ಬೆಳಗಾವಿ: ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವೆ ಗಡಿ ವಿವಾದ Karnataka-Maharashtra Border Dispute: ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ(Belagavi) ಒಂದೊಂದು ಬೆಳವಣಿಗೆಯಿಂದಲೂ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಿದೆ. ಗಡಿ ಗಲಾಟೆಯಿಂದ ಬೆಳಗಾವಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ಮಧ್ಯೆ ಮಹಾರಾಷ್ಟ್ರ ಸಚಿವರು ಡಿಸೆಂಬರ್ 06ರಂದು ಬೆಳಗಾವಿಗೆ ಬರಲು ಸಿದ್ಧರಾಗಿ ನಿಂತಿದ್ದಾರೆ. ಇದರಿಂದ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಳಗಾವಿಯಲ್ಲಿ ಬಿಗಿ ಬಂದೋಬಸ್ತ್ಗಾಗಿ ಪೊಲೀಸ್ (police security)ಪಡೆಯನ್ನು ನಿಯೋಜಿಸಲಾಗಿದೆ.
ವಿರೋಧದ ನಡುವೆಯೂ ಡಿಸೆಂಬರ್ 6ರಂದು ಮಹಾರಾಷ್ಟ್ರ ಸಚಿವರು ಬೆಳಗಾವಿ ಭೇಟಿಗೆ ಸಿದ್ಧರಾಗಿದ್ದಾರೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 21 ಕಡೆ ಚೆಕ್ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ಕೊಗನೋಳ್ಳಿ ಚೆಕ್ಪೋಸ್ಟ್ನಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ನಾವು ಯಾವುದೇ ಸಂಘರ್ಷ ಮಾಡಲು ಬೆಳಗಾವಿಗೆ ಬರುತ್ತಿಲ್ಲ, ಡಿಸೆಂಬರ್ 6ರಂದು ಹೋಗಿಯೇ ತೀರುತ್ತೇವೆ -ಗಡಿ ಸಚಿವ ಚಂದ್ರಕಾಂತ ಪಾಟೀಲ್
ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟ್ ಒಂದರಲ್ಲೇ 5 ಡಿಆರ್ ತುಕಡಿ ಸೇರಿ 450ಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಪುಣೆ ರಸ್ತೆಯಲ್ಲಿ ಸಹ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು,ಎಸ್‌ಪಿ ಡಾ.ಸಂಜೀವ ಪಾಟೀಲ್ ನೇತೃತ್ವದಲ್ಲಿ 1 ಹೆಚ್ಚುವರಿ ಎಸ್‌ಪಿ, 3 ಜನ ಡಿವೈಎಸ್‌ಪಿ, 8ಜನ ಪಿಐ, 30 ಪಿಎಸ್‌ಐ ನಿಯೋಜಿಸಲಾಗಿದೆ.
ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರನ್ನು ಬೆಳಗಾವಿ ಪ್ರವೇಶಕ್ಕೆ ಅವಕಾಶಕ್ಕೆ ಕೊಡಬಾರದು ಎಂದು ಕನ್ನಡ ಪರ ಸಂಘಟನೆಗಳು ಆಗ್ರಹಿವಾಗಿದೆ. ಒಂದೇ ವೇಳೆ ಸರ್ಕಾರ ಅವರಿಗೆ ಅವಕಾಶ ಮಾಡಿಕೊಟ್ಟರೆ ನಾವೇ ಖುದ್ದು ತಡೆಯುತ್ತೇವೆ ಎಂದು ಎಚ್ಚರಿಕೆ ನೀಡಿವೆ. ಇದರಿಂದ ಬೆಳಗಾವಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದು, ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಎಂಟ್ರಿಯಾಗುವ ಪ್ರತಿಯೊಂದು ಮಾರ್ಗದಲ್ಲೂ ಸಹ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನೀಡಬೇಡಿ, ಅವರನ್ನು ಬಂಧಿಸಿ: ಕರವೇ ನಾರಾಯಣ ಗೌಡ ಮನವಿ
ಡಿ.6ರಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವದ್ವಯರ ಭೇಟಿ ವಿಚಾರಕ್ಕೆ ಸಂಬಂಧಿಸಿ ಡಿಸೆಂಬರ್ 6ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ ಎಂದು ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕಕ್ಕೆ ಭೇಟಿ ನೀಡದಂತೆ ಸಂದೇಶ ರವಾನಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ತಿಳಿಸಿದ್ದರು. ಆದ್ರೆ ಸಿಎಂ ಪತ್ರಕ್ಕೂ ಕ್ಯಾರೆ ಎನ್ನದೆ ಸಚಿವ ಚಂದ್ರಕಾಂತ ಪಾಟೀಲ್ ಮೊಂಡುತನ ಮುಂದುವರೆಸಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 6:31 pm, Mon, 5 December 22