ಬೆಳಗಾವಿಯಲ್ಲಿ ಮಾಜಿ ಶಾಸಕ ಪುತ್ರನ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು
ಬೆಳಗಾವಿ-ಬೈಲಹೊಂಗಲ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದೆ. ಕೀಯಾ ಕಾರು ಅಲ್ಟೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಲ್ಟೋ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮತ್ತೊಂದು ಮಗುವಿಗೆ ಗಂಭೀರ ಗಾಯಗಳಾಗಿದ್ದು, ಕೀಯಾ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬೈಲಹೊಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳಗಾವಿ, ಮೇ 05: ಬೈಲಹೊಂಗಲ (Bailhongal) ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದ ಬೈಲಹೊಂಗಲ-ಬೆಳಗಾವಿಗೆ (Belagavi) ಸಂಪರ್ಕಿಸುವ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಅನೀಸ್ ಸೈಯದ್, ಪತ್ನಿ ಅಯಿಮನ್ ಅನಿಸ್ ಸೈಯದ್, ಮಗ ಅಯಿಮನ್ ಮೃತ ದುರ್ದೈವಿಗಳು. ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕೀಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಗಡೆ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ.
ಕೀಯಾ ಕಾರು ಚಲಾಯಿಸುತ್ತಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಸುಭಾಷ್ ಪಾಟೀಲ್ (52) ಗಂಭೀರ ಗಾಯವಾಗಿದೆ. ಇನ್ನು ಸುಭಾಷ್ ಪಾಟೀಲ್ ಪುತ್ರನಿಗೂ ಗಾಯವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಶವಗಳು ಸ್ಥಳೀಯ ಆಸ್ಪತ್ರೆಗೆ ಪೊಲೀಸರು ರವಾನಿಸಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಪಘಾತ, ಬೈಕ್ ಸವಾರ ಸಾವು
ಹಾವೇರಿ: ಹಾವೇರಿ ತಾಲೂಕಿನ ಗೌರಾಪುರ ಗ್ರಾಮದ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾನಗಲ್ ತಾಲೂಕಿನ ವರ್ದಿ ಗ್ರಾಮದ ನಿವಾಸಿ ಗಾಯಗೊಂಡಿದ್ದಾನೆ. ನಾಗರಾಜ್ ಪವಾಡಿ (35) ಮೃತ ಬೈಕ್ ಸವಾರ. ಹೊಸ ಬೈಕ್ ಖರೀದಿಸಿ ಊರಿಗೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹಿಂದೂ ಮುಖಂಡನ ಕಾರು ಅಪಘಾತ
ಚಿಕ್ಕಮಗಳೂರು: ಶಂಕರ್ ಫಾಲ್ಸ್ ಬಳಿ ಹಿಂದೂ ಮುಖಂಡ ರಘು ಸಕಲೇಶಪುರ ಕಾರು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ರಘು ಸಕಲೇಶಪುರಗೆ ಗಂಭೀರ ಗಾಯವಾಗಿದ್ದು, ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶೃಂಗೇರಿ ಬಂದ್ ಹಿನ್ನೆಲೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ತಂದೆಯ ಕೊಲೆ ಪ್ರತೀಕಾರಕ್ಕಾಗಿ ಮಾವನನ್ನು ಕೊಂದ ಪುತ್ರ
ಚಲಿಸುತ್ತಿದ್ದ ಬೈಕ್ ಗೆ ಅಡ್ಡ ಬಂದ ಕಾಡು ಹಂದಿ
ಮೈಸೂರು: ಅಡ್ಡ ಬಂದ ಕಾಡು ಹಂದಿಗೆ ಬೈಕ್ ಗುದ್ದಿರುವ ಘಟನೆ ನಂಜನಗೂಡು ತಾಲೂಕಿನ ನೇರಳೆ ಗೇಟ್ ಬಳಿ ನಡೆದಿದೆ. ಬೈಕ್ ಸವಾರ ಗಾಯಗೊಂಡಿದ್ದು, ಕಾಡು ಹಂದಿ ಸ್ಥಳದಲ್ಲೇ ಮೃತಪಟ್ಟಿದೆ. ಬೈಕ್ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಕವಲಂದೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:54 pm, Mon, 5 May 25