Ganesh Chaturthi; ಗಣೇಶ ಚತುರ್ಥಿ ಹಬ್ಬಕ್ಕೆ ಸಿದ್ಧತೆ ಜೋರು; ಬೆಳಗಾವಿಯ ಮಾರುಕಟ್ಟೆಯಲ್ಲಿ ಭರ್ಜರಿ ವಹಿವಾಟು

ಬೆಳಗಾವಿ ನಗರದ ನಿವಾಸಿಗಳಲ್ಲದೆ, ಜಿಲ್ಲೆಯ ವಿವಿಧ ಭಾಗಗಳಿಂದ ಮತ್ತು ನೆರೆಯ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಜನರು ಸರಕುಗಳನ್ನು ಖರೀದಿಸಲು ನಗರದ ಮಾರುಕಟ್ಟೆಗೆ ಭೇಟಿ ನೀಡುತ್ತಾರೆ. ಹಬ್ಬ ಹರಿದಿನಗಳ ವಿವಿಧ ಅಲಂಕಾರಿಕ ವಸ್ತುಗಳು ಮತ್ತು ವಿದ್ಯುತ್ ಉಪಕರಣಗಳು ಗ್ರಾಹಕರನ್ನು ಆಕರ್ಷಿಸುತ್ತವೆ.

Ganesh Chaturthi; ಗಣೇಶ ಚತುರ್ಥಿ ಹಬ್ಬಕ್ಕೆ ಸಿದ್ಧತೆ ಜೋರು; ಬೆಳಗಾವಿಯ ಮಾರುಕಟ್ಟೆಯಲ್ಲಿ ಭರ್ಜರಿ ವಹಿವಾಟು
ಗಣೇಶ ಮೂರ್ತಿ
Follow us
Ganapathi Sharma
|

Updated on: Sep 13, 2023 | 9:50 PM

ಬೆಳಗಾವಿ, ಸೆಪ್ಟೆಂಬರ್ 13: ಗಣೇಶೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಬೆಳಗಾವಿ (Belagavi) ಗಣೇಶೋತ್ಸವವು (Ganesh Chaturthi 2023) ಕರ್ನಾಟಕದಲ್ಲಿ ಪ್ರಸಿದ್ಧವಾಗಿದೆ. ಆಕರ್ಷಕ ವಿನ್ಯಾಸದ ಮಂಟಪಗಳು, ಅಲಂಕಾರಿಕ ವಸ್ತುಗಳು ಮತ್ತು ಅಲಂಕಾರಿಕ ಉಪಕರಣಗಳೊಂದಿಗೆ 11 ದಿನಗಳ ಉತ್ಸವಕ್ಕೆ ನಗರದ ಮಾರುಕಟ್ಟೆಯು ಸಜ್ಜಾಗಿದೆ. ಸಂಪ್ರದಾಯದಂತೆ ಗಣೇಶನನ್ನು ಸ್ವಾಗತಿಸಲು ಸಿದ್ಧತೆಗಳು ಆರಂಭವಾಗಿವೆ. ಗಣೇಶೋತ್ಸವಕ್ಕೆ ಬೇಕಾದ ಮಂಟಪಗಳು, ಅಲಂಕಾರಿಕ ವಸ್ತುಗಳು, ವಿದ್ಯುತ್ ಉಪಕರಣಗಳು ಮಾರುಕಟ್ಟೆಯಲ್ಲಿ ಪ್ರದರ್ಶನ ಮತ್ತು ಮಾರಾಟಕ್ಕೆ ಲಭ್ಯವಿವೆ. ಖಡೇ ಬಜಾರ್, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ಬಾಪಟ್ ಗಲ್ಲಿ, ಪಾಂಗುಲ್ ಗಲ್ಲಿ, ಬುರುಡ ಗಲ್ಲಿ, ಕಂಬಳಿ ಖೂಟ್ ಮತ್ತಿತರ ಪ್ರದೇಶಗಳು ಗಣೇಶೋತ್ಸವದ ಸಡಗರದಿಂದ ಕಂಗೊಳಿಸುತ್ತಿವೆ. ಹಬ್ಬದ ಶಾಪಿಂಗ್ ಕಾರಣ ನಗರದ ಮಾರುಕಟ್ಟೆಯಲ್ಲಿ ಜನಸಂದಣಿ ಮತ್ತು ವಾಹನ ದಟ್ಟಣೆಗೆ ಕಾರಣವಾಗುತ್ತಿದೆ.

ಬೆಳಗಾವಿ ನಗರದ ನಿವಾಸಿಗಳಲ್ಲದೆ, ಜಿಲ್ಲೆಯ ವಿವಿಧ ಭಾಗಗಳಿಂದ ಮತ್ತು ನೆರೆಯ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಜನರು ಸರಕುಗಳನ್ನು ಖರೀದಿಸಲು ನಗರದ ಮಾರುಕಟ್ಟೆಗೆ ಭೇಟಿ ನೀಡುತ್ತಾರೆ. ಹಬ್ಬ ಹರಿದಿನಗಳ ವಿವಿಧ ಅಲಂಕಾರಿಕ ವಸ್ತುಗಳು ಮತ್ತು ವಿದ್ಯುತ್ ಉಪಕರಣಗಳು ಗ್ರಾಹಕರನ್ನು ಆಕರ್ಷಿಸುತ್ತವೆ. ರೆಡಿಮೇಡ್ ಮಂಟಪಗಳು ಅಥವಾ ಮಂಟಪಗಳು ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಲಭ್ಯವಿದೆ. ಸುಮಾರು 2,000 ರೂ.ನಿಂದ 8,000 ರೂ.ವರೆಗಿನ ಬೆಲೆಯಲ್ಲಿ ಲಭ್ಯವಿರುವ ಗಣೇಶ ಮಂಟಪಗಳು ಗ್ರಾಹಕರನ್ನು ಸೆಳೆಯುತ್ತಿವೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಮಂಟಪಗಳನ್ನು ಸಿದ್ಧಪಡಿಸಲು ಯಾರಿಗೂ ಸಮಯವಿಲ್ಲ. ಹಾಗಾಗಿ ರೆಡಿಮೇಡ್‌ಗೆ ಭಾರಿ ಬೇಡಿಕೆ ಇದೆ. ಥರ್ಮಾಕೋಲ್ ಬಳಸಿ ಮಾಡಿದ ಮಂಟಪಗಳು ಹೆಚ್ಚು ಜನಪ್ರಿಯವಾಗಿವೆ. ಅವರು ಸೊಲ್ಲಾಪುರ, ಕೊಲ್ಲಾಪುರ, ಮೀರಜ್ ಮತ್ತು ಮಹಾರಾಷ್ಟ್ರದ ಇತರ ಭಾಗಗಳಿಂದ ಬೆಳಗಾವಿ ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ ಎಂದು ಕಡೋಲ್ಕರ್ ಗಲ್ಲಿಯ ಮಂಟಪ ಮಾರಾಟಗಾರ ಮಹದೇವ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಬಾಪಟ್ ಗಲ್ಲಿಯು ಎಲೆಕ್ಟ್ರಿಕ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಅತ್ಯುತ್ತಮ ಮಾರುಕಟ್ಟೆ ಎಂದು ಹೆಸರುವಾಸಿಯಾಗಿದೆ. ಈ ಪ್ರದೇಶವು ಈಗ ಮಾರುತಿ ಗಲ್ಲಿ ಮತ್ತು ಪಂಗುಲ್ ಗಲ್ಲಿಯೊಂದಿಗೆ ಅಲಂಕಾರಿಕ ವಸ್ತುಗಳಿಂದ ತುಂಬಿದೆ.

ಇದನ್ನೂ ಓದಿ: Ganesha Chaturthi 2023: ಗೌರಿಪುತ್ರನಿಗೆ  ಪ್ರಿಯವಾದ ಹಣ್ಣುಗಳಾವುವು? ಇದರಿಂದ ಆರೋಗ್ಯ ಪ್ರಯೋಜನಗಳೇನು? 

ಬೆಳಗಾವಿ ನಗರದಲ್ಲಿ 400ಕ್ಕೂ ಹೆಚ್ಚು ಹಾಗೂ ಜಿಲ್ಲೆಯಾದ್ಯಂತ 5,300ಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುವುದು. ಶಾಂತಿ ಸೌಹಾರ್ದತೆಯೊಂದಿಗೆ ಗಣೇಶ ಹಬ್ಬವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸಲು ಪೊಲೀಸ್ ಇಲಾಖೆಯು ಗ್ರಾಮ/ಪಟ್ಟಣಕ್ಕೆ ಒಂದೊಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತೆ ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ಸ್ಥಳೀಯಾಡಳಿತ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಗಣೇಶೋತ್ಸವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಈಗಿರುವ ಸಿಬ್ಬಂದಿಯನ್ನೇ ಬಳಸಿಕೊಂಡು ಎಲ್ಲ ಸಾರ್ವಜನಿಕ ಗಣೇಶೋತ್ಸವ ಸಮಾರಂಭಗಳಿಗೆ ಭದ್ರತೆ ಒದಗಿಸುವುದು ಇಲಾಖೆಗೆ ಸವಾಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ