ಬೆಳಗಾವಿ: ಹಾಸ್ಟೆಲ್ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿರುವ ವಸತಿ ನಿಲಯದಲ್ಲಿ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ಶಾಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಈ ಪೈಕಿ 10 ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೂ ನಾಲ್ವರು ವಿದ್ಯಾರ್ಥಿನಿಯರನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ಸದ್ಯ ಘಟನೆ ಬಳಿಕ ಹಾಸ್ಟೆಲ್ನಲ್ಲಿ ಊಟದ ಅವ್ಯವಸ್ಥೆ ಬಗ್ಗೆ ತಿಳಿದು ಬಂದಿದ್ದು ಹಾಸ್ಟೆಲ್‌ನಲ್ಲಿ ಊಟ ಸರಿಯಾಗಿ ಕೊಡಲ್ಲ ಎಂದು ವಿದ್ಯಾರ್ಥಿನಿಯರ ಆರೋಪ ಮಾಡಿದ್ದಾರೆ. ಆದ್ರೆ ಹಾಸ್ಟೆಲ್ ಸಿಬ್ಬಂದಿ ಆರೋಪವನ್ನು ತಳ್ಳಿ ಹಾಕಿದ್ದಾರೆ. 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಊಟ ಸೇವಿಸಿದ್ದಾರೆ. ಕೇವಲ 14 ವಿದ್ಯಾರ್ಥಿನಿಯರು ಮಾತ್ರ ಅಸ್ವಸ್ಥಗೊಂಡಿದ್ದಾರೆ. ಉಳಿದ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿಲ್ಲ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರು ಆಚೆ ಏನೋ ತಿಂದುಕೊಂಡು ಬಂದಿರಬೇಕು ಹೀಗಾಗಿ ಈ ರೀತಿ ಆಗಿದೆ ಎಂದು ಹಾಸ್ಟೆಲ್ ಸಿಬ್ಬಂದಿ ತಿಳಿಸಿದ್ದಾರೆ.
Published On - 1:30 pm, Wed, 9 February 22