ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಬರಗಾಲ: ಮಲಪ್ರಭಾ ಜಲಾಶಯದಿಂದ 15 ದಿನ ನೀರು ಬಿಡಲು ನಿರ್ಧಾರ

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಲಪ್ರಭಾ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ನಾಳೆಯಿಂದ 15 ದಿನಗಳ ಕಾಲ‌ ಜಲಾಶಯದಿಂದ ನೀರು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಬರಗಾಲ: ಮಲಪ್ರಭಾ ಜಲಾಶಯದಿಂದ 15 ದಿನ ನೀರು ಬಿಡಲು ನಿರ್ಧಾರ
ಮಲಪ್ರಭಾ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆ
Follow us
Sahadev Mane
| Updated By: ಆಯೇಷಾ ಬಾನು

Updated on: Sep 21, 2023 | 10:55 AM

ಬೆಳಗಾವಿ, ಸೆ.21: ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಬರಗಾಲ ಹಿನ್ನೆಲೆ ನಾಳೆಯಿಂದ ಮಲಪ್ರಭಾ ಜಲಾಶಯದಿಂದ(Malaprabha Dam)ನೀರು ಬಿಡಲು ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ ಹಾಗೂ ಗದಗ ಜಿಲ್ಲೆಯ 14 ತಾಲೂಕುಗಳಿಗೆ ನಾಳೆಯಿಂದ ಕುಡಿಯುವ ನೀರು ಬಿಡಲು ನಿರ್ಧಾರ ಮಾಡಲಾಗಿದೆ. ಸೆ.22ರಿಂದ ಮುಂದಿನ 15 ದಿನಗಳ ಕಾಲ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಆಗಿರುವ ಲಕ್ಷ್ಮೀ ಹೆಬ್ಬಾಳಕರ್( Lakshmi Hebbalkar) ಅವರು ತಿಳಿಸಿದರು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಲಪ್ರಭಾ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ನಾಳೆಯಿಂದ 15 ದಿನಗಳ ಕಾಲ‌ ಜಲಾಶಯದಿಂದ ನೀರು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಕಾರಣಕ್ಕೆ ಸಮಿತಿ ಬುಧವಾರ ತುರ್ತು ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದೆ. ಮಲಪ್ರಭಾ ಜಲಾಶಯ 37 ಟಿಎಂಸಿ ಸಾಮರ್ಥ್ಯ ಹೊಂದಿದೆ. ಆದರೆ ಈಗ ಮಳೆ ಕೊರತೆಯಿಂದ 21 ಟಿಎಂಸಿ ಮಾತ್ರ ನೀರು ಸಂಗ್ರಹವಿದೆ. ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಬರಗಾಲ ಹಿನ್ನೆಲೆ 15 ದಿನಗಳ ಕಾಲ ಒಂದೂವರೆ ಟಿಎಂಸಿ ನೀರು ಬಿಡಲು ನಿರ್ಧಾರ ಮಾಡಲಾಗಿದೆ. ನಿತ್ಯವೂ ಕಾಲುವೆಗೆ 1 ಸಾವಿರ ಕ್ಯೂಸೆಕ್ ನೀರು ಬಿಡಲು ತೀರ್ಮಾನಿಸಲಾಗಿದೆ. ಈ ಹಿಂದೆ ನೀರು ಹರಿಸುವಂತೆ ಸವದತ್ತಿ, ಧಾರವಾಡದ ರೈತರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಕೆಆರ್​ಎಸ್​ ಖಾಲಿ ಖಾಲಿ; ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ರಾಜ್ಯಕ್ಕೆ ಉಳಿಯುವುದೆಷ್ಟು? ಇಲ್ಲಿದೆ ಅಂಕಿ-ಅಂಶ

ಇನ್ನು ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಲಪ್ರಭಾದಿಂದ ನೀರು ಬಿಡುವಂತೆ 4 ಜಿಲ್ಲೆಯ 14 ತಾಲೂಕಿನ ಜನ‌ ಪ್ರತಿಭಟನೆ ಮಾಡ್ತಿದ್ರು. ಸವದತ್ತಿ ಹಾಗೂ ನವಲಗುಂದದಲ್ಲಿ ಜನ ಪ್ರತಿಭಟನೆಗೆ ಕುಳಿತಿದ್ದರು. ನಾವೆಲ್ಲರೂ ಚರ್ಚೆ ಮಾಡಿ 15 ದಿನಗಳವರೆಗೆ ನೀರು ಬಿಡುಗಡಗೆ ನಿರ್ಧಾರ ಮಾಡಿದ್ದೇವೆ. 4 ಜಿಲ್ಲೆಯ 14 ತಾಲೂಕುಗಳಿಗೆ ನೀರು ಹರಿಸಲು ನಿರ್ಧಾರ ಮಾಡಿದ್ದೇವೆ. ಕಳೆದ ನಾಲ್ಕು ವರ್ಷದಲ್ಲಿ ನೀರಿಗೆ ಯಾವುದೇ ತೊಂದರೆ ಆಗಿಲ್ಲ. ಈ ವರ್ಷ ಮಳೆಯ ಕೊರತೆಯಿಂದ ನೀರಿನ ಸಮಸ್ಯೆ ಆಗಿದೆ ಎಂದರು.

ಕಳೆದ ಬಾರಿ ರಾಜಕಾರಣಿಗಳು ಒತ್ತಡ ಮಣಿದು ನೀರು ಬಿಟ್ಟಿದ್ದಕ್ಕೆ ಡ್ಯಾಂನಲ್ಲಿ ನೀರು ಖಾಲಿ ಆಯ್ತು ಎಂಬ ಪ್ರಶ್ನೆ ಇದೆ. ರಾಜಕಾರಣಿಗಳು ತಮ್ಮ ಹೊಲ ಗದ್ದೆಗಳಿಗೆ ನೀರು ಕೇಳಲ್ಲ. ತಮ್ಮ ಮನೆಗೆ ನೀರು ತೆಗೆದುಕೊಂಡು ಹೋಗಲು ಒತ್ತಡ ಹಾಕಲ್ಲ. ಯಾರೇ ರಾಜಕಾರಣಿಗಳು ಒತ್ತಡ ಹೇರುವ ತಂತ್ರ ಮಾಡಿದ್ದರೆ. ರೈತರು ಹಾಗೂ ಸಾಮಾಜಿಕವಾಗಿ ಬಳಕೆ ಆಗ್ಲಿ ಎನ್ನುವ ಕಾರಣಕ್ಕೆ ಮಾಡ್ತಾರೆ. ಇದನ್ನೂ ನಾವು ಗಮನಿಸಬೇಕಾಗುತ್ತೆ. ಎಲ್ಲರಿಗೂ ಅನುಕೂಲ ಆಗಲಿ ಅಂತಾ ನೀರು ಬಿಡುಗಡೆ ಮಾಡ್ತೇವಿ ಎಂದ ಹೆಬ್ಬಾಳ್ಕರ್ ತಿಳಿಸಿದರು. ಅಧಿಕಾರಿಗಳು ಎಲ್ಲಾ ವಿಚಾರಗಳನ್ನು ನಮ್ಮ ಗಮನಕ್ಕೆ ತಂದಿದ್ದಾರೆ. ನಾವು ಆಶಾವಾದಿಗಳು ಗಣೇಶ ಬಂದಿದ್ದಾನೆ. ಯಲ್ಲಮ್ಮನ ಹೆಸರಿನಲ್ಲಿ ಪೂಜೆ ಮಾಡಿ ಮಳೆಯಾಗುತ್ತೆ ಎನ್ನುವ ಆಶಾಭಾವನೆಯಿಂದ ನೀರು ಬಿಡ್ತೇವೆ ಎಂದರು.

ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ