AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಿಡ್ಜ್‌ ಸ್ಫೋಟದಿಂದ ನಾಲ್ವರು ಸಾವು ಕೇಸ್​​: ಚಿಕಿತ್ಸೆ ಫಲಿಸದೆ ತಂದೆ, ಮಗ ಸಾವು; ಫಲಿಸದ ಕುಟುಂಬಸ್ಥರ ಪ್ರಾರ್ಥನೆ

ಬೆಳಗಾವಿಯ ಚವ್ಹಾಟ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಫ್ರಿಡ್ಜ್ ಸ್ಫೋಟಗೊಂಡು ದಮೋನೆ ಕುಟುಂಬದ ಆರು ಸದಸ್ಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 14ರಂದು ನಡೆದ ಈ ದುರಂತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ತಂದೆ ಮತ್ತು ಮಗ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಫ್ರಿಡ್ಜ್‌ ಸ್ಫೋಟದಿಂದ ನಾಲ್ವರು ಸಾವು ಕೇಸ್​​: ಚಿಕಿತ್ಸೆ ಫಲಿಸದೆ ತಂದೆ, ಮಗ ಸಾವು; ಫಲಿಸದ ಕುಟುಂಬಸ್ಥರ ಪ್ರಾರ್ಥನೆ
ಮೃತ ತಂದೆ, ಮಗImage Credit source: tv9 kannada
ಸಹದೇವ್​ ಮಾನೆ
| Edited By: |

Updated on: Sep 16, 2026 | 7:31 PM

Share

ಬೆಳಗಾವಿ, ಸೆಪ್ಟೆಂಬರ್​​ 16: ಬೆಳಗಾವಿಯಲ್ಲಿ ಫ್ರಿಡ್ಜ್‌ ಸ್ಫೋಟದಿಂದ ನಾಲ್ವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಮತ್ತು ಮಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಗಜಾನನ ದಮೋನೆ (61) ಮತ್ತು ರೋಷನ್ ದಮೋನೆ(21) ಮೃತರು. ಘಟನೆಯಲ್ಲಿ ಒಟ್ಟು 6 ಜನರು ಮೃತಪಟ್ಟಿದ್ದಾರೆ. ಆ ಮೂಲಕ ಪ್ರಕರಣದಲ್ಲಿ ಇಡೀ ಕುಟುಂಬವೇ‌ ದುರಂತ ಅಂತ್ಯ ಕಂಡಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿಸದ ಪ್ರಾರ್ಥನೆ; ತಂದೆ, ಮಗ ಸಾವು 

ಇನ್ನು ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಂದೆ, ಮಗನನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದರು. ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದರು. ಇಬ್ಬರು ಬದುಕಿ ಬರಲಿ ಎಂದು ಕುಟುಂಬಸ್ಥರು ಪ್ರಾರ್ಥನೆ ಮಾಡುತ್ತಿದ್ದರು. ಆದರೆ ಅವರ ಪ್ರಾರ್ಥನೆಗೆ ಫಲ ದೊರೆತಿಲ್ಲ. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ತಂದೆ ಮತ್ತು ಮಗ ಸಹ ಕೊನೆಯುಸಿರೆಳೆದಿದ್ದಾರೆ.

ಗಣೇಶ ಹಬ್ಬದಂದೇ ನಡೆದಿತ್ತು ಘನಘೋರ ದುರಂತ

ಸೆಪ್ಟೆಂಬರ್ 14ರ ಸೋಮವಾರ ರಾತ್ರಿ ಗಣೇಶೋತ್ಸವ ಹಬ್ಬದ ಸಂಭ್ರಮದ ನಡುವೆಯೇ ಬೆಳಗಾವಿ ನಗರದ ಚವ್ಹಾಟ ಗಲ್ಲಿಯ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಏಕಾಏಕಿ ಫ್ರಿಡ್ಜ್ ಸ್ಫೋಟಗೊಂಡಿತ್ತು. ಈ ಭೀಕರ ಅವಘಡದಲ್ಲಿ ಒಂದೇ ಕುಟುಂಬದ ಶಾರದಾ, ಪ್ರಿಯಾ  ಗಂಗಾ ಹಾಗೂ ಭಾರತಿ ದಮೋನೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಸಂಭ್ರಮ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಬೆಳಗಾವಿ: ಗಣೇಶ ಚತುರ್ಥಿ ದಿನವೇ ಭೀಕರ ಅಗ್ನಿ ಅವಘಡ, ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗಣೇಶ ಪ್ರತಿಷ್ಠಾಪಿಸಿ  ರಾತ್ರಿ ಊಟ ಮಾಡಿ ಸಂಭ್ರಮಿಸಿ ನಿದ್ರೆಗೆ ಜಾರಿದ್ದ ಕುಟುಂಬಸ್ಥರು ಬೆಳಗಾಗುವಷ್ಟರಲ್ಲಿ ಸುಟ್ಟ ಭಸ್ಮವಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಸೆಡ್‌ನಲ್ಲಿ ವಾಸವಿದ್ದ ದಮೋನೆ ಕುಟುಂಬದ ನಾಲ್ವರು ಅಗ್ನಿ ಅವಘಡಕ್ಕೆ ಉಸಿರು ಚೆಲ್ಲಿದ್ದರು. ಶಾರ್ಟ್ ಸರ್ಕ್ಯೂಟ್, ಫ್ರಿಡ್ಜ್‌ ಸ್ಫೋಟಗೊಂಡು ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿತ್ತು.

ಇದನ್ನೂ ಓದಿ: ಗಣೇಶ ಹಬ್ಬದ ಬೆನ್ನಲ್ಲೇ ಸೂತಕದ ಛಾಯೆ: ಕರ್ನಾಟಕದ ವಿವಿಧೆಡೆ ಪ್ರತ್ಯೇಕ ಅವಘಡಗಳಲ್ಲಿ 12 ಮಂದಿ ಸಾವು

ಬೆಂಕಿಯ ಕೆನ್ನಾಲೆಗೆ ಸಿಲುಕಿದ ಎಲ್ಲರೂ ಕೂಗಾಡಿದ್ದಾರೆ. ತಕ್ಷಣವೇ ಎದ್ದು ಬಂದ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಗಜಾನನ ದಮೋನೆ ಹಾಗೂ ರೋಷನ್ ದಮೋನೆ (21) ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಬೆಂಕಿ‌ ನಂದಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!