ಕೆರಗೋಡು ಬಳಿಕ ಬೆಳಗಾವಿಯ ಎಂಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವು; ಭಗವಾ ಧ್ವಜ ಹಾರಿಸಲು ಕರೆ

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿದ ಬೆನ್ನಲ್ಲೇ ಪೊಲೀಸರು ಬೆಳಗಾವಿಯಲ್ಲೂ ಧ್ವಜ ತೆರವುಗೊಳಿಸಿದ್ದಾರೆ. ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಪಾದಯಾತ್ರೆ ಕೈಗೊಂಡಿದ್ದಾರೆ. ದೊಡ್ಡ ಹನುಮಾನ ಮಂದಿರ ಬಳಿ ಭಗವಾ ಧ್ವಜಾರೋಹಣ ಮಾಡಲಿದ್ದಾರೆ. ಗ್ರಾಮದಲ್ಲಿ ಭಗವಾ ಧ್ವಜ ಕಟ್ಟುವ ಅಭಿಯಾನವೂ ನಡೆಯಲಿದೆ.

ಕೆರಗೋಡು ಬಳಿಕ ಬೆಳಗಾವಿಯ ಎಂಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವು; ಭಗವಾ ಧ್ವಜ ಹಾರಿಸಲು ಕರೆ
ಕೆರಗೋಡು ಬಳಿಕ ಬೆಳಗಾವಿಯ ಎಂಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವು; ಭಗವಾ ಧ್ವಜ ಹಾರಿಸಲು ಕರೆ
Follow us
Sahadev Mane
| Updated By: Rakesh Nayak Manchi

Updated on:Feb 04, 2024 | 11:04 AM

ಬೆಳಗಾವಿ, ಫೆ.4: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿದ ಬೆನ್ನಲ್ಲೇ ಬೆಳಗಾವಿಯಲ್ಲೂ (Belagavi) ಧ್ವಜ ತೆರವು ಪ್ರಕರಣ ಸುದ್ದು ಮಾಡುತ್ತಿದೆ. ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ (MK Hubballi) ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ.

ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಭಗವಾ ಧ್ವಜ ತೆರವುಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಚಲೋ ಎಂಕೆ ಹುಬ್ಬಳ್ಳಿ ಕೈಗೊಂಡಿದ್ದು, ಬಿಜೆಪಿ ನಾಯಕರು, ಹಿಂದೂ ಪರ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಇಡೀ ಗ್ರಾಮದಲ್ಲಿ ಭಗವಾ ಧ್ವಜ ಕಟ್ಟುವ ಅಭಿಯಾನವೂ ಕೈಗೊಳ್ಳಲು ಮುಂದಾಗಿದ್ದಾರೆ. ದೊಡ್ಡ ಹನುಮಾನ ಮಂದಿರ ಬಳಿ ಭಗವಾ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಕೆರಗೋಡು ಹನುಮ ಧ್ವಜ ತೆರವು ವಿವಾದ: ರಾಜ್ಯಾದ್ಯಂತ ಹನುಮ ಧ್ವಜ ಅಭಿಯಾನ ನಡೆಸಲು ಬಜರಂಗದಳ ಕರೆ

ಭಗವಾ ಧ್ವಜ ಹಾರಿಸಲು ಕರೆ

ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಧ್ವಜ ತೆರವು ಹಿನ್ನೆಲೆ ಹನುಮಾನ್ ಮಂದಿರದ ಮುಂದೆ ಭಗವಾ ಧ್ವಜ ಹಾರಿಸಲು ಹಿಂದೂ ಸಂಘಟನೆಗಳಿಂದ ಕರೆ ನೀಡಲಾಗಿದ್ದು, ಪಟ್ಟಣ ಪಂಚಾಯತಿ ಕಚೇರಿ ಮುಂದೆ ಹಿಂದು ಯುವಕರು ಜಮಾಯಿಸಿದ್ದಾರೆ. ಅಲ್ಲದೆ, ಗ್ರಾಮದ ಸಂಬ್ಬನವರ್ ಕಾಲೋನಿಯಲ್ಲಿ ಧ್ವಜ ಕಟ್ಟೆ ನಿರ್ಮಾಣ ಮಾಡಲು ಮುಂದಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬೀಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೆಎಸ್​ಆರ್​ಪಿ ತುಕಡಿಯನ್ನೂ ನಿಯೋಜಿಸಲಾಗಿದೆ.

ಸ್ಥಳಕ್ಕೆ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್ ಭೇಟಿ

ಭಗವಾ ಧ್ವಜ ತೆರವು ಖಂಡಿಸಿ ಹಿಂದೂ ಸಂಘಟನೆಗಳು ಬೀದಿಗಿಳಿಯಲು ಮುಂದಾಗಿದ್ದು, ಸ್ಥಳಕ್ಕೆ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಪಂಚಾಯಿತಿ ಸಿಬ್ಬಂದಿ ವಾರದ ಹಿಂದೆ ಪೊಲೀಸರ ಸಮ್ಮುಖದಲ್ಲಿ ಧ್ವಜ ತೆರವು ಮಾಡಿದ್ದರು. ಧ್ವಜ ತೆರವು ಮಾಡಿದ ಜಾಗದಲ್ಲಿ ರಾತ್ರೋರಾತ್ರಿ ಧ್ವಜದ ಕಟ್ಟೆ ನಿರ್ಮಾಣ ಮಾಡಲಾಗಿದ್ದು, ಅದೇ ಜಾಗದಲ್ಲಿ ಭಗವಾ ಧ್ವಜ ಹಾರಿಸಲು ಯುವಕರು ಪಟ್ಟು ಹಿಡಿದಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿಣ ವಾತಾವರಣ ಹಿನ್ನೆಲೆ ಎಸ್​ಪಿ ಭೇಟಿ ನೀಡಿದ್ದು, ಸ್ಥಳೀಯ ಪೊಲೀಸರು ಮತ್ತು ಜನರಿಂದ ಮಾಹಿತಿ ಪಡೆಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 am, Sun, 4 February 24

ರೀಲ್ಸ್​ಗಾಗಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ವಿದ್ಯಾರ್ಥಿಗಳಿಂದ ಹುಚ್ಚಾಟ
ರೀಲ್ಸ್​ಗಾಗಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ವಿದ್ಯಾರ್ಥಿಗಳಿಂದ ಹುಚ್ಚಾಟ
ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮೆಸ್ಕಾಂ‌ ಸಿಬ್ಬಂದಿಯ ಎಣ್ಣೆ ಪಾರ್ಟಿ, ಧಮ್ಕಿ
ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮೆಸ್ಕಾಂ‌ ಸಿಬ್ಬಂದಿಯ ಎಣ್ಣೆ ಪಾರ್ಟಿ, ಧಮ್ಕಿ
ಬಿಗ್ ಬಾಸ್ ಮನೆಗೆ ‘ರಾಮಾಚಾರಿ’ ಜೋಡಿ; ಕುರಿನ ಕರೆದಂತೆ ಚಾರುನ ಕರೆದ ಹನುಮಂತ
ಬಿಗ್ ಬಾಸ್ ಮನೆಗೆ ‘ರಾಮಾಚಾರಿ’ ಜೋಡಿ; ಕುರಿನ ಕರೆದಂತೆ ಚಾರುನ ಕರೆದ ಹನುಮಂತ
ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ