆಗೆಯನ್ನ ಲೆಕ್ಕಿಸದೆ ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಮಡ್ರಳ್ಳಿ ಚೌಡಮ್ಮ ರಥೋತ್ಸವ
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮಡ್ರಳ್ಳಿ ಚೌಡಮ್ಮ ರಥೋತ್ಸವ ನೆರವೇರಿತು. ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಜಾತ್ರೆಯಲ್ಲಿ ಭಾಗವಹಿಸಿದ್ರು. ಇನ್ನು ಹರಾಜಿನಲ್ಲಿ ರಥದ ಮುಕ್ತಿ ಮಂಟಪವನ್ನ 8.50ಲಕ್ಷ ರೂಪಾಯಿ ಕೊಟ್ಟು ಗಿರೀಶ್ ಎಂಬ ರೈತ ಖರೀದಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ