ಕೌಟುಂಬಿಕ ಕಲಹ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನಲೆ ಇಬ್ಬರು ಮಕ್ಕಳ ಜೊತೆಗೆ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಧ್ಯ ಮೂವರ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ, ಸೆ.29: ಬೆಳಗಾವಿ(Belagavi) ಜಿಲ್ಲೆಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿದ್ದಾರೆ. ಹೌದು, ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ಇಬ್ಬರು ಮಕ್ಕಳ ಜೊತೆಗೆ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಾದ ಸಾತ್ವಿಕ್(5), ಒಂದು ವರ್ಷದ ಮುತ್ತಪ್ಪ, 30 ವರ್ಷದ ಯಲ್ಲವ್ವ ಕರಿಹೊಳ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು(ಭಾನುವಾರ) ಗಂಡನ ಜೊತೆಗೆ ಜಗಳವಾಡಿದ್ದ ಪತ್ನಿ ಯಲ್ಲವ್ವ, ಇದರ ಮನನೊಂದು ಮಧ್ಯಾಹ್ನದ ವೇಳೆಗೆ ಮಕ್ಕಳ ಜೊತೆಗೆ ಬಾವಿಗೆ ಹಾರಿ ಕೊನೆಯುಸಿರೆಳೆದಿದ್ದಾರೆ. ಸಧ್ಯ ಮೂವರ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಕಲಬುರಗಿ: ಬ್ಯಾಂಕ್ ನೋಟಿಸ್ಗೆ ಹೆದರಿ ಪೆಟ್ರೋಲ್ ಸುರಿದುಕೊಂಡು ರೈತ ಆತ್ಮಹತ್ಯೆ
ಹೃದಯಾಘಾತದಿಂದ ವಿದ್ಯುತ್ ಉತ್ಪಾದನಾ ಕೇಂದ್ರದ ನೌಕರ ಸಾವು
ರಾಯಚೂರು: ತಾಲ್ಲೂಕಿನ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ದಾರುಣ ಘಟನೆ ನಡೆದಿದೆ. ಜಾಗೀರ್ ವೆಂಕಟಾಪುರ ಗ್ರಾಮದ ಗುತ್ತಿಗೆ ನೌಕರ ಗಂಗಪ್ಪ ದಿವಾನಿ ( 30) ಮೃತ ವ್ಯಕ್ತಿ. ಎಂದಿನಂತೆ ಕೆಲಸಕ್ಕೆ ಹೋಗಿದ್ದ ಗುತ್ತಿಗೆ ನೌಕರ, ವಿದ್ಯುತ್ ಕೇಂದ್ರದಲ್ಲಿ ಕೆಲಸ ಮಾಡುವ ವೇಳೆ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಗಂಗಪ್ಪ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:09 pm, Sun, 29 September 24