ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಬಲ್ ಖುಷಿ; ಸಚಿವ ಸ್ಥಾನ ದಕ್ಕಿದ ದಿನವೇ ಅಜ್ಜಿಯಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ತುಂಬಾ ದಿನಗಳ ಜಿದ್ದಾಜಿದ್ದಿನ ನಂತರ ಕಾಂಗ್ರೆಸ್​ ನೂತನ 24 ಸಚಿವರ ಪಟ್ಟಿ ಬಿಡುಗಡೆ ಮಾಡಿದ್ದು, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ಒದಗಿ ಬಂದಿದೆ. ಇದರ ಬೆನ್ನಲ್ಲೇ ಇದೀಗ ಸಚಿವ ಸ್ಥಾನ ದಕ್ಕಿದ ದಿನವೇ ಲಕ್ಷ್ಮೀ ಹೆಬ್ಬಾಳ್ಕರ್ ಅಜ್ಜಿಯಾದ ಖುಷಿಯಲ್ಲಿದ್ದಾರೆ.

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಬಲ್ ಖುಷಿ; ಸಚಿವ ಸ್ಥಾನ ದಕ್ಕಿದ ದಿನವೇ ಅಜ್ಜಿಯಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 27, 2023 | 8:27 AM

ಬೆಳಗಾವಿ: ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಪಕ್ಷ​ ಬಹುಮತದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಅದರಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಗದ್ದುಗೆಗೆ ಏರಿದ್ದಾರೆ. ಇದಾದ ಮೇಲೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್​ಗೆ ತಲೆನೋವಾಗಿ ಪರಿಣಮಿಸಿದ್ದು, ಇದೀಗ ತುಂಬಾ ದಿನಗಳ ಜಿದ್ದಾಜಿದ್ದಿನ ನಂತರ ಕಾಂಗ್ರೆಸ್​ ನೂತನ 24 ಸಚಿವರ ಪಟ್ಟಿ ಬಿಡುಗಡೆ ಮಾಡಿದ್ದು, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌(Lakshmi Hebbalkar)ಗೆ ಸಚಿವ ಸ್ಥಾನ ಒದಗಿ ಬಂದಿದೆ. ಇಂದು(ಮೇ.27) ರಾಜಭವನದಲ್ಲಿ 24 ಸಚಿವರ ಪ್ರಮಾಣವಚನ ಸ್ವೀಕಾರ ನಡೆಯಲಿದೆ. ಇದೇ ಖುಷಿಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಇದೀಗ ಮತ್ತೊಂದು ಗುಡ್​ ನ್ಯೂಸ್​ ಸಿಕ್ಕಿದೆ.

ಹೌದು ಸಚಿವ ಸ್ಥಾನ ದಕ್ಕಿದ ದಿನವೇ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಜ್ಜಿಯಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಸೊಸೆ ಹಿತಾ ಹೆಬ್ಬಾಳ್ಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕಳೆದ(ಮೇ.26) ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿನ ಜನನವಾಗಿದೆ. ಪುತ್ರ ಮೃಣಾಲ್, ಸೊಸೆ ಹಿತಾಗೆ ಹೆಣ್ಣುಮಗು ಜನಿಸಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಫುಲ್ ಖುಷ್ ಆಗಿದ್ದು, ಸಚಿವಗಿರಿ ಜೊತೆಗೆ ಮನೆಗೆ ಮಹಾಲಕ್ಷ್ಮೀ ಬಂದ ಖುಷಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬಳಿಕ ಹೆಬ್ಬಾಳ್ಕರ್ ಕುಟುಂಬ ಬೆಂಗಳೂರಿಂದ ನೇರವಾಗಿ ಶಿವಮೊಗ್ಗಕ್ಕೆ ತೆರಳಲಿದ್ದಾರೆ.

ಇದನ್ನೂ ಓದಿ:ಇಂದು 24 ಸಚಿವರ ಪ್ರಮಾಣವಚನ: ರಾಜಭವನದ ಸುತ್ತಮುತ್ತ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾರ್ಗ ಬದಲಾವಣೆ ಹೀಗಿದೆ

ಇನ್ನು ಬೆಂಗಳೂರು ಹೊರತುಪಡಿಸಿದರೇ ರಾಜ್ಯದಲ್ಲಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ಬೆಳಗಾವಿ. ಒಟ್ಟು ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿವೆ. 18 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್​ಶಾಸಕರು ಆಯ್ಕೆಯಾಗಿದ್ದು, ಈ ಪೈಕಿ ಮೊದಲ ಹಂತದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಷ್ಯ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಒಲಿದಿತ್ತು. ಇದಾದ ಬಳಿಕ 5 ಲಿಂಗಾಯತ ಶಾಸಕರ ಮಧ್ಯೆ ಸಚಿವ ಸ್ಥಾನಕ್ಕಾಗಿ ಫೈಟ್ ಶರುವಾಗಿತ್ತು. ಲಕ್ಷ್ಮಣ್ ಸವದಿ, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಕಾಶ್ ಹುಕ್ಕೇರಿ ಅಥವಾ ಗಣೇಶ್ ಹುಕ್ಕೇರಿ, ಅಶೋಕ್ ಪಟ್ಟಣ್, ಮಹಾಂತೇಶ ಕೌಜಲಗಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಸಚಿವ ಭಾಗ್ಯ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಒಲಿದು ಬಂದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್