ಮಂಜುನಾಥ್ ಆಪ್ತರಿಗೂ ತಟ್ಟಿದ ಇಡಿ ಬಿಸಿ: ಅಬಕಾರಿ ಎಸ್ಪಿ, ಡಿವೈಎಸ್ಪಿ ಮನೆಗಳ ಮೇಲೂ ರೇಡ್​

Belagavi News: ಬೆಳಗಾವಿ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ನಿವಾಸದ ಮೇಲಿನ ದಾಳಿ ಬೆನ್ನಲ್ಲೇ, ಅವರ ಆಪ್ತರಾದ ತುಮಕೂರು ಅಬಕಾರಿ ಎಸ್ಪಿ ಹಾಗೂ ಚಿಕ್ಕೋಡಿ ಡಿವೈಎಸ್ಪಿ ಮನೆಗಳ ಮೇಲೂ ಇಡಿ ಅಧಿಕಾರಿಗಳು ಭಾರಿ ರೇಡ್ ನಡೆಸಿದ್ದಾರೆ. ಇನ್ನು 2013ರಲ್ಲಿ ಮೈಸೂರು ಅಬಕಾರಿ ಡಿಸಿಯಾಗಿದ್ದ ವೇಳೆ ಮಂಜುನಾಥ್ ಮೇಲೆ ಲೋಕಾಯುಕ್ತ ರೇಡ್ ಆಗಿತ್ತು. ಲೈಸೆನ್ಸ್​​ಗಳ ರಿನೀವಲ್​​ನಲ್ಲಿ ಅಕ್ರಮ ಹಣ ಸಂಪಾದನೆ ಆರೋಪ ಹಿನ್ನೆಲೆ ದಾಳಿ ನಡೆದಿತ್ತು ಎಂಬುದು ಗೊತ್ತಾಗಿದೆ.

ಮಂಜುನಾಥ್ ಆಪ್ತರಿಗೂ ತಟ್ಟಿದ ಇಡಿ ಬಿಸಿ: ಅಬಕಾರಿ ಎಸ್ಪಿ, ಡಿವೈಎಸ್ಪಿ ಮನೆಗಳ ಮೇಲೂ ರೇಡ್​
ಮಂಜುನಾಥ್ ಆಪ್ತರಿಗೂ ತಟ್ಟಿದ ಇಡಿ ಬಿಸಿ
Edited By:

Updated on: Jun 24, 2026 | 12:38 PM

ಬೆಳಗಾವಿ, ಜೂನ್​​ 24: ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಬೆಳ್ಳಂ ಬೆಳಿಗ್ಗೆ ಶಾಕ್​​ ನೀಡಿರುವ ಇಡಿ ಮಂಜುನಾಥ್​​ಗೆ ಆಪ್ತರಾಗಿರುವ ಅಧಿಕಾರಿಗಳಿಗೂ ಬಿಸಿ ಮುಟ್ಟಿಸಿದೆ. ಚಿಕ್ಕೋಡಿ ಅಬಕಾರಿ ಡಿವೈಎಸ್ಪಿ ಮತ್ತು ತುಮಕೂರು ಅಬಕಾರಿ ಎಸ್ಪಿ ಮನೆಗಳ ಮೇಲೂ ಇಡಿ ಅಧಿಕಾರಿಗಳು ರೇಡ್​​ ನಡೆಸಿ, ಶೋಧ ಆರಂಭಿಸಿದ್ದಾರೆ.

ತುಮಕೂರು ಅಬಕಾರಿ ಎಸ್ಪಿಗೆ ಇಡಿ ಶಾಕ್​​

ತುಮಕುರು ಅಬಕಾರಿ ಎಸ್ಪಿ ಸತೀಶ ಕಾಗಲಿ ಅವರ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು, ಮನೆಯ ಇಂಚಿಂಚನ್ನು ಜಾಲಾಡಿದ್ದಾರೆ. ಬೆಳಗಾವಿಯ ಶ್ರೀನಗರದಲ್ಲಿರುವ ನಿವಾಸದ ಮೇಲೂ ರೇಡ್​​ ನಡೆಸಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಸಚಿವ ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್; ಹೆಚ್ಚುವರಿ ಅಬಕಾರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ದಾಳಿ

ಚಿಕ್ಕೋಡಿ ಅಬಕಾರಿ ಡಿವೈಎಸ್ಪಿಗೂ ಇಡಿ ದಾಳಿ ಬಿಸಿ

ವೈ. ಮಂಜುನಾಥ್ ಅವರ ಮತ್ತೋರ್ವ ಆಪ್ತ ಚಿಕ್ಕೋಡಿ ಅಬಕಾರಿ ಡಿವೈಎಸ್ಪಿ ವಿಶ್ವನಾಥ ಗಾಣಿಗೆರ ಮನೆ ಮೇಲೆಯೂ ಇಡಿ ರೇಡ್​​ ನಡೆದಿದೆ. ಬೆಳಗಾವಿ ನಗರದ ಬಸವ ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತದಲ್ಲಿ ದಾಖಲಾಗಿದ್ದ ಡಿಎ ಕೇಸ್ ಸಂಬಂಧ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್​​ಗೆ ಸೇರಿ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. 2013ರಲ್ಲಿ ಮೈಸೂರು ಅಬಕಾರಿ ಡಿಸಿಯಾಗಿದ್ದ ವೇಳೆಯೂ ಮಂಜುನಾಥ್ ಮೇಲೆ ಲೋಕಾಯುಕ್ತ ರೇಡ್ ಆಗಿತ್ತು. ಲೈಸೆನ್ಸ್​​ಗಳ ರಿನೀವಲ್​​ನಲ್ಲಿ ಅಕ್ರಮ ಹಣ ಸಂಪಾದನೆ ಆರೋಪ ಹಿನ್ನೆಲೆ ದಾಳಿ ನಡೆದಿದ್ದು, ಸಾಕಷ್ಟು ಹಣ ಮತ್ತು ಆಸ್ತಿ ಪತ್ತೆಯಾಗಿತ್ತು. ಈ ಸಂಬಂಧ ಇಲಾಖಾ ತನಿಖೆ ಮಂಜುನಾಥ್ ಮೇಲೆ ನಡೆದಿತ್ತು ಎಂಬುದು ಗೊತ್ತಾಗಿದೆ.

‘ಉಪ್ಪು ತಿಂದವರು ನೀರು ಕುಡೀತಾರೆ’

ಇನ್ನು ಅಬಕಾರಿ ಇಲಾಖೆ ಅಧಿಕಾರಿ ಮನೆ ಮೇಲೆ ಇಡಿ ದಾಳಿ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಇಲಾಖೆಯ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ, ಇಡಿ ದಾಳಿ ಬಗ್ಗೆ ತನಗೆ ಗೊತ್ತಿಲ್ಲ ಎಂದಿದ್ದಾರೆ. ಸಾಕಷ್ಟು ಅಧಿಕಾರಿಗಳು ನನ್ನ ಕೆಳಗೆ ಕೆಲಸ ಮಾಡಿದ್ದಾರೆ. ಉಪ್ಪು ತಿಂದವರು ನೀರು ಕುಡೀತಾರೆ. ಮಂಜುನಾಥ್ ವಿರುದ್ಧ ಒಂದೆರಡು ಬಾರಿ ಇಲಾಖೆಯಲ್ಲಿ ತನಿಖೆ ಆಗಿತ್ತು. ಆದರೆ ಸದ್ಯಕ್ಕೆ ಯಾವುದೇ ಆರೋಪಗಳು ಇರಲಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us