Doctors Negligence: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು, ಕುಟುಂಬಸ್ಥರ ಆಕ್ರೋಶ

ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಮೃತಪಟ್ಟಿದ್ದಾರೆ, ತೀವ್ರ ರಕ್ತಸ್ರಾವವಾದ ಕಾರಣ ಬೇರೆ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಮಗು ಹಾಗೂ ತಾಯಿ ಇಬ್ಬರೂ ಮೃತಪಟ್ಟಿದ್ದಾರೆ. ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

Doctors Negligence: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು, ಕುಟುಂಬಸ್ಥರ ಆಕ್ರೋಶ
ಕುಟುಂಬಸ್ಥರ ಆಕ್ರೋಶ
Follow us
| Updated By: ಆಯೇಷಾ ಬಾನು

Updated on: Mar 18, 2024 | 12:49 PM

ಬೆಳಗಾವಿ, ಮಾರ್ಚ್​.18: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ (Doctors Negligence). ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಹಳ್ಳಿ( 28) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇನ್ನು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಷ್ಮೀಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ತಡರಾತ್ರಿ ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಲಕ್ಷ್ಮೀ ಬೆಳಗ್ಗೆ ಕಿಣೆಯ ಆಸ್ಪತ್ರೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮನೀಡಿದ್ದರು. ಈ ವೇಳೆ ತೀವ್ರ ರಕ್ತಸ್ರಾವವಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಸಾಗಿಸಲು ವೈದ್ಯರು ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಬಾಣಂತಿ, ಮಗು ಮೃತಪಟ್ಟಿದೆ.

ಬೆಳಗ್ಗೆ ಆಸ್ಪತ್ರೆಯಲ್ಲಿ ನಾರ್ಮಲ್ ಡಿಲೆವರಿ ಆದರೂ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ವೈದ್ಯರು ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿಲ್ಲ, ರಕ್ತಸ್ರಾವ ಆದರೂ ಗಮನಕ್ಕೆ ತರದೇ ನಿರ್ಲಕ್ಷ್ಯ ವಹಿಸಿದ್ದಾರೆ. ಆಸ್ಪತ್ರೆಗೆ ಸಾಗಿಸಲು ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡದೆ ಬೇಜವಾಬ್ದಾರಿತನ ಮೆರೆದಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಘಟನೆ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಯುವಕರಲ್ಲಿ ಹೆಚ್ಚುತ್ತಿದೆ ಸ್ಟ್ರೋಕ್; ಇದು ಯಾಕೆ ಅಪಾಯಕಾರಿ?

ಯುವತಿಯರ ಮೇಲೆ ಹಲ್ಲೆ

ಪೂಜಾ ವಿಚಾರಕ್ಕೆ ಯುವತಿಯರ ಮೇಲೆ ಹಲ್ಲೆ ನಡೆಸಿರೋ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೇರಳೆಯಲ್ಲಿ ಘಟನೆ ನಡೆದಿದೆ. ಪೂಜೆ ಮಾಡದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿದ್ದಶೆಟ್ಟಿ ಕುಟುಂಬದ ಯುವತಿಯರ ಮೇಲೆ ಗ್ರಾಮದ ಕೆಲವರು ಹಲ್ಲೆ ಮಾಡಿದ್ದಾರೆ. ಓರ್ವ ಗರ್ಭಿಣಿಗೆ ಗರ್ಭಪಾತವಾಗಿದೆ ಎನ್ನಲಾಗಿದೆ. ಈ ಸಂಬಂಧ 8 ಜನರ ವಿರುದ್ಧ FIR ದಾಖಲಾಗಿದೆ.

ದೇವಾಲಯದ ಬಾಗಿಲು ತೆಗೆದಿದ್ದಕ್ಕೆ ವಿಷ ಸೇವನೆ

ಅಧಿಕಾರಿಗಳು ದೇವಾಲಯದ ಬೀಗ ಮುರಿದಿದ್ದಕ್ಕೆ ಅರ್ಚಕ ವಿಷ ಸೇವಿಸಿರುವ ಘಟನೆ, ತುಮಕೂರು ಜಿಲ್ಲೆ ನಿರುವಗಲ್ಲು ಗ್ರಾಮದಲ್ಲಿ ನಡೆದಿದೆ. 3 ವರ್ಷಗಳಿಂದ ಆಂಜನೇಯ ಸ್ವಾಮಿ ಮೂರ್ತಿ ಪೂಜೆ ನಿಂತಿದ್ದು, ಅರ್ಚಕರು ಹೈ ಕೋರ್ಟ್ ಮೆಟ್ಟಿಲೇರಿದ್ದರು. ಈ ಮಧ್ಯೆ ತಹಸಿಲ್ದಾರ್ ನೇತೃತ್ವದ ತಂಡ ನಿನ್ನೆ ರಾತ್ರಿ ದೇಗುಲದ ಬಾಗಿಲು ತೆರೆದು ಪೂಜೆ ಸಲ್ಲಿಸಿದೆ. ಈ ವೇಳೆ ಅರ್ಚಕ ಅಜಯ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ