ದಯವಿಟ್ಟು ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ: ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ

ರಾಜ್ಯದ ಜನತೆಗೆ ಅವಮಾನ ಆಗದಂಗೆ ಜನಗಳ ಚಡ್ಡಿ ಬಿಚ್ಚಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ವ್ಯಂಗ್ಯವಾಡಿದರು. 

ದಯವಿಟ್ಟು ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ: ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ
ಮಾಜಿ ಸಿಎಂ ಕುಮಾರಸ್ವಾಮಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 05, 2022 | 12:32 PM

ಬೆಳಗಾವಿ: ಚಡ್ಡಿ ಬಿಚ್ಚಿದ್ರೇ ಎನೂ ಸಿಗುತ್ತೆ ಅವರಿಗೆ. ಕಾಂಗ್ರೆಸ್​ನವರು ಚಡ್ಡಿ ಸುಟ್ರೂ, ಆರಗ ಜ್ಞಾನೇಂದ್ರ ಕಾಂಗ್ರೆಸ್ ಚಡ್ಡಿ ಉದುರಿಸಿದ್ದೇವೆ ಅಂತಾರೆ. ಇದು ಇಲ್ಲಿ ನಡೆಯುತ್ತಿರುವುದು. ನನ್ನ ಪ್ರಶ್ನೆ ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ, ಆದರೆ ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ ದಯವಿಟ್ಟು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದರು. ರಾಜ್ಯದ ಜನತೆ ಗೌರವವಾಗಿ ಬದುಕುವ ವಾತಾವರಣ ನಿರ್ಮಾಣ ಮಾಡಿ‌. ನಿಮ್ಮ ನಿಮ್ಮ ಚಡ್ಡಿ ಬಿಚ್ಚಿಕೊಳ್ಳಿ ತೊಂದರೆ ಇಲ್ಲಾ‌. ಶಿಕ್ಷಣ ಸಚಿವ ನಾವೆಲ್ಲರೂ ಆರ್​ಎಸ್​ಎಸ್​ನವರು ಎಂದು ಹೇಳಿದ್ದಾರೆ. RSS ರಾಷ್ಟ್ರಭಕ್ತಿ, ಹಿಂದುತ್ವದ ಹೆಸರಿನಲ್ಲಿ ಹೈಜಾಕ್ ಮಾಡುತ್ತಿದ್ದಾರೆ. ರಾಜ್ಯದ ಜನತೆಗೆ ಅವಮಾನ ಆಗದಂಗೆ ಜನಗಳ ಚಡ್ಡಿ ಬಿಚ್ಚಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ವ್ಯಂಗ್ಯವಾಡಿದರು.

ಪಾಪದ ಹಣದಿಂದ ಮೈತ್ರಿ ಸರ್ಕಾರ ರಚನೆ

ಬಿಜೆಪಿ ಪಕ್ಷ ಇಷ್ಟೇಲ್ಲಾ ಕುತಂತ್ರದ ಮುಖಾಂತರ ಬೆಟ್ಟಿಂಗ್ ದಂಧೆ ನಡೆಸುವವರ, ಬಡವರ ರಕ್ತ ಹೀರಿದಂತವರ ಪಾಪದ ಹಣದಿಂದ ಮೈತ್ರಿ ಸರ್ಕಾರ ತೆಗೆಯಲು ಉಪಯೋಗ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ರೂ. ನಾನು ಯಡಿಯೂರಪ್ಪ ಅವರಿಗೆ ಆಕ್ರೋಶ ಭರಿತ ಮಾತುಗಳನ್ನ ಹೇಳಲಿಲ್ಲ‌. ನಾಲ್ಕನೇ ಬಾರಿ ಮುಖ್ಯಮಂತ್ರಿ ಆಗಿದ್ದೀರಿ, ರಾಜಕಾರಣದಲ್ಲಿ ಕೊನೆ ಭಾಗದಲ್ಲಿದೀರಿ. ಒಳ್ಳೆಯ ಕೆಲಸ ಮಾಡಿ ಜನರ ಹತ್ತಿರ ಹೆಸರು ಮಾಡಿಕೊಳ್ಳಿ ಅಂದಿದ್ದೆ. ಆದರೆ ನಡೆದ ಘಟನೆಗಳು ಪ್ರತಿಯೊಂದು ನಿಮ್ಮ ಗಮನಕ್ಕಿದೆ‌. ಇವತ್ತು ಪರ್ಸಂಟೇಜ್ ಬಗ್ಗೆ ಚರ್ಚೆ ಮಾಡುತ್ತಾರೆ. ಬೆಳಗಾವಿಯಲ್ಲೇ ಒಂದು ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣ ನಡೆದು ಹೋಯ್ತು.

ಇದನ್ನೂ ಓದಿ; ಸ್ಟಾರ್​ ನಟನ ರೀತಿ ತಲೆ ಎತ್ತಿದೆ ಚಾರ್ಲಿ ಶ್ವಾನದ ಕಟೌಟ್​; ರಕ್ಷಿತ್​ ಶೆಟ್ಟಿ ಸಿನಿಮಾಗೆ ಭರ್ಜರಿ ಪ್ರಚಾರ

ಕಾಂಗ್ರೆಸ್​ನವರು ಒಂದು ರೀತಿ ಬಿಜೆಪಿಯವರು ಒಂದು ರೀತಿ ಅದನ್ನ ಬಳಕೆ ಮಾಡಿಕೊಂಡರು‌. ನಾನು ಅದಕ್ಕೆ ದೊಡ್ಡ ಮಟ್ಟದಲ್ಲಿ ಪ್ರತಿಕ್ರಿಯೆ ಕೊಡಲಿಲ್ಲ‌. ಕಾಂಗ್ರೆಸ್​ನವರಿಗೆ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡುವ ನೈತಿಕತೆ ಇಲ್ಲಾ. ಅವರು ಗಾಜಿನ ಮನೆಯಲ್ಲಿ ಕುಳಿತುಕೊಂಡೇ ರಾಜ್ಯ ಆಳಿದವರು‌. ಬಿಜೆಪಿಯವರು ಅದನ್ನ ಮುಂದುವರೆಸಿಕೊಂಡು ಸ್ವಲ್ಪ ರೈಸ್ ಮಾಡಿಕೊಂಡ್ರೂ. ಮೈತ್ರಿ ಸರ್ಕಾರ ತೆಗೆದು ಬಿಜೆಪಿಯವರು ಪರಿವರ್ತನೆ ಇದೇ ತಂದಿದ್ದು. ಗುತ್ತಿಗೆದಾರ ಪರಿಸ್ಥಿತಿ ಎನಾಗಿದೆ, ಸರ್ಕಾರದ ಹಣ ಯಾವ ರೀತಿ ಲೂಟಿ ಆಗುತ್ತಿದೆ ಎಂದು ಹೇಳಿದರು.

RSS ರಾಷ್ಟ್ರಭಕ್ತಿ, ಹಿಂದುತ್ವದ ಹೆಸರಿನಲ್ಲಿ ಹೈಜಾಕ್

2018ರಲ್ಲಿ ಅತಂತ್ರ ಸ್ಥಿತಿಯಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಯ್ತು. ಆ ಸರ್ಕಾರ ತೆಗೆಯಲು ಹಲವು ತಿಂಗಳ ಕಾಲ ಪ್ರೊಸೆಸ್​ ನಡೆಯಿತು. ಶಾಸಕರಿಗೆ ಹಣದ ಆಮಿಷದ ಬಗ್ಗೆ ಜನರ ಮುಂದೆ ಇಟ್ಟಿದ್ದೆವು. ಇದಾದ ನಂತರ ಸಮ್ಮಿಶ್ರ ಸರ್ಕಾರ ತೆಗೆಯಲು ಕಸರತ್ತು ನಡೆಯಿತು. ಬದಲಾವಣೆ ತರಲು ಕುತಂತ್ರದ ಮೂಲಕ ಸಮ್ಮಿಶ್ರ ಸರ್ಕಾರ ತೆಗೆದ್ರು. ಆಗ ಸಮ್ಮಿಶ್ರ ಸರ್ಕಾರ ಹೋಗಲಿ ಎಂದು ನಾನೇ ನಿರ್ಧಾರಕ್ಕೆ ಬಂದಿದ್ದೆ. ಎಲ್ಲಾ ಗೊತ್ತಿದ್ದರಿಂದಲೇ ನಾನು ಆಗ ಅಮೆರಿಕಕ್ಕೆ ಹೋಗಿದ್ದು ಎಂದು ಹೆಚ್.​ಡಿ. ಕುಮಾರಸ್ವಾಮಿ ಹೇಳಿದರು.

ನನಗೆ ಕೊಡುತ್ತಿದ್ದ ಹಿಂಸೆಗಳನ್ನು ಸಹಿಸಿಕೊಂಡು ಸಾಕಾಗಿ ಹೋಗಿತ್ತು. ರೈತರ ಸಾಲಮನ್ನಾ ಮಾಡುವ ಟಾಸ್ಕ್​ ನನ್ನ ಮೇಲಿತ್ತು. ರೈತರ ಸಾಲಮನ್ನಾ ನಂತರ ನನಗೆ ಸರ್ಕಾರದಲ್ಲಿ ಆಸಕ್ತಿ ಉಳಿದಿರಲಿಲ್ಲ. ಮನಸ್ಸಿನಲ್ಲಿ ತೀವ್ರ ಬೇಸರ ಇದ್ದುದರಿಂದಲೇ ನಾನು ನಿರಾಸಕ್ತನಾಗಿದ್ದೆ. ಹೋದರೆ ಹೋಗಲಿ ಏಕೆ ಪ್ರತಿನಿತ್ಯ ಇಂತಹ ಘಟನೆ ನಡೆಯಬೇಕು. ನಾನ್ಯಾಕೆ ಇಷ್ಟು ವ್ಯರ್ಥ ಕಸರತ್ತು ಮಾಡಬೇಕೆಂದು ನಿರ್ಧರಿಸಿಬಿಟ್ಟಿದ್ದೆ. ರಾಜ್ಯಕ್ಕೆ ಒಳ್ಳೇದು ಮಾಡುವುದಾದರೆ ಮಾಡಿಕೊಳ್ಳಲಿ ಎಂದು ದೃಢ ನಿರ್ಧಾರ ತೆಗೆದುಕೊಂಡು ಸುಮ್ಮನಾಗಿಬಿಟ್ಟೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮತ್ತೆ ಪ್ರಯತ್ನ ಮಾಡಲು ಹೋಗಲಿಲ್ಲ. ಆ ಸರ್ಕಾರ ಪತನವಾಗಲು ಯಾರ ಪಾತ್ರವಿತ್ತೆಂದು ಈಗ ಬೇಕಿಲ್ಲ ಎಂದು ಬೆಳಗಾವಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 12:31 pm, Sun, 5 June 22

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ