AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಇದ್ದಿದ್ದರಿಂದ ಸಿಪಿಎಲ್​ ಸಭೆ ನಡೆಸಿದರು: ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ವರ್ಗಾವಣೆ ದಂಧೆ ವಿಚಾರಕ್ಕೆ ಸರ್ಕಾರದಲ್ಲಿ ಪೈಪೋಟಿ ನಡಿತಿದೆ. ವರ್ಗಾವಣೆ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಇರುವುದರಿಂದ ಮೊನ್ನೆ ಶಾಸಕಾಂಗದ ಸಭೆ ನಡೆಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ಮಾಡಿದರು.

ವರ್ಗಾವಣೆ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಇದ್ದಿದ್ದರಿಂದ ಸಿಪಿಎಲ್​ ಸಭೆ ನಡೆಸಿದರು: ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Sahadev Mane
| Edited By: |

Updated on: Jul 30, 2023 | 2:13 PM

Share

ಬೆಳಗಾವಿ: ಕಾಂಗ್ರೆಸ್ ಸರ್ಕಾರ (Congress Government) ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ವರ್ಗಾವಣೆ ದಂಧೆ ವಿಚಾರಕ್ಕೆ ಸರ್ಕಾರದಲ್ಲಿ ಪೈಪೋಟಿ ನಡಿತಿದೆ. ವರ್ಗಾವಣೆ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಇರುವುದರಿಂದ ಮೊನ್ನೆ ಶಾಸಕಾಂಗದ ಸಭೆ (CPL Meeting) ನಡೆಸಿದ್ದಾರೆ. ವರ್ಗಾವಣೆ ದಂಧೆಯಲ್ಲಿ ಬಾರ್ಗೆನಿಂಗ್ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ಮಾಡಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪೊಲೀಸರಿಂದ ದಿವ್ಯಾಂಗನ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು ಖಂಡನೀಯ ಎಂದರು.

ಪೊಲೀಸ್ ಅಧಿಕಾರಿಗಳಿಂದ ಅಮಾಯಕರ ಮೇಲೆ ಹಲ್ಲೆ ಆಗುತ್ತಿದೆ. ಸಾಮಾನ್ಯ ಜನರ ಮೇಲೆ ಹಲ್ಲೆ, ಮಹಿಳೆಯರ ಮೇಲೆ ಹಲ್ಲೆ ಆಗುತ್ತಿದೆ. ಸಮಾಜಘಾತುಕ ಶಕ್ತಿಗಳಿಗೆ ಈ ಸರ್ಕಾರವೇ ಬೆಂಬಲ ನೀಡುತ್ತಿದೆ. ಪೊಲೀಸ್ ಅಧಿಕಾರಿಗಳ ಕೊಲೆ ಆಗುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ, ಸರ್ಕಾರ ವಿಫಲವಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೇ ಜನರು ಸರ್ಕಾರದ ವಿರುದ್ಧ ದಂಗೆ ಏಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಹೊರತುಪಡಿಸಿ ಎಲ್ಲರೂ ಇದ್ದರು!

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿಯಾಗಿದೆ. 11 ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ಇದೆ. ಉಳಿದ ಕಡೆ ಬರದ ಛಾಯೆ ಮೂಡಿದೆ. ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಬಿಟ್ಟರೆ ಪರಿಹಾರ ಕಾರ್ಯಕ್ಕೆ ಮುಂದಾಗಿಲ್ಲ. ಮನೆ ಹಾನಿಯಾದರೇ ತಕ್ಷಣ 10 ಸಾವಿರ ರೂ. ಪರಿಹಾರ ಕೊಡಬೇಕು. ನಾವು ಅಧಿಕಾರದಲ್ಲಿದ್ದಾಗ ನೆರೆಪೀಡಿತರಿಗೆ ನೆರವು ನೀಡಿದ್ದೇವೆ. ಎಸ್​ಡಿಆರ್​ಎಫ್​ ಪರಿಹಾರ ಜತೆಗೆ ಸರ್ಕಾರದಿಂದಲೂ ಪರಿಹಾರ ನೀಡಿದ್ದೇವೆ. ಅದೇ ಮಾನದಂಡ ಅನುಸರಿಸಿ ರೈತರಿಗೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

ಬೆಳೆ ಹಾನಿ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆ ಕೂಡ ಮಾಡಿಲ್ಲ. ಯಾವ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಸಚಿವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಎಲ್ಲ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ. ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಜಿಲ್ಲಾವಾರು ಸಭೆ ಮಾಡುತ್ತೇವೆ. ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆಗಲಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್