AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಇಳಿಸಲು ಡಿಕೆ ಶಿವಕುಮಾರ್ ಮಾತಿನಂತೆ ಬಿವೈ ವಿಜಯೇಂದ್ರ ಪಾದಯಾತ್ರೆ: ಯತ್ನಾಳ್ ಹೊಸ ಬಾಂಬ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಮತ್ತೊಂದು ಬಾಂಬ್ ಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಆದೇಶದಂತೆ ವಿಜಯೇಂದ್ರ ಸಿದ್ದರಾಮಯ್ಯ ಇಳಿಸಲು ಪಾದಯಾತ್ರೆ ಮಾಡ್ತಿದ್ದಾರೆ. ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣ ಇದೆ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಇಳಿಸಲು ಡಿಕೆ ಶಿವಕುಮಾರ್ ಮಾತಿನಂತೆ ಬಿವೈ ವಿಜಯೇಂದ್ರ ಪಾದಯಾತ್ರೆ: ಯತ್ನಾಳ್ ಹೊಸ ಬಾಂಬ್
ಸಿದ್ದರಾಮಯ್ಯ ಇಳಿಸಲು ಡಿಕೆಶಿ ಮಾತಿನಂತೆ ವಿಜಯೇಂದ್ರ ಪಾದಯಾತ್ರೆ -ಯತ್ನಾಳ್
ಸಹದೇವ್​ ಮಾನೆ
| Edited By: ಆಯೇಷಾ ಬಾನು|

Updated on:Jul 30, 2024 | 7:56 AM

Share

ಚಿಕ್ಕೋಡಿ, ಜುಲೈ.30: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮುಡಾ (MUDA) ಹಗರಣವನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ ರಾಜ್ಯದ ಅಷ್ಟ ದಿಕ್ಕುಗಳಿಂದಲೂ ಸಪ್ತ ದಿನದ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ನಡುವೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ (Basangouda Patil Yatnal)​ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಮುಡಾ ಹೋರಾಟವು ಸಿದ್ದರಾಮಯ್ಯ ಅವರನ್ನು ಇಳಿಸಿ, ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಂ ಮಾಡಲು ಬಿ ವೈ ವಿಜಯೇಂದ್ರ (BY Vijayendra) ಮಾಡುತ್ತಿರುವ ಹೋರಾಟ ಎಂದು ಯತ್ನಾಳ್ ಆರೋಪ ಮಾಡಿದ್ದಾರೆ.

ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ ರಾಜೀವ್ ಬಿಜೆಪಿಯಲ್ಲೇ ಇದ್ದಾಗ ಈ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್​ಗೆ ಯಾಕೆ ಸೇರಿದ್ದಾರೆ ಅಂದರೆ ಇದೆಲ್ಲ ಮುಚ್ಚಿ ಹಾಕಲು. ರಾಜೀವ ಯಾರ ನಿರ್ದೇಶನದ ಮೇಲೆ ಕಾಂಗ್ರೆಸ್ ಸೇರಿದ ಅನ್ನೋದು ಎಲ್ಲರಿಗೂ ಗೊತ್ತಿದೆ ಎಂದು ಇತ್ತೀಚೆಗೆ ಬಸನಗೌಡಾ ಪಾಟೀಲ ಯತ್ನಾಳ್ ಕಿಡಿಕಾರಿದ್ದರು ಇದರ ಬೆನ್ನಲ್ಲೇ ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಮುಡಾ ವಿಚಾರವಾಗಿ ಬಿವೈ ವಿಜಯೇಂದ್ರ ನಡೆಸುತ್ತಿರುವ ಹೋರಾಟದಲ್ಲಿ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣ ಇದೆ

ಮುಡಾ ಹೋರಾಟವು ಸಿದ್ದರಾಮಯ್ಯ ಅವರನ್ನು ಇಳಿಸಿ, ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲು ಬಿ ವೈ ವಿಜಯೇಂದ್ರ ಮಾಡುತ್ತಿರುವ ಹೋರಾಟ ಅನ್ನೋದು ಬಹಿರಂಗ ಪಡಿಸಬೇಕು. ಡಿಸಿಎಂ ಡಿಕೆ ಶಿವಕುಮಾರ್ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಇಳಿಸಲು ಪಾದಯಾತ್ರೆ ಮಾಡ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣ ಇದೆ. ಡಿ.ಕೆ. ಶಿವಕುಮಾರ್ ಅವರ ಉಪಕಾರ ತೀರಿಸಲಿಕ್ಕೆ ಇವತ್ತು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಸನಗೌಡಾ ಪಾಟೀಲ ಯತ್ನಾಳ್ ತಿಳಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸ್ವಪಕ್ಷದವರ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ಯತ್ನಾಳ್ ವಾಲ್ಮೀಕಿ ನಿಗಮದ ವಿಚಾರದ ಕುರಿತು ಪಾದಯಾತ್ರೆ ಮಾಡುತ್ತಿರುವ ಸಂಬಂಧ ಮಾತನಾಡಿರುವ ಯತ್ನಾಳ್, ನಾವು ಮತ್ತು ರಮೇಶ್ ಜಾರಕಿಹೊಳಿ‌ ಕೇಂದ್ರದಿಂದ ಒಪ್ಪಿಗೆ ಪಡೆದು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಎಲ್ಲಿಂದ ಪ್ರತಿಭಟನೆ ಮಾಡಬೇಕೆಂದು ನಿರ್ಣಯವಾಗಿಲ್ಲ. ಬಿಜೆಪಿಯಲ್ಲಿ ಎರಡು ಬಣ ಇಲ್ಲ. ಮಹರ್ಷಿ ವಾಲ್ಮೀಕಿ ನಿಗಮದಲ್ಲಾದದ್ದೂ ದೊಡ್ಡ ಹಗರಣ. ಒಂದು ಸಮುದಾಯದಕ್ಕೆ ಹೋಗಬೇಕಾದ ಹಣ ಪೂರ್ತಿ ನುಂಗಿ ಹಾಕಿದ್ದಾರೆ. ಇನ್ನೊಂದು ಕಡೆ ಮುಡಾದಲ್ಲಿ ಒಬ್ಬ ದಲಿತನ ಜಮೀನು ಪೂರ್ತಿ ನುಂಗಿ ಹಾಕಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರ ವಿರುದ್ದ ಯಾವುದೇ ಒಳ ಒಪ್ಪಂದ ಇಲ್ಲದೇ ನಾವು ಹೋರಾಟ ಮಾಡುತ್ತಿದ್ದೇವೆ. ನಾವು ಮಾಡುವ ಹೋರಾಟ ಭ್ರಷ್ಟರ ವಿರುದ್ದ ಎಂದರು.

ಭಾಗ್ಯದ ಲಕ್ಷ್ಮಿ ಬೆಳಗಾವಿಯಲ್ಲಿಯೇ ಕುಳಿತ್ತಿದ್ದಾರೆ

ಇನ್ನು ಇದೇ ವೇಳೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ದ ಯತ್ನಾಳ್ ಕೆಂಡಕಾರಿದ್ದಾರೆ. ಕರ್ನಾಟಕ ಸರ್ಕಾರ ದಿವಾಳಿಯಾಗಿದೆ. ಹೆಣ್ಣು ಮಕ್ಕಳಿಗೆ ಎರಡು ಸಾವಿರ ಹಣ ಮೂರು ತಿಂಗಳಿಂದ ಬಿಡುಗಡೆಯಾಗಿಲ್ಲ. ಭಾಗ್ಯದ ಲಕ್ಷ್ಮಿ ಬೆಳಗಾವಿಯಲ್ಲಿಯೇ ಕುಳಿತ್ತಿದ್ದಾರೆ. ಲಕ್ಷ್ಮೀ ಅಕ್ಕಾ ದುಡ್ಡು ಕೊಡಲಿಕ್ಕೆ ತಯಾರಿಲ್ಲ. ಲಕ್ಷ್ಮೀ ಅಕ್ಕಾ ದುಡ್ಡ ಕೊಡವ್ವಾ ಇಲ್ಲಾ ಮನಿಗೆ ನಡಿವಾ ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಮತ್ತೊಂದೆಡೆ ಮಾಜಿ ಹಾಗೂ ಹಾಲಿ ಸಿಎಂ ಮಕ್ಕಳು ಮಾತ್ರ ಬೆಳೆಯುತ್ತಿದ್ದಾರೆ ಎಂದು ಮಾಜಿ ಎಂಪಿ ಪ್ರತಾಪ್ ಸಿಂಹ ಆರೋಪ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಯತ್ನಾಳ್, ಮಾಜಿ ಹಾಗೂ ಹಾಲಿ ಸಿಎಂ ಮಕ್ಕಳು ಬೆಳೆಯುತ್ತಿರುವುದು ನಿಜಾ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:52 am, Tue, 30 July 24

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ