ಅಪಘಾತ: ಗಾಯಾಳುಗಳನ್ನ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಾಜಿ MLA
ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೂ ಮೊಬೈಲ್ನಲ್ಲಿ ತಲ್ಲೀನರಾಗಿರುವವರೇ ಹೆಚ್ಚಾಗಿರ್ತಾರೆ. ಈ ಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ತನ್ನದೇ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿ ಖಾನಾಪುರದ ಮಾಜಿ ಶಾಸಕ ಅರವಿಂದ ಪಾಟೀಲ್ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹೆಬ್ಬಾಳ ಬಳಿ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿತ್ತು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ತಕ್ಷಣ ಸ್ಥಳಕ್ಕಾಗಮಿಸಿದ ಅರವಿಂದ ಪಾಟೀಲ್, ಗಾಯಾಳುಗಳನ್ನು ತನ್ನದೇ ಕಾರಿನಲ್ಲಿ ಕರೆದೊಯ್ದು ಖಾನಾಪುರ ಸರ್ಕಾರಿ ಆಸ್ಪತ್ರೆಗೆ […]
ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೂ ಮೊಬೈಲ್ನಲ್ಲಿ ತಲ್ಲೀನರಾಗಿರುವವರೇ ಹೆಚ್ಚಾಗಿರ್ತಾರೆ. ಈ ಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ತನ್ನದೇ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿ ಖಾನಾಪುರದ ಮಾಜಿ ಶಾಸಕ ಅರವಿಂದ ಪಾಟೀಲ್ ಮಾನವೀಯತೆ ಮೆರೆದಿದ್ದಾರೆ.
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹೆಬ್ಬಾಳ ಬಳಿ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿತ್ತು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ತಕ್ಷಣ ಸ್ಥಳಕ್ಕಾಗಮಿಸಿದ ಅರವಿಂದ ಪಾಟೀಲ್, ಗಾಯಾಳುಗಳನ್ನು ತನ್ನದೇ ಕಾರಿನಲ್ಲಿ ಕರೆದೊಯ್ದು ಖಾನಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.