Food Poison: ವಿಷಾಹಾರ ಸೇವಿಸಿ ಬೆಳಗಾವಿಯಲ್ಲಿ ತಾಯಿ, ಮಗ ಸಾವು
ಭಾನುವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ ಹೊಲಕ್ಕೆ ಕೆಲಸಕ್ಕೆಂದು ತೆರಳಿದ್ದ ತಾಯಿ ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದಾರೆ. ಈ ವೇಳೆ ಇಬ್ಬರೂ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ.
ಬೆಳಗಾವಿ: ವಿಷಾಹಾರ ಸೇವಿಸಿ ತಾಯಿ, ಮಗ ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿ ನಡೆದಿದೆ. ತಾಯಿ ಪಾರ್ವತಿ ಮಳಗಳಿ(53), ಮಗ ಸೋಮನಿಂಗಪ್ಪ ಮಳಗಳಿ(28) ಮೃತ ದುರ್ದೈವಿಗಳು.
ಭಾನುವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ ಹೊಲಕ್ಕೆ ಕೆಲಸಕ್ಕೆಂದು ತೆರಳಿದ್ದ ತಾಯಿ ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದಾರೆ. ಈ ವೇಳೆ ಇಬ್ಬರೂ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ವಿಷಯ ತಿಳಿದ ತಕ್ಷಣ ಓಡೋಡಿ ಬಂದ ಸ್ಥಳೀಯರು ತಾಯಿ-ಮಗನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ. ನಿನ್ನೆ ಮರಣೋತ್ತರ ಪರೀಕ್ಷೆ ನಡೆಸಿ ತಾಯಿ, ಮಗನ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲುಷಿತ ನೀರು ಸೇವಿಸಿ ಕಲಬುರಗಿಯಲ್ಲಿ ಇಬ್ಬರ ಸಾವು ಜ್ವರದಿಂದ ಮೂವರು ಬಾಲಕಿಯರು ಹಾಗೂ ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಆನೂರಿನಲ್ಲಿ ಸೆಪ್ಟೆಂಬರ್ 25ರಂದು ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವುದು, ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಹೇಳಿದ್ದ ಆರೋಗ್ಯ ಸಿಬ್ಬಂದಿ ಆ ಬಗ್ಗೆ ಈವರೆಗೂ ಕ್ರಮ ಕೈಗೊಂಡಿಲ್ಲ. ಇದು ಸಹಜವಾಗಿಯೇ ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಆರೋಗ್ಯ ಇಲಾಖೆ ಸೂಚನೆ ನೀಡಿದರೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಗ್ರಾಮದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಳವಾಗಿದ್ದು, ಕುಡಿಯುವ ನೀರಿಗೆ ಚರಂಡಿ ನೀರು ಸೇರಿ ಕಾಲರಾ ಹೆಚ್ಚುತ್ತಿದೆ. ದಸ್ತಾಪುರ ಗ್ರಾಮದಲ್ಲಿ ಕಾಲರಾಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ಅಲ್ಲದೆ ಆನೂರು ಗ್ರಾಮದಲ್ಲಿ ಚಿಕನ್‌ಗುನ್ಯಾ, ಡೇಂಗ್ಯೂ ರೋಗ ಉಲ್ಬಣವಾಗಿದೆ.
ಇದನ್ನೂ ಓದಿ: Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು
Published On - 8:28 am, Tue, 5 October 21