AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಆಣೆ ಪ್ರಮಾಣ ಮಾಡಿಸಿಕೊಂಡು ಗಿಫ್ಟ್ ಪಾಲಿಟಿಕ್ಸ್; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಧನಂಜಯ ಜಾಧವ್ ವಾಗ್ದಾಳಿ

ಬೆಳಗಾವಿಯಲ್ಲಿ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿ ಮಿಕ್ಸರ್ ಗ್ರೈಂಡರ್ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ, ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಆಣೆ ಪ್ರಮಾಣ ಮಾಡಿಸಿಕೊಂಡು ಗಿಫ್ಟ್ ಪಾಲಿಟಿಕ್ಸ್; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಧನಂಜಯ ಜಾಧವ್ ವಾಗ್ದಾಳಿ
ಬಿಜೆಪಿ ಮುಖಂಡ ಧನಂಜಯ ಜಾಧವ್
TV9 Web
| Edited By: ಆಯೇಷಾ ಬಾನು|

Updated on: Jan 09, 2023 | 8:42 AM

Share

ಬೆಳಗಾವಿ: ಮುಂಬರುವ ವಿಧಾನ ಸಭಾ ಚುನಾವಣೆಗೆ(Karnataka Assembly Elections 2023) ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ಶುರು ಮಾಡಿವೆ. ತಮ್ಮ ಮತದಾರರನ್ನು ಸೆಳೆಯಲು ಹೊಸ ಹೊಸ ಆಫರ್​ಗಳ ಮೊರೆ ಹೋಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್(Gift Politics) ಬಗ್ಗೆ ಸುದ್ದಿಯಾಗಿತ್ತು. ಆದ್ರೆ ಈಗ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ವಿರುದ್ಧ ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿ ಮಿಕ್ಸರ್ ಗ್ರೈಂಡರ್ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ, ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ. ನಿಜವಾದ ಅಭಿವೃದ್ಧಿ ಮಾಡಿದ್ರೆ ಆಣೆ ಪ್ರಮಾಣ ಏಕೆ ಮಾಡಿಸ್ತಿದ್ರಿ? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚೇಲಾಗಳು ಪ್ರತಿ ಮನೆಗೆ ತೆರಳಿ ಆಣೆ ಮಾಡಿಸುತ್ತಿದ್ದಾರೆ. ಇದಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನರು ವಿರೋಧ ಮಾಡುತ್ತಿದ್ದಾರೆ. ನಮಗೆ ವೋಟ್ ಹಾಕಬೇಕು ಅಂತಾ ಆಣೆ ಮಾಡಿಸುತ್ತಿದ್ದಾರೆ. ಈ ರೀತಿಯ ನೀಚ ರಾಜಕಾರಣ ವಿರೋಧ ಮಾಡುತ್ತಿದ್ದೇನೆ. ಇನ್ನೂರು ರೂ. ವಸ್ತು ನೀಡಿ ವೋಟ್ ಹಾಕಬೇಕೆಂದು ಆಣೆ ಮಾಡಿಸುತ್ತಿದ್ದೀರಾ? ಥೂ ಇಂತಹ ರಾಜಕಾರಣಕ್ಕೆ ಎಂದು ಧನಂಜಯ ಜಾಧವ್ ಕಿಡಿಕಾರಿದ್ದಾರೆ.

ಮತದಾರರ ಬಳಿ ಆಣೆ ಪ್ರಮಾಣ, ಗಿಫ್ಟ್​ ಪಾಲಿಟಿಕ್ಸ್​

ಮತದಾರರನ್ನು ಓಲೈಸಿಕೊಳ್ಳಲು ಚುನಾವಣೆಗೂ ಮುನ್ನವೇ ಕಾಂಗ್ರೆಸ್​ ಗಿಫ್ಟ್​ ಪಾಲಿಟಿಕ್ಸ್​ ಮೊರೆ ಹೋಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​​ ಬೆಂಬಲಿಗರು ಮತದಾರರಿಗೆ ಕುಕ್ಕರ್​, ಗ್ರೈಂಡರ್ ಹಂಚಿಕೆ ಮಾಡುತ್ತಿದ್ದಾರೆ. ಅಲ್ಲದೆ ಗಿಫ್ಟ್ ನೀಡುವ ಮುನ್ನ ಆಣೆ ಮಾಡಿಸಿಕೊಳ್ಳುತ್ತಿದ್ದಾರೆ. ತೆಂಗಿನಕಾಯಿ ಮೇಲೆ ಆಣೆ ಮಾಡಿಸಿಕೊಂಡು ಗಿಫ್ಟ್ ಹಂಚಲಾಗುತ್ತಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ಕೆಲಕಡೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಸ್ವಾಭಿಮಾನ ಬಹಳ ಮುಖ್ಯ, ನಿಮ್ಮ ಗಿಫ್ಟ್​ ಬೇಡಾ ತೆಗೆದುಕೊಂಡು ಹೋಗಿ ಎಂದು ವಾಪಾಸ್ ಕಳುಹಿಸುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ