Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವು

ಪ್ರವಾಸಕ್ಕೆಂದು ದುಬೈನ ಓಮಾನ್​ಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ್​ ನಗರದ ಕುಟುಂಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿದೆ. ಶವಗಳನ್ನು ಭಾರತಕ್ಕೆ ತರಲು ಅನುಕೂಲ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.

ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವು
ಮೃತರು, ಅಪಘಾತ ಬಳಿಕ ಹೊತ್ತಿ ಉರಿದ ಲಾರಿ, ಕಾರು
Follow us
Sahadev Mane
| Updated By: ವಿವೇಕ ಬಿರಾದಾರ

Updated on:Aug 30, 2024 | 1:23 PM

ಬೆಳಗಾವಿ, ಆಗಸ್ಟ್​​ 30: ದುಬೈನ (Dubai) ಓಮಾನ್​ನಲ್ಲಿ (Oman) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕಾಕ್ (Gokak) ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತರು. ಕುಟುಂಬ ದುಬೈನ ಓಮಾನ್​ಗೆ ಪ್ರವಾಸಕ್ಕೆ ತೆರಳಿತ್ತು.

ಹೈಮಾ ಎಂಬ ಪ್ರದೇಶದಲ್ಲಿ ಕುಟುಂಬ ತೆರಳುತ್ತುದ್ದ ಕಾರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಅನುಕೂಲ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.

ಶಾಲಾ‌ ವಾಹನ, ಕಾರು ಮತ್ತು ಕ್ಯಾಂಟರ್ ನಡುವೆ ಸರಣಿ ಅಪಘಾತ

ಮಂಡ್ಯ: ಶಾಲಾ‌ ವಾಹನ, ಕಾರು ಮತ್ತು ಕ್ಯಾಂಟರ್ ನಡುವೆ ಸರಣಿ ಅಪಘಾತ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಗ್ರಾಮದ ಬಳಿ ಘಟನೆ ನಡೆದಿದೆ. ಕಾರು ಮತ್ತು ಶಾಲಾ ವಾಹನದಲ್ಲಿದ್ದವರಿಗೆ ಗಾಯಗಳಾಗಿವೆ. ಕೂದಲೆಳೆ ಅಂತರದಲ್ಲಿ ಭಾರಿ ದುರಂತ ತಪ್ಪಿದೆ. ಶಾಲಾ ವಾಹನದಲ್ಲಿದ್ದ ಶಿಕ್ಷಕಿಯರಿಗೆ ಸಣ್ಣಪುಟ್ಟ ಗಾಯವಾಗಿದೆ. ಕಾರಿನಲ್ಲಿದ್ದ‌ ಓರ್ವ ವ್ಯಕ್ತಿಯ ತಲೆಗೆ ಪೆಟ್ಟಾಗಿದೆ. ರಸ್ತೆ ಕಿರಿದಾಗಿದ್ದೆ ಅಪಘಾತಕ್ಕೆ ಸಂಭವಿಸಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:14 pm, Fri, 30 August 24