ಬೆಳಗಾವಿಯಲ್ಲಿ ಧರ್ಮ ಗಾರ್ಡಿಯನ್ 2022; ಭಾರತ- ಜಪಾನ್ ಜಂಟಿ ಮಿಲಿಟರಿ ಸಮರಾಭ್ಯಾಸದ ಅಣಕು ಪ್ರದರ್ಶನ

ಮನೆಗಳ ಮೇಲಿನ ಡ್ರಿಲ್‌ಗಳು, ಭಯೋತ್ಪಾದಕ ಅಡಗು ತಾಣಗಳ ಮೇಲೆ ದಾಳಿ ನಡೆದಾಗ ಕೈಗೊಳ್ಳಬೇಕಾದ ಕಾರ್ಯಾಚರಣೆಯ ತರಬೇತಿ ನೀಡಲಾಗುತ್ತದೆ. ನಿರಾಯುಧ ಯುದ್ಧ ಸೇರಿ ವಿವಿಧ ಹಂತದ ಕಾರ್ಯಾಚರಣೆಗಳ ತರಬೇತಿ ಕೊಡಲಾಗುತ್ತದೆ.

ಬೆಳಗಾವಿಯಲ್ಲಿ ಧರ್ಮ ಗಾರ್ಡಿಯನ್ 2022; ಭಾರತ- ಜಪಾನ್ ಜಂಟಿ ಮಿಲಿಟರಿ ಸಮರಾಭ್ಯಾಸದ ಅಣಕು ಪ್ರದರ್ಶನ
ಭಾರತ- ಜಪಾನ್ ಜಂಟಿ ಮಿಲಿಟರಿ ಸಮರಾಭ್ಯಾಸ
Follow us
TV9 Web
| Updated By: ganapathi bhat

Updated on:Mar 08, 2022 | 11:14 AM

ಬೆಳಗಾವಿ: ನಗರದಲ್ಲಿ ಭಾರತ- ಜಪಾನ್ ಜಂಟಿ ಮಿಲಿಟರಿ ಸಮರಾಭ್ಯಾಸ ನಡೆಯುತ್ತಿದೆ. ಮರಾಠಾ ಲಘು ಪದಾತಿ ದಳ ಕೇಂದ್ರದಲ್ಲಿ ಜಂಟಿ ಸಮರಾಭ್ಯಾಸ ನಡೆಯುತ್ತಿದೆ. ಫೆಬ್ರವರಿ 27 ರಂದು ಆರಂಭವಾಗಿರುವ ಜಂಟಿ ಮಿಲಿಟರಿ ಸಮರಾಭ್ಯಾಸ, 12 ದಿನಗಳ ಕಾಲ ಎರಡು ದೇಶಗಳ ನಡುವೆ ನಡೆಯುತ್ತಿದ್ದು ಇಂದು (ಮಾರ್ಚ್ 8) ಭಾರತ- ಜಪಾನ್ ಜಂಟಿ ಸಮರಾಭ್ಯಾಸದ ಅಣಕು ಪ್ರದರ್ಶನ ನಡೆಸಲಾಗಿದೆ. ವಾರ್ಷಿಕ ತರಬೇತಿ ಭಾಗವಾಗಿರುವ ‘ಧರ್ಮ ಗಾರ್ಡಿಯನ್ 2022′ ನಡೆಯುತ್ತಿದೆ. 2018 ರಿಂದಲೂ ಜಂಟಿ ಸಮರಾಭ್ಯಾಸ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ.

ಭಾರತೀಯ ಸೇನೆಯ 15ನೇ ಬೆಟಾಲಿಯನ್‌ನ ಮರಾಠ ಲೈಟ್ ಇನ್ಫಂಟ್ರಿ ರೆಜಿಮೆಂಟ್, ಜಪಾನ್ ಗ್ರೌಂಡ್ ಸೆಲ್ಫ್ ಡಿಫೆನ್ಸ್ ಫೋರ್ಸ್‌ನ 30ನೇ ದಳದ ಯುದ್ಧ ಅನುಭವಿ ಪಡೆಗಳು ಸಮರಾಭ್ಯಾಸದಲ್ಲಿ ಭಾಗಿ ಆಗಿವೆ. ಜಾಗತಿಕ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಅನುಕೂಲಕರವಾಗಿರುವ ಸಮರಾಭ್ಯಾಸ ನಡೆಸಲಾಗುತ್ತಿದೆ. ಕಾಡು, ಅರೆ ನಗರ, ನಗರ ಪ್ರದೇಶಗಳಲ್ಲಿನ ಕಾರ್ಯಾಚರಣೆಯ ಪ್ಲಟೂನ್ ಮಟ್ಟದ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತದೆ. ಮನೆಗಳ ಮೇಲಿನ ಡ್ರಿಲ್‌ಗಳು, ಭಯೋತ್ಪಾದಕ ಅಡಗು ತಾಣಗಳ ಮೇಲೆ ದಾಳಿ ನಡೆದಾಗ ಕೈಗೊಳ್ಳಬೇಕಾದ ಕಾರ್ಯಾಚರಣೆಯ ತರಬೇತಿ ನೀಡಲಾಗುತ್ತದೆ. ನಿರಾಯುಧ ಯುದ್ಧ ಸೇರಿ ವಿವಿಧ ಹಂತದ ಕಾರ್ಯಾಚರಣೆಗಳ ತರಬೇತಿ ಕೊಡಲಾಗುತ್ತದೆ.

ನವೀನ್ ಮೃತದೇಹ ಸಿಕ್ಕಿದೆ, ಉಕ್ರೇನಿನ‌ ಶವಾಗಾರದಲ್ಲಿ ಇಡಲಾಗಿದೆ: ಬಸವರಾಜ ಬೊಮ್ಮಾಯಿ ಮಾಹಿತಿ

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧಭೂಮಿಯಲ್ಲಿ (Russia Ukraine War) ಸಾವನ್ನಪ್ಪಿದ ನವೀನ್ (Naveen) ಮೃತದೇಹ ತರುವ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು (ಮಾರ್ಚ್ 8) ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸಚಿವ ಜೈಶಂಕರ್ ಅವರ ಜೊತೆ ಮಾತಾಡಿದ್ದೇನೆ. ನವೀನ್ ಮೃತದೇಹ ಸಿಕ್ಕಿದೆ. ಉಕ್ರೇನಿನ‌ (Ukraine) ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಯುದ್ಧ ಇನ್ನೂ ನಡೀತಿದೆ. ರಾಯಭಾರಿ ಕಚೇರಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ. ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸ್ತಿದ್ದೇವೆ ಎಂದು ಹೇಳಿದ್ದಾರೆ. ನವೀನ್ ಮೃತದೇಹ ತರುವ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು ಈ ಬಗ್ಗೆ ಸಿಎಂ ಬೊಮ್ಮಾಯೊ ಇಂದು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಮೊದಲು, ಉಕ್ರೇನ್​ನಲ್ಲಿ ಮೃತಪಟ್ಟ ಹಾವೇರಿ ಮೂಲದ ನವೀನ್ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್​ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ನವೀನ್​ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಜತೆಗೆ ನವೀನ್​ ತಂದೆಗೆ 25 ಲಕ್ಷ ರೂ. ಪರಿಹಾರ ಚೆಕ್​ ನೀಡಿದ್ದರು. ನವೀನ್​ ಭಾವಚಿತ್ರಕ್ಕೆ ಹೂವು ಹಾಕಿ ಶ್ರದ್ಧಾಂಜಲಿ ಅರ್ಪಿಸಿದ್ದರು. ಈ ವೇಳೆ ಸಿಎಂ ಜೊತೆ ಕೃಷಿ ಸಚಿವ‌ ಬಿ.ಸಿ. ಪಾಟೀಲ್, ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: Ukraine Russia War Live: ರಷ್ಯಾ ದಾಳಿಯಲ್ಲಿ ಉಕ್ರೇನ್​ನ 8 ಯೋಧರ ಸಾವು, 19 ಯೋಧರಿಗೆ ಗಾಯ; ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮಾನಸಿಕ ಖಿನ್ನತೆ: ಐವರ ಮೇಲೆ ಗುಂಡಿನ ದಾಳಿ ಮಾಡಿ ತಾನೂ ಹತನಾದ ಬೆಳಗಾವಿಯ BSF ಯೋಧ

Published On - 10:07 am, Tue, 8 March 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ