AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಡ್ರಗ್ಸ್ ಫ್ಯಾಕ್ಟರಿಯೇ ಪತ್ತೆ: 1.13 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್​​, 7 ಜನರ ಬಂಧನ

ಕರ್ನಾಟಕ-ಮಹಾರಾಷ್ಟ್ರ ಗಡಿಯ ಕೊಲ್ಲಾಪುರ ಜಿಲ್ಲೆಯಲ್ಲಿ ಕೋಳಿ ಫಾರ್ಮ್‌ ಒಂದರಲ್ಲಿ ನಡೆಸುತ್ತಿದ್ದ ಡ್ರಗ್ಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಿದ ಮಹಾರಾಷ್ಟ್ರ ಟಾಸ್ಕ್ ಫೋರ್ಸ್, 1.13 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿ ಬೆಳಗಾವಿಯ ಇಬ್ಬರು ಸೇರಿ 7 ಜನರನ್ನು ಬಂಧಿಸಿದೆ. ಮುಂಬೈನಲ್ಲಿ ನಡೆದ ಡ್ರಗ್ಸ್ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದ ಸುಳಿವಿನ ಆಧಾರದ ಮೇಲೆ ಈ ರೇಡ್​​ ನಡೆದಿದ್ದು, ಬೆಳಗಾವಿಯಿಂದ ಕೇವಲ 25ಕಿಮೀ ದೂರದಲ್ಲಿರುವ ಹಾಜಗೋಳಿಯಲ್ಲಿ ನಡೆದ ಮೂರನೇ ಅತೀ ದೊಡ್ಡ ಕಾರ್ಯಾಚರಣೆ ಇದಾಗಿದೆ.

ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಡ್ರಗ್ಸ್ ಫ್ಯಾಕ್ಟರಿಯೇ ಪತ್ತೆ: 1.13 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್​​, 7 ಜನರ ಬಂಧನ
ಜಪ್ತಿ ಮಾಡಲಾಗಿರುವ ವಸ್ತುಗಳುImage Credit source: Tv9 Kannada
ಸಹದೇವ್​ ಮಾನೆ
| Edited By: |

Updated on:Aug 24, 2026 | 2:50 PM

Share

ಮುಖ್ಯಾಂಶಗಳು

  • ಮಾದಕ ವಸ್ತು ವಿರೋಧಿ ಟಾಸ್ಕ್ ಫೋರ್ಸ್ ಭರ್ಜರಿ ಕಾರ್ಯಾಚರಣೆ
  • ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ
  • 1.13 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್​​, 7 ಜನ ಅರೆಸ್ಟ್​​

ಬೆಳಗಾವಿ, ಆಗಸ್ಟ್​​ 24: ಕೋಳಿ ಫಾರ್ಮ್​​ನಲ್ಲಿ ಡ್ರಗ್ಸ್ ತಯಾರಿಸುತ್ತಿದ್ದ ಖತರ್ನಾಕ್ ಗ್ಯಾಂಗ್​​ನ ಮಹಾರಾಷ್ಟ್ರದ ಮಾದಕ ವಸ್ತು ವಿರೋಧಿ ಟಾಸ್ಕ್ ಫೋರ್ಸ್ ಭರ್ಜರಿ ಕಾರ್ಯಾಚರಣೆ ನಡೆಸಿ ಖೆಡ್ಡಾಗೆ ಕೆಡವಿದೆ. ಬೆಳಗಾವಿ– ಮಹಾರಾಷ್ಟ್ರ ಗಡಿಯ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ಹಾಜಗೋಳಿ ಗ್ರಾಮದ ಹೊರ ವಲಯದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, 1 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ 208 ಗ್ರಾಂ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡ್ರಗ್ಸ್ ತಯಾರಿಸಲು ಬಳಸುತ್ತಿದ್ದ ಕೆಮಿಕಲ್, ಯಂತ್ರೋಪಕರಣಗಳನ್ನು ಸಹ ವಶಕ್ಕೆ ಪಡೆಯಲಾಗಿದೆ.

ಏಳು ಜನರ ಬಂಧನ

ಮುಂಬೈನಲ್ಲಿ ನಡೆದ ಡ್ರಗ್ಸ್ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದ ಸುಳಿವಿನ ಆಧಾರದ ಮೇಲೆ ಈ ರೇಡ್​​ ನಡೆದಿದ್ದು, ಬೆಳಗಾವಿಯ ಇಬ್ಬರು ಸೇರಿ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ. ಮೂರು ದಿನದಿಂದ ಪುಣೆಯಿಂದ ಬಂದಿದ್ದ ಟಾಸ್ಕ್​​ಪೋರ್ಸ್​​ ಸಿಬ್ಬಂದಿ ಸಾಮಾನ್ಯರಂತೆ ಮಾಹಿತಿ ಕಲೆ ಹಾಕಿದ್ದರು ಎನ್ನಲಾಗಿದೆ. ಇಲ್ಲಿಂದ ಗೋವಾ, ಕರ್ನಾಟಕ, ಮಹಾರಾಷ್ಟ್ರ ಸೇರಿ ದೇಶದ ನಾನಾ ಭಾಗಕ್ಕೆ ಗ್ಯಾಂಗ್​​ ಮಾದಕವಸ್ತು ಸರಬರಾಜು ಮಾಡುತ್ತಿತ್ತು ಎಂಬ ವಿಚಾರವೂ ದಾಳಿ ವೇಳೆ ಬಯಲಾಗಿದೆ.

ಇದನ್ನೂ ಓದಿ: ‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ

ಬೆಳಗಾವಿಯಿಂದ ಕೇವಲ 25 ಕಿಮೀ ದೂರದಲ್ಲಿರುವ ಹಾಜಗೋಳಿ

ದುಬೈನಲ್ಲಿ ಸಲೀಂ ಡೋಲಾ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿ ಕರೆತಂದಿದ್ದರು. ಆ ಬಳಿಕ ಮುಂಬೈನ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದ ವೇಳೆ ಚಂದಗಡ ತಾಲೂಕಿನ ಸಂತೋಷ ಎಂಬಾತ ಡ್ರಗ್ಸ್ ವಹಿವಾಟು ನಡೆಸುತ್ತಿರುವ ವಿಚಾರ ಗೊತ್ತಾಗಿತ್ತು. ಆತನ ಅರೆಸ್ಟ್ ಮಾಡಿ ವಿಚಾರಣೆ ನಡೆಸಿದಾಗ ಡ್ರಗ್ಸ್ ಫ್ಯಾಕ್ಟರಿ ಬಗ್ಗೆ ಬಾಯಿ ಬಿಟ್ಟಿದ್ದ. ಆ ಮಾಹಿತಿಯ ಆಧಾರದಲ್ಲಿಯೇ ಬೆಳಗಾವಿಯಿಂದ ಕೇವಲ 25ಕಿಮೀ ದೂರದಲ್ಲಿರುವ ಹಾಜಗೋಳಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಚಂದಗಡ ತಾಲೂಕಿನಲ್ಲಿ ನಡೆದ ಮೂರನೇ ಅತೀ ದೊಡ್ಡ ಕಾರ್ಯಾಚರಣೆ ಇದಾಗಿದ್ದು, ಈ ಹಿಂದೆ ದಾಳಿಯಾದಾಗ ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈ ಮಾಡೋದು ಬಹಿರಂಗವಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:43 pm, Mon, 24 August 26

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ