AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ರಾಯಬಾಗ ಬಸ್​ ನಿಲ್ದಾಣದ ಕಟ್ಟಡದಲ್ಲೇ ಡಿಪೋ ಕಂಟ್ರೋಲರ್​ ಆತ್ಮಹತ್ಯೆ, ಕಾರಣ?

ಬೆಂಗಳೂರು ಗ್ರಾಮಾಂತರ ಜಿಲ್ಲೆ‌ಯ ದೇವನಹಳ್ಳಿ(Devanahalli) ಪಟ್ಟಣದ ಬಿಎಂಟಿಸಿ(BMTC) ಡಿಪೋದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಶ್ (45) ಎಂಬುವವರು ನಿನ್ನೆ(ಆ.8) ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯ ರಾಯಬಾಗ ಬಸ್ ನಿಲ್ದಾಣದಲ್ಲಿ ಡಿಪೋ ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಾನಂದ ಭಜಂತ್ರಿ (48) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿ: ರಾಯಬಾಗ ಬಸ್​ ನಿಲ್ದಾಣದ ಕಟ್ಟಡದಲ್ಲೇ ಡಿಪೋ ಕಂಟ್ರೋಲರ್​ ಆತ್ಮಹತ್ಯೆ, ಕಾರಣ?
ರಾಯಬಾಗ ಬಸ್ ನಿಲ್ದಾಣದಲ್ಲಿ ಡಿಪೋ ಕಂಟ್ರೋಲರ್ ನೇಣಿಗೆ ಶರಣು
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 09, 2023 | 8:42 AM

Share

ಬೆಳಗಾವಿ, ಆ.9: ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಕೆಎಸ್​ಆರ್​ಟಿಸಿ (KSRTC) ಚಾಲಕ ಜಗದೀಶ್​​ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದರು. ಅದರಂತೆ ನಿನ್ನೆ(ಆ.8) ಬೆಂಗಳೂರು ಗ್ರಾಮಾಂತರ ಜಿಲ್ಲೆ‌ಯ ದೇವನಹಳ್ಳಿ(Devanahalli) ಪಟ್ಟಣದ ಬಿಎಂಟಿಸಿ(BMTC) ಡಿಪೋದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಶ್ (45) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಬೆಳಗಾವಿ(Belagavi) ಜಿಲ್ಲೆಯ ರಾಯಬಾಗ(Raybag) ಬಸ್ ನಿಲ್ದಾಣದಲ್ಲಿ ಡಿಪೋ ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಾನಂದ ಭಜಂತ್ರಿ (48) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಶಿವಾನಂದ ಅವರು ಡಿಪೋ ಕಂಟ್ರೋಲರ್ ಆಗಿ ಕೆಲಸ ಮಾಡುತ್ತಿದ್ದು, ರಾಯಬಾಗ ಬಸ್ ನಿಲ್ದಾಣದ ಕಟ್ಟಡದ ಮೊದಲ ಮಹಡಿಯಲ್ಲಿಯೇ ಕಿಟಕಿಗೆ ಹಗ್ಗ ಕಟ್ಟಿ ನೇಣಿಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ಎಂದಿನಂತೆ ಸಿಬ್ಬಂದಿ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರಾಯಬಾಗ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡುತ್ತಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಬ್ಯಾಂಕ್ ಸಾಲ ತೀರಿಸಲಾಗದೆ ಪತಿ-ಪತ್ನಿ ನಡುವೆ ಗಲಾಟೆ: ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಸಾಯಿಸಿ, ಆತ್ಮಹತ್ಯೆಗೆ ಶರಣಾದ ಗಂಡ

ರಾಯಚೂರಿನಲ್ಲಿ ಅಪರಿಚಿತ ಮಹಿಳೆ ಕೊಲೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಜವಳಗೇರಾ ಗ್ರಾಮದ ಬಳಿಯ ಹೊಲವೊಂದರಲ್ಲಿ ಸುಮಾರು‌ 30ರಿಂದ35 ವಯಸ್ಸಿನ ಮಹಿಳೆಯ ಶವ ಪತ್ತೆಯಾಗಿದೆ. ಮೃತಳ ಕೈ ಮೇಲೆ ತಿರುಪತಮ್ಮ ಎಂದು ಹಚ್ಚೆ ಹಾಕಿಸಿಕೊಂಡಿದ್ದು, ಬೇರೆಡೆ ಕೊಲೆ ಮಾಡಿ ಜವಳಗೇರಾ ಬಳಿ ಮೃತದೇಹ ಬೀಸಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಪೊಲೀಸರು ಮೃತಳ ಗುರುತು ಪತ್ತೆ ಕಾರ್ಯದಲ್ಲಿ ತೊಡಗಿದ್ದು, ಬಳಗಾನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ