ಸತೀಶ್ ಜಾರಕಿಹೊಳಿ ಹೇಳಿಕೆ ಬೆನ್ನಲ್ಲೇ ಹೆಚ್ಚಿದ ಬೆಳಗಾವಿ ವಿಭಜನೆ ಕಿಚ್ಚು; ಅಥಣಿ ಜಿಲ್ಲೆ ಮಾಡುವಂತೆ ಕೂಗು

ಕಳೆದ ಮೂರು ದಶಕಗಳಿಂದ ಬೆಳಗಾವಿ ಜಿಲ್ಲೆ ವಿಭಜನೆಯ ಕೂಗು ಕೇಳಿಬರುತ್ತಿದೆ. ಈ ಕೂಗು ಜೋರಾಗಿದ್ದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ವಿಭಜನೆಯ ಮಾತುಗಳನ್ನು ಆಡಿದ ನಂತರ. ಬೆಳಗಾವಿಯನ್ನು ವಿಭಜಿಸಿ ಮೂರು ಜಿಲ್ಲೆ ಮಾಡಬೇಕೆಂದು ಆಗ್ರಹವಿದೆ. ಇದೀಗ ಬೆಳಗಾವಿ ಜಿಲ್ಲೆ ವಿಭಜನೆ ಪರವಾಗಿ ಮತ್ತೊಬ್ಬ ಕಾಂಗ್ರೆಸ್​ ನಾಯಕ ಧ್ವನಿ ಎತ್ತಿದ್ದಾರೆ.

ಸತೀಶ್ ಜಾರಕಿಹೊಳಿ ಹೇಳಿಕೆ ಬೆನ್ನಲ್ಲೇ ಹೆಚ್ಚಿದ ಬೆಳಗಾವಿ ವಿಭಜನೆ ಕಿಚ್ಚು; ಅಥಣಿ ಜಿಲ್ಲೆ ಮಾಡುವಂತೆ ಕೂಗು
ಶಾಸಕ ರಾಜು ಕಾಗೆ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ವಿವೇಕ ಬಿರಾದಾರ

Updated on:Aug 21, 2023 | 10:46 AM

ಚಿಕ್ಕೋಡಿ: ಕಳೆದ ಮೂರು ದಶಕಗಳಿಂದ ಬೆಳಗಾವಿ (Belagavi) ಜಿಲ್ಲೆ ವಿಭಜನೆಯ ಕೂಗು ಕೇಳಿಬರುತ್ತಿದೆ. ಈ ಕೂಗು ಜೋರಾಗಿದ್ದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ (Satish Jarkiholi) ವಿಭಜನೆಯ ಮಾತುಗಳನ್ನು ಆಡಿದ ನಂತರ. ಬೆಳಗಾವಿಯನ್ನು ವಿಭಜಿಸಿ ಮೂರು ಜಿಲ್ಲೆ ಮಾಡಬೇಕೆಂದು ಆಗ್ರಹವಿದೆ. ಈ ಬೆಳಗಾವಿ ಜಿಲ್ಲೆ ವಿಭಜನೆ ಪರವಾಗಿ ಮತ್ತೊಬ್ಬ ಕಾಂಗ್ರೆಸ್​ ನಾಯಕ ಧ್ವನಿ ಎತ್ತಿದ್ದಾರೆ. ಹೌದು ಅಥಣಿ ತಾಲೂಕನ್ನು ಜಿಲ್ಲೆ ಮಾಡಬೇಕೆಂದು ಶಾಸಕ ರಾಜು ಕಾಗೆ (Raju Kage) ಧ್ವನಿ ಎತ್ತಿದ್ದಾರೆ.

ಅಥಣಿಯನ್ನು ಜಿಲ್ಲೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಶಾಸಕ ರಾಜು ಕಾಗೆ ಅವರಿಗೆ ಅಥಣಿ ಜಿಲ್ಲಾ ಹೋರಾಟ ಸಮಿತಿ ಮನವಿ ಮಾಡಿದೆ. ಈ ಬಗ್ಗೆ ಮಾತನಾಡಿದ ರಾಜು ಕಾಗೆ ನನ್ನ ಬಳಿ ಕೆಲ ನಾಯಕರು ಅಥಣಿ ಜಿಲ್ಲೆ ಮಾಡಲು ಪ್ರಸ್ತಾವನೆ ಕೊಟ್ಟಿದ್ದಾರೆ. ಇದನ್ನು ಸರ್ಕಾರದ ಗಮನಕ್ಕೆ ತರುವೆ. ನಮ್ಮ ಸಹಪಾಠಿ, ಅಥಣಿ ಶಾಸಕ ಲಕ್ಷ್ಮಣ್ ಸವದಿ ವಿದೇಶ ಪ್ರವಾಸದಲ್ಲಿ ಇದ್ದಾರೆ. ಸೆಪ್ಟೆಂಬರ್ 9ರಂದು ವಾಪಸ್ ಬರುತ್ತಾರೆ. ಅವರು ಮರಳಿ ಬಂದ ಬಳಿಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದರು.

ಮುಖ್ಯಮಂತ್ರಿಗಳ ಬಳಿ ನಮ್ಮ ಪ್ರಸ್ತಾವನೆಯನ್ನು ಇಡುತ್ತೇವೆ. ಗೋಕಾಕ್, ಚಿಕ್ಕೋಡಿ, ಬೈಲಹೊಂಗಲ ಜನ ಜಿಲ್ಲೆಗೆ ಬೇಡಿಕೆ ಇಡುತ್ತಿದ್ದಾರೆ. ಅದೇರೀತಿ ಅಥಣಿಯನ್ನು ಕೂಡ ಜಿಲ್ಲೆ ಮಾಡುವಂತೆ ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಸ್ವಾತಂತ್ರ್ಯದ ಸಂಭ್ರಮದಲ್ಲೇ ಮತ್ತೆ ಮುನ್ನಲೆಗೆ ಬಂದ ಬೆಳಗಾವಿ ಜಿಲ್ಲೆ ವಿಭಜನೆ ಕೂಗು; ಸತೀಶ್​ ಜಾರಕಿಹೊಳಿ ಹೇಳಿದ್ದಿಷ್ಟು

ಅಥಣಿ, ಕಾಗವಾಡ, ರಾಯಬಾಗ ಹಾಗೂ ಬಾಗಲಕೋಟ ಜಿಲ್ಲೆಯ ಜಮಖಂಡಿ, ರಬಕವಿ, ಬನಹಟ್ಟಿ ಸೇರಿಸಿ ಅಥಣಿ ಜಿಲ್ಲೆ ಮಾಡಬೇಕು. ಅಥಣಿಯಿಂದ ಜಿಲ್ಲಾ ಕೇಂದ್ರ ಬೆಳಗಾವಿಗೆ ಬರಲು 200 ಕಿಮೀ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ಜನರ ಅನುಕೂಲ, ಅಭಿವೃದ್ಧಿ ದೃಷ್ಟಿಯಿಂದ ಅಥಣಿಯನ್ನು ಜಿಲ್ಲೆ ಮಾಡಬೇಕು ಎಂದು ಸಮಿತಿ ಮನವಿ ಮಾಡಿದೆ.

ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ ಗೋಕಾಕ್, ಚಿಕ್ಕೋಡಿಯನ್ನು ಜಿಲ್ಲೆ ಮಾಡುವಂತೆ ಆಗ್ರಹಿಸುವುದಾಗಿ ಸತೀಶ್ ಜಾರಕಿಹೊಳಿ ಹೇಳಿದ್ದರು. ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಬೈಲಹೊಂಗಲ ಹಾಗೂ ಅಥಣಿ ತಾಲೂಕಿನ ಜನರು ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:36 am, Mon, 21 August 23

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM