AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಬಳಿ ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ: ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ‌, ಬದಲಿ ರಸ್ತೆ ಹೀಗಿದೆ

ಧಾರವಾಡ ಬಳಿ ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿದ್ದು, ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ‌ಗೊಳಿಸಲಾಗಿದೆ. ಬದಲಿ 4 ಮಾರ್ಗದಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪೊಲೀಸ್​ ವರಿಷ್ಠಾಧಿಕಾರಿ ಡಾ.ಸಂಜೀವ್​​ ಪಾಟೀಲ್ ಮಾಹಿತಿ ನೀಡಿದ್ದಾರೆ. ಬದಲಿ ಮಾರ್ಗಗಳ ವಿವರ ಇಲ್ಲಿದೆ.

ಧಾರವಾಡ ಬಳಿ ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ: ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ‌, ಬದಲಿ ರಸ್ತೆ ಹೀಗಿದೆ
ಎಲ್‌ಪಿಜಿ ಟ್ಯಾಂಕರ್‌
Sahadev Mane
| Updated By: Ganapathi Sharma|

Updated on:Aug 16, 2023 | 10:36 PM

Share

ಬೆಳಗಾವಿ, ಆಗಸ್ಟ್​ 16: ಧಾರವಾಡ ಬಳಿ ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿದ್ದು  (Gas leak)  ಪರಿಣಾಮವಾಗಿ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ‌ಗೊಳಿಸಲಾಗಿದೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಕುರಿತಾಗಿ ಬೆಳಗಾವಿ ಪೊಲೀಸ್​ ವರಿಷ್ಠಾಧಿಕಾರಿ ಡಾ.ಸಂಜೀವ್​​ ಪಾಟೀಲ್ ಮಾಹಿತಿ ನೀಡಿದ್ದು, ಒಟ್ಟು 4 ಪರ್ಯಾಯ ಮಾರ್ಗಗಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವ ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿ ನೀಡಲಾಗಿದೆ.

ಮಾರ್ಗ ಬದಲಾವಣೆ ಈ ಕೆಳಗಿನಂತಿದೆ

  • ಬೆಳಗಾವಿಯಿಂದ ಕಿತ್ತೂರು-ತಡಕೋಡ-ಧಾರವಾಡ-ಹುಬ್ಬಳ್ಳಿಗೆ ಸಂಚಾರ
  • ಹಿರೇಬಾಗೇವಾಡಿ-ಬೈಲಹೊಂಗಲ ತಡಕೋಡ-ಧಾರವಾಡ ಮೂಲಕ ಸಂಚಾರ
  • ಸಂಕೇಶ್ವರ-ಹುಕ್ಕೇರಿ ಘಟಪ್ರಭಾ-ಗೋಕಾಕ್-ಧಾರವಾಡ ಮಾರ್ಗದಲ್ಲಿ ಸಂಚಾರ
  • ನಿಪ್ಪಾಣಿ-ಹುಕ್ಕೇರಿ-ಘಟಪ್ರಭಾ ಗೋಕಾಕ್-ಸವದತ್ತಿ ಮೂಲಕ ಸಂಚಾರ
  • ಬೆಳಗಾವಿ ಕಡೆಯಿಂದ ಪರ್ಯಾಯ ಮಾರ್ಗ ಬಳಸಿ ಧಾರವಾಡಕ್ಕೆ ಸಂಚರಿಸಬಹುದಾಗಿದೆ.

ಇದನ್ನೂ ಓದಿ: ಅಧಿಕಾರದ ಬೆನ್ನೇರಿ ಬಾಂಬೆ ಟೀಮ್​ನ 17 ಶಾಸಕರು ಮತ್ತೆ ಕಾಂಗ್ರೆಸ್​​ ಕದ ತಟ್ಟುತ್ತಾರಾ? ಮುಖ್ಯವಾಗಿ ಮುನಿರತ್ನ ಏನಂದರು?

ಧಾರವಾಡ ಹೈಕೋರ್ಟ್​ ಬಳಿ ಅಂಡರ್​ಪಾಸ್​ನಲ್ಲಿ ಸಿಲುಕಿದ ಹೆಚ್​ಪಿ ಕಂಪನಿಗೆ ಸೇರಿದ ಟ್ಯಾಂಕರ್​ನಿಂದ ಗ್ಯಾಸ್ ಸೋರಿಕೆ ಆಗಿದೆ. ಬೆಳಗಾವಿಯಿಂದ ಧಾರವಾಡಕ್ಕೆ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಗರಗ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗುತ್ತಿದೆ.

ಗ್ಯಾಸ್ ಸೋರಿಕೆ ತಡೆಯುವುದು ಸುಲಭದ ಮಾತಲ್ಲ ಎಂದ ತಜ್ಞರು

ಗ್ಯಾಸ್​ ಟ್ಯಾಂಕರ್​ ಬಳಿ ಯಾರೂ ಹೋಗದಂತೆ ಪೊಲೀಸರು ನಿರ್ಬಂಧಿಸಿದ್ದಾರೆ. ಟ್ಯಾಂಕರ್​ನಿಂದ ಗ್ಯಾಸ್​ ಸಂಪೂರ್ಣ ಹೊರಹೋಗುವವರೆಗೆ ಕಾಯಲಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಿಲೋ ಮೀಟರ್​ವರೆಗೆ  ವಾಹನಗಳು ಸಾಲುಗಟ್ಟಿ ನಿಂತಿವೆ. ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಗೂ ಮುನ್ನ ಬಾಕಿ ಯೋಜನೆಗಳಿಗೆ ಅನುಮತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಮನವಿ

ಗ್ಯಾಸ್ ಸೋರಿಕೆ ತಡೆಯಲು ಹೆಚ್​ಪಿ ಕಂಪನಿ ತಾಂತ್ರಿಕ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ. ಬೆಂಗಳೂರು, ಮಂಗಳೂರಿನಿಂದ ಧಾರವಾಡಕ್ಕೆ ತಜ್ಞರು ಆಗಮಿಸಬೇಕಿದೆ. ಸದ್ಯ ಗ್ಯಾಸ್ ಸೋರಿಕೆ ತಡೆಯುವುದು ಸುಲಭದ ಮಾತಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:59 pm, Wed, 16 August 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ