ಹಿಡಕಲ್ ಅಣೆಕಟ್ಟು ಯೋಜನೆ: 43 ವರ್ಷಗಳಾದರು ಕುಟುಂಬಗಳಿಗೆ ಸಿಕ್ಕಿಲ್ಲ ಪರ್ಯಾಯ ಭೂಮಿ

ಹಿಡಕಲ್ ಅಣೆಕಟ್ಟು ಯೋಜನೆಗೆ ಸುಮಾರು 43 ವರ್ಷಗಳ ಹಿಂದೆ ಜಮೀನು ಕಳೆದುಕೊಂಡಿರುವ ಹುಕ್ಕೇರಿ ತಾಲೂಕಿನ ರೈತರು, ತಮಗೆ ಮಂಜೂರಾದ ಪರ್ಯಾಯ ಭೂಮಿಯನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದರು.

ಹಿಡಕಲ್ ಅಣೆಕಟ್ಟು ಯೋಜನೆ: 43 ವರ್ಷಗಳಾದರು ಕುಟುಂಬಗಳಿಗೆ ಸಿಕ್ಕಿಲ್ಲ ಪರ್ಯಾಯ ಭೂಮಿ
ಹಿಡಕಲ್​ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Dec 02, 2023 | 10:56 AM

ಬೆಳಗಾವಿ ಡಿ.02: ಹಿಡಕಲ್ ಅಣೆಕಟ್ಟು (Hidikal Dam) ಯೋಜನೆಗೆ ಸುಮಾರು 43 ವರ್ಷಗಳ ಹಿಂದೆ ಜಮೀನು ಕಳೆದುಕೊಂಡಿರುವ ಹುಕ್ಕೇರಿ (Hukkeri) ತಾಲೂಕಿನ ರೈತರು, ತಮಗೆ ಮಂಜೂರಾದ ಪರ್ಯಾಯ ಭೂಮಿಯನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದರು. 58 ಕುಟುಂಬಗಳ ಸದಸ್ಯರು ಕೈಯಲ್ಲಿ ಫಲಕ ಹಿಡಿದು ಚನ್ನಮ್ಮ ವೃತ್ತದಿಂದ ಮೆರವಣಿಗೆ ನಡೆಸಿ ಡಿಸಿ ಕಚೇರಿ ಆವರಣದಲ್ಲಿ ಸಮಾವೇಶಗೊಂಡು ಅನಿರ್ದಿಷ್ಟಾವಧಿ ಧರಣಿ ನಡೆಸಿದರು.

ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನೂ ಕೂಗಿದರು. ಹುಕ್ಕೇರಿ ತಾಲೂಕಿನ ಬೀರನಹೊಳಿ, ಮಣಗುತ್ತಿ, ಇಸ್ಲಾಂಪುರ, ಗುಡಾನಟ್ಟಿ, ಹಳೇವಂತಮೂರಿ ರೈತರು ಹಿಡಕಲ್ ಅಣೆಕಟ್ಟು ಯೋಜನೆಯಿಂದ ಭೂಮಿ ಕಳೆದುಕೊಂಡಿದ್ದಾರೆ.

ಆಂದೋಲನದ ನೇತೃತ್ವ ವಹಿಸಿದ್ದ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡದ್‌ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, 1980ರಲ್ಲಿ ಹಿಡಕಲ್‌ ಅಣೆಕಟ್ಟು ಯೋಜನೆ ಹಿನ್ನೀರಿನಲ್ಲಿ 58 ಕುಟುಂಬಗಳು ಜಮೀನು ಕಳೆದುಕೊಂಡಿದ್ದು, ಸರಕಾರ ಅಕ್ಕಪಕ್ಕದ ಗ್ರಾಮಗಳಲ್ಲಿ ಪರ್ಯಾಯ ಜಮೀನು ಮಂಜೂರು ಮಾಡಿದ್ದರೂ ಇಂದಿಗೂ ಹಸ್ತಾಂತರಿಸಿಲ್ಲ.

ಇದನ್ನೂ ಓದಿ: ಸಪ್ತ ನದಿಗಳ ಬೀಡು ಬೆಳಗಾವಿ ಜಿಲ್ಲೆಯಲ್ಲಿ ‘ಬ್ಯಾರೇಜ್ ಗೇಟ್’ ಕಳ್ಳರ ಹಾವಳಿ: ಸಚಿವರು, ಅಧಿಕಾರಿಗಳಿಗೆ ತಲೆನೋವಾದ ಗ್ಯಾಂಗ್  

ಚಳಿಗಾಲದ ಅಧಿವೇಶನದ ಮೊದಲ ದಿನವೇ ಈ ವಿಷಯವನ್ನು ಚರ್ಚಿಸಬೇಕು ಎಂದು ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ. ಸಂತ್ರಸ್ತ ರೈತರಿಗೆ ಮಂಜೂರಾದ ಭೂಮಿಯನ್ನು ಕೂಡಲೇ ಹಸ್ತಾಂತರಿಸಲು ಸರಕಾರ ಆದೇಶ ಹೊರಡಿಸಬೇಕು. ನಮ್ಮ ಭಾಗದ ರೈತರು ಕಳೆದ 43 ವರ್ಷಗಳಿಂದ ಪರಿಹಾರ ಭೂಮಿಗಾಗಿ ಆಂದೋಲನ ನಡೆಸುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಭೀಮಪ್ಪ ಗಡದ್ ಹೇಳಿದರು.

ಕೃಷಿಕ ಸಮಾಜದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಾಣಿಕ್ಯ ಚಿಲ್ಲೂರು ಮಾತನಾಡಿ, ನೀರಾವರಿ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರ ಬೇಡಿಕೆಗಳನ್ನು ಆದ್ಯತೆ ಮೇಲೆ ಈಡೇರಿಸಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:35 am, Sat, 2 December 23

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?